ಚುನಾವಣೆಯೆಂದರೆ ಸೌಂದರ್ಯ ಸ್ಪರ್ಧೆಯಲ್ಲ; ರಾಜಸ್ಥಾನದಲ್ಲಿ ಮಹಿಳಾ ಸಿಎಂ ಆಯ್ಕೆ ಬಗ್ಗೆ ಜೈರಾಮ್ ರಮೇಶ್ ಪ್ರತಿಕ್ರಿಯೆ
ಚುನಾವಣೆ ಎಂಬುದು ಪಕ್ಷಗಳು, ಅವರ ಸಿದ್ಧಾಂತಗಳು ಮತ್ತು ಪ್ರಣಾಳಿಕೆಗಳ ನಡುವಿನ ಸ್ಪರ್ಧೆಯೇ ಹೊರತು ಅದೊಂದು ಸೌಂದರ್ಯ ಸ್ಪರ್ಧೆಯಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ನವದೆಹಲಿ: ಮುಂದಿನ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ (Rajasthan) ಮಹಿಳಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ (Congress) ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ (Jairam Ramesh), ಚುನಾವಣೆಗಳು ವ್ಯಕ್ತಿಗಳ ನಡುವೆ ನಡೆಯುವ ಸೌಂದರ್ಯ ಸ್ಪರ್ಧೆಯಲ್ಲ ಎಂದು ಹೇಳಿದ್ದಾರೆ.
ಚುನಾವಣೆ ಎಂಬುದು ಪಕ್ಷಗಳು, ಅವರ ಸಿದ್ಧಾಂತಗಳು ಮತ್ತು ಪ್ರಣಾಳಿಕೆಗಳ ನಡುವಿನ ಸ್ಪರ್ಧೆಯೇ ಹೊರತು ಅದೊಂದು ಸೌಂದರ್ಯ ಸ್ಪರ್ಧೆಯಲ್ಲ. ಹೀಗಾಗಿ, ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ಮುಖ್ಯಮಂತ್ರಿಯ ಅಭ್ಯರ್ಥಿಯ ಹೆಸರನ್ನು ಘೋಷಿಸುತ್ತಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಬ್ರೇಕ್ ಫೇಲ್ ಆಗಿರುವ ಪಕ್ಷ, ಯಾವತ್ತಾದರೂ ಒಂದು ದಿನ ಅಪಘಾತವಾಗುತ್ತೆ -ಶ್ರೀರಾಮುಲು
ಮುಂದಿನ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ನಿಂದ ಮುಖ್ಯಮಂತ್ರಿಯಾಗಿ ಮಹಿಳೆಯೊಬ್ಬರು ಅಭ್ಯರ್ಥಿಯಾಗಬಹುದೇ? ಎಂಬ ಪ್ರಶ್ನೆಗೆ ಉತ್ತರಿಸಿದ ಜೈರಾಮ್ ರಮೇಶ್, ಮಹಿಳೆಯೊಬ್ಬರು ಮುಖ್ಯಮಂತ್ರಿಯಾಗಲು ಸಾಧ್ಯವಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕು ಎಂಬುದು ನಮ್ಮ ಆದ್ಯತೆ. ನಮ್ಮ ದೇಶದಲ್ಲಿ ನಮ್ಮ ರಾಜಕೀಯ ವ್ಯವಸ್ಥೆಯಲ್ಲಿ ಚುನಾವಣೆಗಳು ವ್ಯಕ್ತಿಗಳ ನಡುವಿನ ಸೌಂದರ್ಯ ಸ್ಪರ್ಧೆಯಲ್ಲ. ಈ ಪದವನ್ನು ಯಾರೂ ತಪ್ಪಾಗಿ ಭಾವಿಸಬೇಡಿ ಎಂದು ಹೇಳಿದ್ದಾರೆ.
ಚುನಾವಣೆಗಳು ಪಕ್ಷಗಳ ನಡುವೆ ನಡೆಯುತ್ತವೆ. ಪಕ್ಷದ ಸಿದ್ಧಾಂತಗಳು, ಪ್ರಣಾಳಿಕೆಗಳು ಮತ್ತು ಪಕ್ಷಗಳ ಚಿಹ್ನೆಗಳ ಮೇಲೆ ಹೋರಾಡುತ್ತವೆ ಎಂದು ಕಾಂಗ್ರೆಸ್ ನಂಬುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಮೋದಿ ಹತ್ಯೆ ಮಾಡಿ ಎಂದಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಬಂಧನ
ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬುದು ಚುನಾವಣೆಯ ನಂತರವೇ ಗೊತ್ತಾಗುತ್ತದೆ. ಒಂದು ಅಥವಾ ಎರಡು ಬಾರಿ ಹೊರತುಪಡಿಸಿ ಕಾಂಗ್ರೆಸ್ ಪಕ್ಷವು ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಚುನಾವಣೆಗೂ ಮೊದಲೇ ಘೋಷಣೆ ಮಾಡಿಲ್ಲ. ಏಕೆಂದರೆ ಇದು ಪಕ್ಷಗಳ ನಡುವಿನ ಸ್ಪರ್ಧೆ ಎಂದು ನಾವು ನಂಬುತ್ತೇವೆ. ಜನಾದೇಶವು ಪಕ್ಷಕ್ಕೆ ಇರಬೇಕೇ ಹೊರತು ಒಬ್ಬ ವ್ಯಕ್ತಿಗೆ ಅಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:40 am, Tue, 13 December 22