SC on Election Commission: ಚುನಾವಣಾ ಆಯುಕ್ತರ ನೇಮಕಕ್ಕೆ ಹೊಸ ಸಮಿತಿಯನ್ನು ರಚಿಸಿದ ಸುಪ್ರೀಂಕೋರ್ಟ್​

|

Updated on: Mar 02, 2023 | 11:32 AM

ಚುನಾವಣಾ ಆಯುಕ್ತರ ನೇಮಕಕ್ಕೆ ಸುಪ್ರೀಂಕೋರ್ಟ್​ ಹೊಸ ಸಮಿತಿಯನ್ನು ರಚಿಸಿದೆ.

SC on Election Commission: ಚುನಾವಣಾ ಆಯುಕ್ತರ ನೇಮಕಕ್ಕೆ ಹೊಸ ಸಮಿತಿಯನ್ನು ರಚಿಸಿದ ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​
Follow us on

ಚುನಾವಣಾ ಆಯುಕ್ತರ ನೇಮಕಕ್ಕೆ ಸುಪ್ರೀಂಕೋರ್ಟ್​ ಹೊಸ ಸಮಿತಿಯನ್ನು ರಚಿಸಿದೆ. ಆ ಸಮಿತಿಯಲ್ಲಿ ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳು ಇರುತ್ತಾರೆ. ಚುನಾವಣಾ ಆಯುಕ್ತರು ಮತ್ತು ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿ ಸುಪ್ರೀಂ ಈ ತೀರ್ಪು ನೀಡಿದೆ.

ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಸಾಂವಿಧಾನಿಕ ಪೀಠವು ಈ ನೇಮಕಾತಿಗಳಿಗೆ ಸಂಸತ್ತು ಕಾನೂನು ರಚಿಸುವವರೆಗೆ ಈ ನಿಯಮವು ಮುಂದುವರಿಯುತ್ತದೆ ಎಂದು ಹೇಳಿದೆ.

5-0 ಸರ್ವಾನುಮತದ ತೀರ್ಪಿನಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರನ್ನು ತ್ರಿಸದಸ್ಯ ಸಮಿತಿಯ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಆಯ್ಕೆ ಮಾಡುತ್ತಾರೆ ಎಂದು ಹೇಳಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Thu, 2 March 23