AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Jharkhand Assembly Elections: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕ ಇಂದು ಪ್ರಕಟ

ಭಾರತೀಯ ಚುನಾವಣಾ ಆಯೋಗವು ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಮಧ್ಯಾಹ್ನ 3.30 ಕ್ಕೆ ಪ್ರಕಟಿಸಲಿದೆ. ಛತ್ ಮತ್ತು ದೀಪಾವಳಿ ಸೇರಿದಂತೆ ಹಲವಾರು ಹಬ್ಬಗಳಿರುವ ಕಾರಣ ಚುನಾವಣಾ ಸಮಿತಿಯು ನವೆಂಬರ್ ಎರಡನೇ ವಾರದಲ್ಲಿ ಮತದಾನವನ್ನು ನಿಗದಿಪಡಿಸುವ ಸಾಧ್ಯತೆಯಿದೆ.

Maharashtra Jharkhand Assembly Elections: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕ ಇಂದು ಪ್ರಕಟ
ಇಸಿಐ
Follow us
ರಶ್ಮಿ ಕಲ್ಲಕಟ್ಟ
|

Updated on:Oct 15, 2024 | 10:28 AM

ದೆಹಲಿ ಅಕ್ಟೋಬರ್ 15: ಇಂದು (ಮಂಗಳವಾರ) ಮಧ್ಯಾಹ್ನ 3.30 ಕ್ಕೆ ಮಹಾರಾಷ್ಟ್ರ (Maharashtra) ಮತ್ತು ಜಾರ್ಖಂಡ್ (Jharkhand)ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ECI) ಪ್ರಕಟಿಸಲಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಿಂದ ಕೂಡಿದ ಆಡಳಿತಾರೂಢ ಮಹಾಯುತಿ ಒಕ್ಕೂಟವು ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ವಿರುದ್ಧ ಸ್ಪರ್ಧಿಸಲಿದೆ.

ಜಾರ್ಖಂಡ್‌ನಲ್ಲಿ, ಇಂಡಿಯಾ ಬ್ಲಾಕ್‌ನ ಭಾಗವಾಗಿರುವ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (ಎಜೆಎಸ್‌ಯು), ಜನತಾ ದಳ (ಯುನೈಟೆಡ್) ಮತ್ತು ಬಿಜೆಪಿಯನ್ನು ಒಳಗೊಂಡಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ವಿರುದ್ಧ ಸ್ಪರ್ಧಿಸಲಿದೆ.

ಬಿಜೆಪಿ ತನ್ನ ಕೇಂದ್ರ ಚುನಾವಣಾ ಸಮಿತಿಯಿಂದ (CEC) ಅನುಮತಿ ಪಡೆದ ನಂತರ ಮುಂದಿನ ಎರಡು ದಿನಗಳಲ್ಲಿ 60 ಕ್ಕೂ ಹೆಚ್ಚು ಹೆಸರುಗಳೊಂದಿಗೆ ಮಹಾರಾಷ್ಟ್ರ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ನವದೆಹಲಿಯಲ್ಲಿ ಪಕ್ಷದ ಮಹಾರಾಷ್ಟ್ರ ಘಟಕದ ಪ್ರಮುಖ ನಾಯಕರು ಮತ್ತು ಎರಡು ರಾಜ್ಯ ಚುನಾವಣಾ ಉಸ್ತುವಾರಿಗಳಾದ ಭೂಪೇಂದರ್ ಯಾದವ್ ಮತ್ತು ಅಶ್ವಿನಿ ವೈಷ್ಣವ್ ಅವರೊಂದಿಗೆ ಮ್ಯಾರಥಾನ್ ಸಭೆ ನಡೆಸಿದ್ದಾರೆ.

ಪಕ್ಷದ ಮಹಾರಾಷ್ಟ್ರ ಘಟಕವು ಸಿಇಸಿಗೆ ಆಯ್ಕೆ ಮಾಡಲು ಹಾಲಿ ಶಾಸಕರು ಸೇರಿದಂತೆ ಸುಮಾರು 100 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಏತನ್ಮಧ್ಯೆ, ಕಾಂಗ್ರೆಸ್ ಪಕ್ಷವು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಸಭೆಯನ್ನು ಕರೆದಿದೆ. ಮಹಾ ವಿಕಾಸ್ ಅಘಾಡಿ (ಎಂವಿಎ) ಮತ್ತು ಚುನಾವಣಾ ಖಾತರಿಗಳಲ್ಲಿ ಮಿತ್ರಪಕ್ಷಗಳೊಂದಿಗೆ ಸೀಟು ಹಂಚಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದೆ.

ಇದನ್ನೂ ಓದಿ: ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ: ಹಂತಕರ ಪತ್ತೆಗೆ ದೇಶದಾದ್ಯಂತ ಬಲೆ ಬೀಸಿದ ಪೊಲೀಸ್

ಇತ್ತೀಚಿನ ಹರ್ಯಾಣ ಚುನಾವಣೆಯಲ್ಲಿ ಸೋಲಿಗೆ ಕಾರಣವಾದ ತಪ್ಪುಗಳನ್ನು ತಪ್ಪಿಸುವ ಗುರಿಯನ್ನು ಪಕ್ಷ ಹೊಂದಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ದೆಹಲಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ, ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ ವಾಡೆತ್ತಿವಾರ್ ಮತ್ತು ಹಿರಿಯ ನಾಯಕ ಬಾಳಾಸಾಹೇಬ್ ಥೋರಟ್ ಉಪಸ್ಥಿತರಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:26 am, Tue, 15 October 24

ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ