ಸಿಎಂ ಮಮತಾ ಬ್ಯಾನರ್ಜಿ ಆರೋಪ ಆಧಾರ ರಹಿತ; ದೂರನ್ನು ತಳ್ಳಿಹಾಕಿದ ಚುನಾವಣಾ ಆಯೋಗ

West Bengal Assembly Elections 2021: ಅಲ್ಲದೇ, ಇಂತಹ ಆರೋಪ ಮಾಡಿದ್ದಕ್ಕಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ಸಿಎಂ ಮಮತಾ ಬ್ಯಾನರ್ಜಿ ಆರೋಪ ಆಧಾರ ರಹಿತ; ದೂರನ್ನು ತಳ್ಳಿಹಾಕಿದ ಚುನಾವಣಾ ಆಯೋಗ
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
Follow us
guruganesh bhat
| Updated By: ganapathi bhat

Updated on: Apr 04, 2021 | 7:17 PM

ಕೊಲ್ಕತ್ತಾ: ‘ನೀವು ಚುನಾವಣಾ ಆಯೋಗದ ಮೇಲೆ ಮಾಡಿದ ಆರೋಪಗಳು ವಾಸ್ತವಿಕವಾಗಿ ದೋಷಪೂರಿತವಾಗಿವೆ. ಪ್ರಾಯೋಗಿಕವಾಗಿ ಯಾವುದೇ ಪುರಾವೆ ಇಲ್ಲದೇ ಆರೋಪ ಮಾಡಿದ್ದೀರಿ’ ಎಂದು ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಖಾರ ಉತ್ತರ ನೀಡಿದೆ. ಅಲ್ಲದೇ, ಇಂತಹ ಆರೋಪ ಮಾಡಿದ್ದಕ್ಕಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ವೇಳೆ ನಂದಿಗ್ರಾಮ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮತದಾನ ಮಾಡಲು ಅಡ್ಡಿಪಡಿಸಲಾಗಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗವನ್ನು ಆರೋಪಿಸಿ ಕೈಬರಹದ ಪತ್ರ ಬರೆದಿದ್ದರು.

ಪಶ್ಚಿಮ ಬಂಗಾಳಕ್ಕೆ ಎಂಟು ಹಂತಗಳ ಸುದೀರ್ಘಾವಧಿಯ ಚುನಾವಣೆಯನ್ನು ಘೋಷಿಸಿದ ಸಮಯದಿಂದಲೂ ಚುನಾವಣಾ ಆಯೋಗದ ಮಮತಾ ಬ್ಯಾನರ್ಜಿ ಮೇಲೆ ಕೋಪಿಸಿಕೊಂಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಸ್ತಕ್ಷೇತ್ರ ಚುನಾವಣಾ ಆಯೋಗದ ಪ್ರಕ್ರಿಯೆಗಳಲ್ಲಿ ಕಂಡುಬರುತ್ತಿದೆ ಎಂದು ಅವರು ಆಪಾದಿಸಿದ್ದರು. ಈ ಕುರಿತು ಚುನಾವಣಾ ಆಯೋಗ ಸ್ಪಷ್ಟೀಕರಣ ನೀಡಿ, ಅವರ ದೀದಿ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿತ್ತು.

ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ. ಬಿಜೆಪಿ ಮತಗಟ್ಟೆಗಳನ್ನು ವಶಕ್ಕೆ ಪಡೆದಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದರು.

ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ನಡೆಯುವಾಗ ಸ್ಥಳೀಯ ಮತಗಟ್ಟೆಯೊಂದಕ್ಕೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್​​ನ ಕಾರ್ಯಕರ್ತರ ನಡುವೆ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿತ್ತು. ಝಡ್ ಪ್ಲಸ್ ಸುರಕ್ಷತೆ ಹೊಂದಿದ್ದರೂ ಸಹ ಪರಿಸ್ಥಿತಿ ಕೈಮೀರಿ ಸಿಎಂ ಮಮತಾ ಬ್ಯಾನರ್ಜಿ ಈ ವೇಳೆ ಕೊಠಡಿಯೊಂದರಲ್ಲಿ ಎರಡು ಗಂಟೆಗಳ ಕಾಲ ಸಿಲುಕಿದ್ದರು. ನಂತರ ಭದ್ರತಾ ಸಿಬ್ಬಂದಿ ಅವರನ್ನು ರಕ್ಷಿಸಿದ್ದರು. ಈ ಘಟನೆಯ ನಂತರ ಚುನಾವಣಾ ಪ್ರಕ್ರಿಯೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆಯೋಗ ವಿಫಲವಾಗಿದೆ ಎಂದು ದೂರಿದ್ದರು. ತೃಣಮೂಲ ಕಾಂಗ್ರೆಸ್​ನ ಪೋಲಿಂಗ್ ಏಜೆಂಟ್​ರನ್ನು ಮತಗಟ್ಟೆಯ ಒಳಗೆ ಬಿಡುತ್ತಿಲ್ಲ ಎಂದು ದೂರಿದ್ದರು.

ಇದನ್ನೂ ಓದಿ: ಟಿವಿ9 ವಿಶೇಷ: ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆ 2021 – ಬಂಗಾಳ ಗದ್ದುಗೆ ಯಾರಿಗೆ?

ವ್ಯಕ್ತಿ-ವ್ಯಕ್ತಿತ್ವ: ಬಡತನದಲ್ಲಿ ನೊಂದಿದ್ದ ಮಮತಾ ಬ್ಯಾನರ್ಜಿಗೆ ಹೋರಾಟದ ರಾಜಕೀಯ ರಕ್ತಗತ, ಇಲ್ಲಿದೆ ಮಮತಾ ದೀದಿ ಬದುಕು ಸಾಗಿ ಬಂದ ಹಾದಿ

West Bengal Election 2021 Opinion Poll: ಪಶ್ಚಿಮ ಬಂಗಾಳದಲ್ಲಿ Tv9 ಚುನಾವಣಾ ಪೂರ್ವ ಸಮೀಕ್ಷೆ, ಮಮತಾ ಮುಂದೆ

(Election Commission slams CM Mamata Banerjee on her Nandigram claims factually incorrect)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ