ಕೆಲವೇ ತಿಂಗಳಲ್ಲಿ 5ರಾಜ್ಯಗಳ ವಿಧಾನಸಭಾ ಚುನಾವಣೆ; ಇಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿಯೊಂದಿಗೆ ಚುನಾವಣಾ ಆಯೋಗದ ಸಭೆ

ದೇಶದಲ್ಲಿ ಕೊವಿಡ್​ 19 ಪರಿಸ್ಥಿತಿ ಗಂಭೀರವಾಗುತ್ತಿದೆ. ಹೀಗಾಗಿ ಉತ್ತರಪ್ರದೇಶದ ಚುನಾವಣೆಯನ್ನು ಇನ್ನು 2 ಅಥವಾ 3ತಿಂಗಳವರೆಗೆ ಮುಂದೂಡಿ ಎಂದು ಅಲಹಾಬಾದ್​ ಹೈಕೋರ್ಟ್​ ಚುನಾವಣಾ ಆಯೋಗಕ್ಕೆ ಹೇಳಿತ್ತು.

ಕೆಲವೇ ತಿಂಗಳಲ್ಲಿ 5ರಾಜ್ಯಗಳ ವಿಧಾನಸಭಾ ಚುನಾವಣೆ; ಇಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿಯೊಂದಿಗೆ ಚುನಾವಣಾ ಆಯೋಗದ ಸಭೆ
ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್​
Follow us
TV9 Web
| Updated By: Lakshmi Hegde

Updated on: Dec 27, 2021 | 8:01 AM

2022ರ ಪ್ರಾರಂಭದಲ್ಲಿ 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ (Assembly Polls) ನಡೆಯಲಿದೆ. ಆದರೆ ದೇಶದಲ್ಲಿ ಕೊರೊನಾ, ಒಮಿಕ್ರಾನ್​ ಆತಂಕ (Omicron Variant) ಶುರುವಾಗಿದೆ. ಹೀಗಾಗಿ ದೇಶದ ಕೊವಿಡ್​ 19 ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ಇಂದು ಭಾರತೀಯ ಚುನಾವಣಾ ಆಯೋಗ, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್​ ಮತ್ತು ಇತರ ಆರೋಗ್ಯಾಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಲಿದೆ. ಅಷ್ಟೇ ಅಲ್ಲ, ಚುನಾವಣಾ ಪ್ರಚಾರ, ಚುನಾವಣೆ ದಿನ ಮತ್ತು ಮತ ಎಣಿಕೆ ದಿನಗಳಂದು  ತೆಗೆದುಕೊಳ್ಳಬಹುದಾದ ಕೊವಿಡ್​ 19 ನಿಯಂತ್ರಣಕಾ ಕ್ರಮಗಳಿಗೆ ಸಂಬಂಧಪಟ್ಟಂತೆ ಸಲಹೆಯನ್ನೂ ಚುನಾವಣಾ ಆಯೋಗದ ಸಿಬ್ಬಂದಿ, ರಾಜೇಶ್​ ಭೂಷಣ್​​ ಬಳಿ ಕೇಳಲಿದ್ದಾರೆ. 

2022ರ ಮಾರ್ಚ್​ ತಿಂಗಳಲ್ಲಿ ಗೋವಾ, ಪಂಜಾಬ್​, ಉತ್ತರಾಖಂಡ್​ ಮತ್ತು ಮಣಿಪುರ ವಿಧಾನಸಭೆಗಳ ಅವಧಿ ಮಾರ್ಚ್​ ಅಂತ್ಯದ ಹೊತ್ತಿಗೆ ಮುಗಿಯಲಿದ್ದು, ಉತ್ತರಪ್ರದೇಶ ವಿಧಾನಸಭೆ ಅವಧಿ ಮೇ ತಿಂಗಳಲ್ಲಿ ಮುಕ್ತಾಯಗೊಳ್ಳುವುದು. ಹೀಗಾಗಿ ಈ ಐದು ರಾಜ್ಯಗಳಿಗೆ ಫೆಬ್ರವರಿ-ಮಾರ್ಚ್​ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು. ಚುನಾವಣಾ ದಿನಾಂಕವನ್ನು ಜನವರಿಯಲ್ಲಿ ಚುನಾವಣಾ ಆಯೋಗ ಘೋಷಣೆ ಮಾಡಲಿದೆ.

ದೇಶದಲ್ಲಿ ಕೊವಿಡ್​ 19 ಪರಿಸ್ಥಿತಿ ಗಂಭೀರವಾಗುತ್ತಿದೆ. ಹೀಗಾಗಿ ಉತ್ತರಪ್ರದೇಶದ ಚುನಾವಣೆಯನ್ನು ಇನ್ನು 2 ಅಥವಾ 3ತಿಂಗಳವರೆಗೆ ಮುಂದೂಡಿ ಎಂದು ಅಲಹಾಬಾದ್​ ಹೈಕೋರ್ಟ್​ ಚುನಾವಣಾ ಆಯೋಗಕ್ಕೆ ಹೇಳಿತ್ತು. ಅಷ್ಟೇ ಅಲ್ಲ, ಕೊವಿಡ್​ 19 ಎರಡನೇ ಅಲೆ ಸಂದರ್ಭದಲ್ಲಿ ಏನಾಯಿತು ಎಂದು ಎಲ್ಲರಿಗೂ ಗೊತ್ತು. ಈಗ ಸರಿಯಾಗಿ ಮುನ್ನೆಚ್ಚರಿಕೆ ತೆಗೆದುಕೊಳ್ಳದೆ ಇದ್ದರೆ, ಮತ್ತೊಮ್ಮೆ ಅಂಥ ಪರಿಸ್ಥಿತಿ ಎದುರಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದೆ. ಇನ್ನು ಪಂಜಾಬ್​, ಗೋವಾ, ಉತ್ತರಪ್ರದೇಶ, ಉತ್ತರಾಖಂಡ ಚುನಾವಣೆಗಳ ಸಿದ್ಧತೆಗಳು ಗರಿಗೆದರಿವೆ. ರಾಜಕೀಯ ಪಕ್ಷಗಳ ನಾಯಕರು ರಾಜ್ಯಕ್ಕೆ ಭೇಟಿ ನೀಡಿ, ಪ್ರಚಾರವನ್ನು ಶುರು ಮಾಡುತ್ತಿದ್ದಾರೆ. ಆದರೆ ಇದೀಗ ಹೊಸತಳಿ ಒಮಿಕ್ರಾನ್ ಆತಂಕ ಹೆಚ್ಚುತ್ತಿದೆ. ದೇಶದಲ್ಲಿ 4ಕ್ಕೂ ಹೆಚ್ಚು ಪ್ರಕರಣಗಳು ಕಾಣಿಸಿಕೊಂಡಿದ್ದು, ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಮಧ್ಯಪ್ರದೇಶ, ಆಸ್ಸಾಂ ಸೇರಿ ಕೆಲವು ರಾಜ್ಯಗಳು ಈಗಾಗಲೇ ನೈಟ್​ ಕರ್ಫ್ಯೂದಂಥ ನಿರ್ಬಂಧ ಹೇರಿಕೊಂಡಿವೆ.

ಇದನ್ನೂ ಓದಿ: ಇಂದು ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ; ವಿವಿಧ ಜಲವಿದ್ಯುತ್​ ಯೋಜನೆಗಳಿಗೆ ಶಂಕುಸ್ಥಾಪನೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್