ಚುನಾವಣೆ ನಡೆಯಲಿರುವ ಪಂಚರಾಜ್ಯಗಳಲ್ಲಿ ಸಾರ್ವಜನಿಕ ಸಭೆಗೆ ವಿಧಿಸಲಾಗಿದ್ದ ನಿರ್ಬಂಧ ಅವಧಿ ವಿಸ್ತರಣೆ ಸಾಧ್ಯತೆ

ಜನವರಿ 8ರಂದು ಸುದ್ದಿಗೋಷ್ಠಿ ನಡೆಸಿ, ಪಂಚರಾಜ್ಯಗಳ ಚುನಾವಣಾ ದಿನಾಂಕ, ವೇಳಾಪಟ್ಟಿಗಳನ್ನು ಪ್ರಕಟಿಸಿದ್ದ ಚುನಾವಣಾ ಆಯೋಗ ಸುಮಾರು 16 ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಸಾರ್ವಜನಿಕ ರ್ಯಾಲಿಗಳು, ರೋಡ್​ಶೋಗಳಿಗೆ ಜನವರಿ 15ರವರೆಗೆ ನಿರ್ಬಂಧ ಹೇರಿತ್ತು.

ಚುನಾವಣೆ ನಡೆಯಲಿರುವ ಪಂಚರಾಜ್ಯಗಳಲ್ಲಿ ಸಾರ್ವಜನಿಕ ಸಭೆಗೆ ವಿಧಿಸಲಾಗಿದ್ದ ನಿರ್ಬಂಧ ಅವಧಿ ವಿಸ್ತರಣೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Jan 15, 2022 | 10:46 AM

ಫೆಬ್ರವರಿ 10ರಿಂದ ಐದು ರಾಜ್ಯಗಳಾದ ಗೋವಾ, ಮಣಿಪುರ, ಉತ್ತರಪ್ರದೇಶ, ಉತ್ತರಾಖಂಡ್​, ಪಂಜಾಬ್​ ರಾಜ್ಯಗಳ ವಿಧಾನಸಭಾ ಚುನಾವಣೆ(5 States Assembly Elections) ನಡೆಯಲಿದ್ದು, ಇನ್ನೊಂದೆಡೆ ಕೊರೊನಾ ವೈರಸ್ ಸೋಂಕಿನ ಪ್ರಕರಣವೂ ಮಿತಿಮೀರುತ್ತಿದೆ. ಹೀಗಾಗಿ ಚುನಾವಣಾ ಸಾರ್ವನಿಕ ಪ್ರಚಾರ, ರ್ಯಾಲಿಗಳು, ರೋಡ್​ಶೋಗಳು, ಪ್ರಚಾರಸಭೆಗಳಿಗೆ ವಿಧಿಸಿದ್ದ ನಿರ್ಬಂಧದ ಅವಧಿಯನ್ನು ವಿಸ್ತರಿಸಲು ಚುನಾವಣಾ ಆಯೋಗ (Election Commission) ನಿರ್ಧರಿಸಿದೆ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಚುನಾವಣಾ ಆಯೋಗದ ಮುಖ್ಯ ಆಯುಕ್ತರು, ಕೊರೊನಾ ಮಿತಿಮೀರುತ್ತಿರುವ ಕಾರಣ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಜನವರಿ 15ರವರೆಗೂ ಯಾವುದೇ ರೀತಿಯ ರ್ಯಾಲಿಗಳು, ಸಾರ್ವಜನಿಕ ಸಭೆಗಳನ್ನು ನಡೆಸುವಂತಿಲ್ಲ ಎಂದು ಹೇಳಿದ್ದರು. ಸದ್ಯ ದೇಶದಲ್ಲಿ ಕೊರೊನಾ ಮತ್ತು ಒಮಿಕ್ರಾನ್​ ಕೇಸ್​ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಇಂದು ಅಧಿಕೃತ ಘೋಷಣೆ ಮಾಡಲಿದೆ ಎನ್ನಲಾಗಿದೆ.

ಜನವರಿ 8ರಂದು ಸುದ್ದಿಗೋಷ್ಠಿ ನಡೆಸಿ, ಪಂಚರಾಜ್ಯಗಳ ಚುನಾವಣಾ ದಿನಾಂಕ, ವೇಳಾಪಟ್ಟಿಗಳನ್ನು ಪ್ರಕಟಿಸಿದ್ದ ಚುನಾವಣಾ ಆಯೋಗ ಸುಮಾರು 16 ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಸಾರ್ವಜನಿಕ ರ್ಯಾಲಿಗಳು, ರೋಡ್​ಶೋಗಳಿಗೆ ಜನವರಿ 15ರವರೆಗೆ ನಿರ್ಬಂಧ ಹೇರಿದ್ದಲ್ಲದೆ, ಮನೆಮನೆ ಪ್ರಚಾರಕ್ಕೆ ಜನಮಿತಿ ಹೇರಿತ್ತು. ಅಷ್ಟೇ ಅಲ್ಲ, ಮತಎಣಿಕೆ ಮುಗಿದ ಬಳಿಕ ವಿಜಯೋತ್ಸವ ಆಚರಣೆಗೂ ನಿರ್ಬಂಧ ವಿಧಿಸಿದೆ. ಇನ್ನು ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ ಚುನಾವಣಾ ಆಯೋಗ, ಇದೀಗ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಪರಿಣಾಮ, ರಾಜಕೀಯ ಪಕ್ಷಗಳು ಜನರನ್ನು ಸಂಪರ್ಕಿಸದೆ ಪ್ರಚಾರ ನಡೆಸಲು ಅನುಕೂಲ ಮಾಡಿಕೊಡಲಾಗುವುದು. ಹೀಗಾಗಿ ಪ್ರಸಾರ ಭಾರತಿ ಕಾರ್ಪೋರೇಶನ್​ ಜತೆಗೆ ಮಾತುಕತೆ ನಡೆಸಲಾಗಿದೆ, ರಾಷ್ಟ್ರೀಯ ರಾಜಕೀಯ ಪಕ್ಷಗಳು ಮತ್ತು ಪ್ರಮುಖ ರಾಜಕೀಯ ಪಕ್ಷಗಳ ವರ್ಚ್ಯುವಲ್​ ಸಭೆಯ ಪ್ರಸಾರ ಸಮಯವನ್ನು ದ್ವಿಗುಣಗೊಳಸಲು ಮನವಿ ಮಾಡಲಾಗಿದೆ ಎಂದೂ ಹೇಳಿದೆ.

ಅಂದಹಾಗೆ ಫೆ.10ರಿಂದ ಪಂಚರಾಜ್ಯಗಳ ಚುನಾವಣೆ ನಡೆಯಲಿದೆ. ಅದರಲ್ಲಿ ಉತ್ತರಪ್ರದೇಶದಲ್ಲಿ ಏಳು ಹಂತದಲ್ಲಿ ಮತ್ತು ಮಣಿಪುರದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಉಳಿದ ಗೋವಾ, ಉತ್ತರಾಖಂಡ್​, ಪಂಜಾಬ್​​ಗಳಲ್ಲಿ ಒಂದೇ ಹಂತದಲ್ಲಿ, ಫೆಬ್ರವರಿ 14ರಂದು ಮತದಾನ ನಡೆಯಲಿದೆ. ಎಲ್ಲ ರಾಜ್ಯಗಳ ಚುನಾವಣಾ ಫಲಿತಾಂಶ ಮಾರ್ಚ್​ 10ರಂದು ಹೊರ ಬೀಳಲಿದೆ. ಇನ್ನೊಂದೆಡೆ ದೇಶದಲ್ಲಿ ಪ್ರತಿದಿನ ಪತ್ತೆಯಾಗುವ ಕೊರೊನಾ ಸೋಂಕಿನ ಸಂಖ್ಯೆ 2 ಲಕ್ಷದ ಗಡಿ ದಾಟುತ್ತಿದೆ.

ಇದನ್ನೂ ಓದಿ: ಕೊವಿಡ್ 19 ರೋಗಿಗಳ ಚಿಕಿತ್ಸೆ ವಿಚಾರದಲ್ಲಿ ಮತ್ತೆ ಎಡವಬೇಡಿ; ಬ್ಲ್ಯಾಕ್ ಫಂಗಸ್​ ಭೀಕರತೆ ನೆನಪಿಸಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಆರೋಗ್ಯ ತಜ್ಞರು

Published On - 9:35 am, Sat, 15 January 22

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು