AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ನೀಡಿರುವ ಸಲಹೆಯೇನು?

ಪ್ರಶಾಂತ್ ಕಿಶೋರ್ ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ನಾಯಕರ ಜೊತೆಗೆ ಸರಣಿ ಸಭೆಗಳನ್ನು ನಡೆಸಿ, ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೇಗೆ ಪುನಶ್ಚೇತನ ಮಾಡಬೇಕು ಎಂಬ ಪ್ರಸಂಟೇಷನ್, ಸಲಹೆ ನೀಡಿದ್ದಾರೆ. ಆ ವಿವರ ಇಲ್ಲಿದೆ...

ಭಾರತದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ನೀಡಿರುವ ಸಲಹೆಯೇನು?
ಪ್ರಶಾಂತ್ ಕಿಶೋರ್
S Chandramohan
| Edited By: |

Updated on: Apr 22, 2022 | 3:49 PM

Share

ನವದೆಹಲಿ: ಭಾರತದ ಖ್ಯಾತ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷ ಸೇರುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ಪುನರ್ಜನ್ಮ ನೀಡಲು ಅವರು ಈಗಾಗಲೇ ಪ್ರೆಸೆಂಟೇಷನ್ ನೀಡಿದ್ದಾರೆ. ಇಂದು ಕೂಡ ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಪ್ರಶಾಂತ್ ಕಿಶೋರ್ (Prashant Kishor) ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ನೀಡಲು ರೂಪಿಸಿರುವ ಪ್ಲ್ಯಾನ್ ಈಗ ಲೀಕ್ ಆಗಿದೆ. ಅದರ ವಿವರ ಇಲ್ಲಿದೆ…

ಚುನಾವಣಾ ರಣತಂತ್ರ ನಿಪುಣ ಪ್ರಶಾಂತ್ ಕಿಶೋರ್ ಸದ್ಯ ಕಾಂಗ್ರೆಸ್ ಪಕ್ಷದ ಬಾಗಿಲಲ್ಲಿ ಬಂದು ನಿಂತಿದ್ದಾರೆ. ಕಾಂಗ್ರೆಸ್ ಪಕ್ಷ ಸೇರಲು ಬಹುತೇಕ ಪ್ರಶಾಂತ್ ಕಿಶೋರ್ ಮನಸ್ಸು ಮಾಡಿದ್ದಾರೆ. ಪ್ರಶಾಂತ್ ಕಿಶೋರ್ ಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವ ಸ್ಥಾನಮಾನ ನೀಡಲಾಗುತ್ತದೆ, ಅವರ ಚುನಾವಣಾ ರಣತಂತ್ರದ ಪರಿಣತಿಯನ್ನು ಹೇಗೆ ಬಳಸಿಕೊಳ್ಳಲಾಗುತ್ತದೆ ಎಂಬುದಷ್ಟೇ ಬಹಿರಂಗವಾಗಬೇಕಾಗಿದೆ. ಪ್ರಶಾಂತ್ ಕಿಶೋರ್ ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ನಾಯಕರ ಜೊತೆಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ನಾಯಕರಿಗೆ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೇಗೆ ಪುನಶ್ಚೇತನ ಮಾಡಬೇಕು ಎಂಬ ಬಗ್ಗೆ ಸಾಕಷ್ಟು ಪ್ರಸಂಟೇಷನ್, ಸಲಹೆ ನೀಡಿದ್ದಾರೆ. ಪ್ರಶಾಂತ್ ಕಿಶೋರ್ ನೀಡಿದ ಪ್ರಸಂಟೇಷನ್ ಹಾಗೂ ಸಲಹೆಯ ವಿವರ ಈಗ ಲೀಕ್ ಆಗಿದೆ.

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷದಲ್ಲಿ ಚುನಾವಣಾ ಟಾಸ್ಕ್ ಪೋರ್ಸ್ ನೇತೃತ್ವ ವಹಿಸುವ ಉಪಾಧ್ಯಕ್ಷ ಹುದ್ದೆ ಸೃಷ್ಟಿಸಬೇಕೆಂದು ಸಲಹೆ ನೀಡಿದ್ದಾರೆ. ಚುನಾವಣಾ ಟಾಸ್ಕ್ ಪೋರ್ಸ್ ದೇಶಾದ್ಯಂತ ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿ ವಹಿಸುತ್ತದೆ. ಕಾಂಗ್ರೆಸ್ ಅಧ್ಯಕ್ಷರ ಕೈ ಕೆಳಗೆ ಉಪಾಧ್ಯಕ್ಷ ಕಮ್ ಚುನಾವಣಾ ಚುನಾವಣಾ ಟಾಸ್ಕ್ ಪೋರ್ಸ್ ಮುಖ್ಯಸ್ಥರು ಕೆಲಸ ಮಾಡುತ್ತಾರೆ. ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ನೆಹರು-ಗಾಂಧಿ ಪರಿವಾರವೇ ವಹಿಸಬೇಕು. ಆದರೆ, ಚುನಾವಣಾ ಟಾಸ್ಕ್ ಪೋರ್ಸ್ ಮುಖ್ಯಸ್ಥ ಕಮ್ ಉಪಾಧ್ಯಕ್ಷ ಹುದ್ದೆಯನ್ನು ನೆಹರು-ಗಾಂಧಿ ಕುಟುಂಬದ ಹೊರಗಿನವರಿಗೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಸಂಘಟನಾ ಪ್ರಧಾನ ಕಾರ್ಯದರ್ಶಿಗಳು, ಕಮ್ಯೂನಿಕೇಷನ್ ಮತ್ತು ಸಮನ್ವಯದ ಪ್ರಧಾನ ಕಾರ್ಯದರ್ಶಿಗಳು ನೇರವಾಗಿ ಚುನಾವಣಾ ಟಾಸ್ಕ್ ಪೋರ್ಸ್ ಮುಖ್ಯಸ್ಥರಿಗೆ ವರದಿ ಮಾಡಿಕೊಳ್ಳಬೇಕು. ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಯನ್ನ ಎದುರಿಸಲೆಂದು ಪ್ರತ್ಯೇಕ ಟೀಮ್ ನಿರ್ಮಾಣ ಮಾಡಿದಂತೆ ಆಗುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಕಾಂಗ್ರೆಸ್ ಪಾರ್ಲಿಮೆಂಟರಿ ಬೋರ್ಡ್ ಎಂಬುದನ್ನು ಸೃಷ್ಟಿಸಬೇಕು. ಈ ಬೇಡಿಕೆಯನ್ನು ಕಾಂಗ್ರೆಸ್ ಅಂತರಿಕ ಬಂಡಾಯಗಾರರಾದ ಜಿ-23 ಗುಂಪು ಕೂಡ ಮುಂದಿಟ್ಟಿದೆ. ಕಾಂಗ್ರೆಸ್ ಕಾರ್ಯಕರ್ತರಲ್ಲಿ ನಾಯಕತ್ವದ ಬಗ್ಗೆ ಗೊಂದಲ ಇದ್ದು, ಈ ನಾಯಕತ್ವ ಗೊಂದಲವನ್ನು ಆದಷ್ಟು ಬೇಗ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರಂತೆ.

ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ನಟರಾಜ ಮಾಡೆಲ್ ನಲ್ಲಿ ಪುನರ್ಜನ್ಮ ನೀಡುವ ಬಗ್ಗೆ ಪ್ರಶಾಂತ್ ಕಿಶೋರ್ ಪ್ರಸಂಟೇಷನ್ ನೀಡಿದ್ದಾರೆ. ನಟರಾಜ ಮಾಡೆಲ್ ಅಂದರೆ, ಸೃಷ್ಟಿ, ರಕ್ಷಣೆ, ಸ್ವಾತಂತ್ರ್ಯ, ನಾಶ, ಮರೆಮಾಚುವಿಕೆ, ಸಂಪರ್ಕದ ಆರು ಅಂಶಗಳ ಸ್ಪೂರ್ತಿಯ ಆಧಾರದ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ಪುನರ್ಜನ್ಮ ನೀಡಬೇಕೆಂದು ಹೇಳಿದ್ದಾರೆ. ಈ ಆರು ಸ್ಪೂರ್ತಿಯ ಅಂಶಗಳ ಆಧಾರದ ಮೇಲೆ ಜನರ ಆಯ್ಕೆಯಾಗುವ ಹೊಸ ಕಾಂಗ್ರೆಸ್ ಅನ್ನು ಸೃಷ್ಟಿಸಬೇಕು. ಕಾಂಗ್ರೆಸ್ ಪರಂಪರೆ, ಮೌಲ್ಯ, ಮೂಲ ತತ್ವಗಳನ್ನು ರಕ್ಷಿಸಬೇಕು. ಜಡತ್ವ, ಸಾಧಾರಣತ್ವ ಹಾಗೂ ಯಥಾಸ್ಥಿತಿಯಿಂದ ಕಾಂಗ್ರೆಸ್ ಸ್ವತಂತ್ರವಾಗಬೇಕು. ಕಾಂಗ್ರೆಸ್ ನಲ್ಲಿರುವ ಬದ್ದತೆಯ ಕೊರತೆಯನ್ನು ನಾಶ ಮಾಡಬೇಕು. ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರವನ್ನು ಹೋಗಲಾಡಿಸಬೇಕು. ತಳಮಟ್ಟದಲ್ಲಿ ಜನರೊಂದಿಗೆ ಸಂಪರ್ಕ ಬೆಳೆಸಿ ಅವರ ಧ್ವನಿಯಾಗಬೇಕು. ಅವರ ಆಕಾಂಕ್ಷೆಗಳನ್ನು ಈಡೇರಿಸಬೇಕು ಎಂದು ನಟರಾಜ ಮಾಡೆಲ್ ನಲ್ಲಿ ಕಾಂಗ್ರೆಸ್ ನಾಯಕರಿಗೆ ಪ್ರಶಾಂತ್ ಕಿಶೋರ್ ಪ್ರಸಂಟೇಷನ್ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಎರಡು ವಿಭಾಗಗಳನ್ನು ಸೃಷ್ಟಿಸಲು ಪ್ರಶಾಂತ್ ಕಿಶೋರ್ ಸಲಹೆ ನೀಡಿದ್ದಾರೆ. ಚುನಾವಣೆಗೆ ಸಂಬಂಧಿಸಿದಂತೆ ಒಂದು ವಿಭಾಗವನ್ನು ವಿಧಾನಸಭಾ ಕ್ಷೇತ್ರದ ಮಟ್ಟದವರೆಗೂ ಸೃಷ್ಟಿಸಬೇಕು. ಎರಡನೇಯದಾಗಿ ಸಂಘಟನೆಯ ವ್ಯವಸ್ಥೆಯನ್ನು ಸೃಷ್ಟಿಸಬೇಕು. 15 ಸಾವಿರ ತಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಪಡೆಯನ್ನು ಸೃಷ್ಟಿಸಬೇಕು. ಪಕ್ಷಕ್ಕಾಗಿ ದುಡಿಯುವ ಒಂದು ಕೋಟಿ ಕಾರ್ಯಕರ್ತರ ಪಡೆಯನ್ನು ಸೃಷ್ಟಿಸಬೇಕು ಎಂದು ಪ್ರಶಾಂತ್ ಕಿಶೋರ್ ಸಲಹೆ ನೀಡಿದ್ದಾರೆ.

ದೇಶದ 17 ರಾಜ್ಯಗಳ 358 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡಬೇಕು. 168 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ 5 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು. ಮಹಾರಾಷ್ಟ್ರ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಜಾರ್ಖಂಡ್, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಬೇಕು. ಈಶಾನ್ಯ ರಾಜ್ಯಗಳು ಹಾಗೂ ಜಮ್ಮು ಕಾಶ್ಮೀರದಲ್ಲಿ ಕೆಲ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂದು ಪ್ರಶಾಂತ್ ಕಿಶೋರ್ ಸಲಹೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷವು 30 ಕೋಟಿ ಮತದಾರರನ್ನು ಟಾರ್ಗೆಟ್ ಮಾಡಿ ಪಕ್ಷಕ್ಕೆ ಮತಗಳನ್ನು ಪಡೆಯಲು ಯತ್ನಿಸಬೇಕು. ಸಮಾಜದ ಎಂಟು ವರ್ಗದ ಮತದಾರರ ಮೇಲೆ ಹೆಚ್ಚು ಒತ್ತು ನೀಡಬೇಕು. ಎಸ್ಸಿ, ಎಸ್ಟಿ, ಭೂ ರಹಿತರು, ನಗರದ ಬಡವರು, ಮಧ್ಯಮ ವರ್ಗ, ಮಹಿಳೆಯರು, ರೈತರು, ಯುವಜನತೆಯನ್ನು ಟಾರ್ಗೆಟ್ ಮಾಡಿ ಮತಗಳನ್ನು ಸೆಳೆಯಬೇಕು ಎಂದು ಸಲಹೆ ನೀಡಿದ್ದಾರೆ. ತಳ್ಳಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಸಂದೇಶ, ಭರವಸೆಗಳನ್ನು ತಲುಪಿಸುವ ಮೂಲಕ ಈ 8 ವರ್ಗದ ಮತಗಳನ್ನು ಸೆಳೆಯಬೇಕೆಂದು ಪ್ರಶಾಂತ್ ಕಿಶೋರ್ ಸಲಹೆ ನೀಡಿದ್ದಾರೆ.

ಪ್ರಧಾನಿ ಮೋದಿ ವೈಫಲ್ಯವನ್ನ ವ್ಯವಸ್ಥಿತವಾಗಿ ಜನರಿಗೆ ತಿಳಿಸಬೇಕು. ಸಮಸ್ಯೆಗಳಿಗೆ ಕಾಂಗ್ರೆಸ್ ಪಕ್ಷವೇ ಪರಿಹಾರ ಎಂಬುದನ್ನು ಜನರ ಮನಸ್ಸಿನಲ್ಲಿ ಬಿತ್ತಬೇಕು. ರಾಹುಲ್ ಗಾಂಧಿ ನಾಯಕತ್ವದಲ್ಲಿ ಛಾಯಾ ಕ್ಯಾಬಿನೆಟ್ ಸೃಷ್ಟಿಸಿ, ಪ್ರತಿಯೊಂದು ಇಲಾಖೆಯ ವೈಫಲ್ಯಗಳನ್ನು ಎತ್ತಿ ಜನರಿಗೆ ತೋರಿಸಬೇಕು. ಸರ್ಕಾರ ಬದ್ದತೆಯಿಂದ ಕೆಲಸ ಮಾಡುವಂತೆ ಮಾಡಬೇಕು. ಕಾಂಗ್ರೆಸ್ ಪಕ್ಷ ಈಗ ತಳಮಟ್ಟದಲ್ಲಿ ಜನರ ಜೊತೆಗೆ ಸಂಪರ್ಕ ಕಳೆದುಕೊಂಡಿದೆ. ಒಂದು ದಿನಕ್ಕಿಂತ ಹೆಚ್ಚಿನ ಕಾಲ ದೇಶಾದ್ಯಂತ ಕಾಂಗ್ರೆಸ್ ಯಾವುದೇ ಪ್ರತಿಭಟನೆ ನಡೆಸಿಲ್ಲ. ಆದರೇ, ಜೆಪಿ ಚಳವಳಿಯಿಂದ ಹಿಡಿದು ಅಣ್ಣಾ ಹಜಾರೆ ಪ್ರತಿಭಟನೆಯವರೆಗೂ ನಾಲ್ಕು ದೊಡ್ಡ ಪ್ರತಿಭಟನೆಗಳಿಂದ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ವಿಧಾನಸಭೆ ಮಟ್ಟದವರೆಗೂ ವಾಟ್ಸಾಫ್ ಗ್ರೂಪ್ ಗಳನ್ನು ಮಾಡಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ನಡೆಸಬೇಕು. ಡಿಜಿಟಲ್ ನೆಟ್ ವರ್ಕ್ ನಲ್ಲಿ ಐದು ಲಕ್ಷ ಬೆಂಬಲಿಗರು ಹಾಗೂ ಸೋಷಿಯಲ್ ಮೀಡಿಯಾಗಳಲ್ಲಿ ಪ್ರಭಾವ ಬೀರುವವರು ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡಬೇಕು. ಸಬ್ ಕಾ ಭರವಸೆ, ಹಾಥ್ ಕೆ ಸಾಥ್ ಎಂಬ ಘೋಷಣೆಯ ಮೂಲಕ ಜನರನ್ನು ಕಾಂಗ್ರೆಸ್ ನತ್ತ ಸೆಳೆಯಬೇಕು.

ಬಿಜೆಪಿ ಪಕ್ಷವು 2019ರ ಲೋಕಸಭಾ ಚುನಾವಣೆಯಲ್ಲಿ ಚಲಾವಣೆಯಾದ ಮತಗಳ ಪೈಕಿ ಶೇ.37.36 ರಷ್ಟು ಮತಗಳನ್ನು ಪಡೆಿದಿತ್ತು. ಬಿಜೆಪಿಗೆ 22.90 ಕೋಟಿ ಮತದಾರರು ಮತ ಚಲಾಯಿಸಿದ್ದರು. ಇದರಿಂದಾಗಿ ಬಿಜೆಪಿ ಪಕ್ಷವು 303 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಪಕ್ಷಕ್ಕೆ 2019ರ ಲೋಕಸಭಾ ಚುನಾವಣೆಯಲ್ಲಿ ಶೇ.19.49 ರಷ್ಟು ಮತಗಳು ಬಂದಿದ್ದವು. ಕಾಂಗ್ರೆಸ್ ಪಕ್ಷಕ್ಕೆ 11.94 ಕೋಟಿ ಮತದಾರರು ಮತ ಚಲಾಯಿಸಿದ್ದರು. ಆದರೇ, ಕಾಂಗ್ರೆಸ್ ಗೆ ಸಿಕ್ಕಿದ್ದು 52 ಲೋಕಸಭಾ ಕ್ಷೇತ್ರದ ಗೆಲುವು ಮಾತ್ರ. ಹೀಗಾಗಿ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 30 ಕೋಟಿ ಮತದಾರರ ಮತಗಳನ್ನು ಸೆಳೆಯಲು ಪ್ಲ್ಯಾನ್ ರೂಪಿಸಿ ಕೆಲಸ ಮಾಡಬೇಕೆಂದು ಪ್ರಶಾಂತ್ ಕಿಶೋರ್ ಸಲಹೆ ನೀಡಿದ್ದಾರೆ. 30 ಕೋಟಿ ಮತದಾರರ ಮತಗಳನ್ನು ಕಾಂಗ್ರೆಸ್ ಪಕ್ಷ ಪಡೆದರೇ, ಲೋಕಸಭೆಯಲ್ಲಿ ಬಹುಮತ ಪಡೆಯಬಹುದು ಎನ್ನುವುದು ಪ್ರಶಾಂತ್ ಕಿಶೋರ್ ಲೆಕ್ಕಾಚಾರ.

ಇದನ್ನೂ ಓದಿ: PK: ಕಾಂಗ್ರೆಸ್ ಸೇರಲು ಪ್ರಶಾಂತ್ ಕಿಶೋರ್‌ಗೆ ಭರ್ಜರಿ ಆಫರ್‌ ಕೊಡ್ತಾರಾ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ?

ಕಾಂಗ್ರೆಸ್​ ನಾಯಕರೊಂದಿಗೆ 4 ತಾಸು ಸಭೆ ನಡೆಸಿದ ಪ್ರಶಾಂತ್ ಕಿಶೋರ್​; 2024 ಲೋಕಸಭಾ ಚುನಾವಣೆ ಬಗ್ಗೆ ಸುದೀರ್ಘ ವಿಷಯ ಮಂಡನೆ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ