ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆ ಮುಗಿದಿದ್ದು ಡಿಸೆಂಬರ್ 3 ರಂದು ಹೊರಬರಲಿರುವ ಫಲಿತಾಂಶದ ಕುರಿತು ಎಲ್ಲರ ಚಿತ್ತ ನೆಟ್ಟಿದೆ. ಹಾಗೆಯೇ ಚುನಾವಣೋತ್ತರ ಸಮೀಕ್ಷೆ ಹೊರ ಬಿದ್ದಿದ್ದು, ಕೆಲವು ಪಕ್ಷಗಳು ಸಂತಸದಲ್ಲಿದ್ದರೆ, ಬಿಜೆಪಿಯು ಸಭೆ ಕರೆದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಎರಡು ರಾಜ್ಯಗಳನ್ನು ಗೆಲ್ಲುವ ಮುನ್ಸೂಚನೆಯೊಂದಿಗೆ ಹೊರಬಿದ್ದಿವೆ.
ಸಂಭವನೀಯ ಚುನಾವಣಾ ಫಲಿತಾಂಶ ಕುರಿತು ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳ ಪ್ರಮುಖ ಸಭೆಯು ನವದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ದಿನದ ನಂತರ ನಡೆಯಲಿದೆ.
ಕೆಲವು ನಾಯಕರು ನಾವು ಚುನಾವಣೋತ್ತರ ಸಮೀಕ್ಷೆ ಮೇಲೆ ಅವಲಂಬಿತವಾಗಿಲ್ಲ ಎಂದು ಹೇಳಿದರೆ, ಕೆಲವರು ತಮ್ಮ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಉಳಿಯಬಹುದು ಎಂದು ಎಕ್ಸಿಟ್ ಪೋಲ್ ಸೂಚಿಸುತ್ತಿವೆ. ತೆಲಂಗಾಣದಲ್ಲಿ ಕಾಂಗ್ರೆಸ್ ಬಿಆರ್‌ಎಸ್ ಅನ್ನು ಕೆಳಗಿಳಿಸಬಹುದೆಂದು ಸಮೀಕ್ಷೆಗಳು ಹೇಳುತ್ತಿವೆ.
ಎಲ್ಲಾ ಐದು ರಾಜ್ಯಗಳ ಮತ ಎಣಿಕೆ ಡಿಸೆಂಬರ್ 3 ರಂದು ನಡೆಯಲಿದೆ.
ಮಧ್ಯಪ್ರದೇಶ ಎಕ್ಸಿಟ್ ಪೋಲ್ ಪ್ರತಿಕ್ರಿಯೆಗಳು
ಬಿಜೆಪಿ ನಾಯಕಿ ಉಮಾಭಾರತಿ ಅವರು ಈ ಎಕ್ಸಿಟ್ ಪೋಲ್ ಅನ್ನು ಅವಲಂಬಿಸುವುದಿಲ್ಲ ಎಂದು ಹೇಳಿದ್ದಾರೆ.ಒಂದು ಪಕ್ಷವು 112 ರಿಂದ 130 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ (ಸಂಸದ 230 ಸ್ಥಾನಗಳಲ್ಲಿ). ನನ್ನ ಪಕ್ಷ ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸಬೇಕೆಂದು ನಾನು ಬಯಸುತ್ತೇನೆ ಎಂದರು.
ಛತ್ತೀಸ್‌ಗಢ ಎಕ್ಸಿಟ್ ಪೋಲ್
ತೆಲಂಗಾಣದಲ್ಲಿ ತಮ್ಮ ಪಕ್ಷವು ಸುಮಾರು 80% ಸ್ಥಾನಗಳನ್ನು ಪಡೆಯಲಿದೆ ಎಂದು ಛತ್ತೀಸ್‌ಗಢ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಬೈಜ್ ವಿಶ್ವಾಸ ವ್ಯಕ್ತಪಡಿಸಿದರು. ಇತರ ರಾಜ್ಯಗಳ ಎಕ್ಸಿಟ್ ಪೋಲ್‌ಗಳು ಉತ್ತಮವಾಗಿವೆ. ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲೂ ಉತ್ತಮ ವಾತಾವರಣವಿದೆ. ತೆಲಂಗಾಣದಲ್ಲಿ ಶೇ 80ರಷ್ಟು ಸೀಟುಗಳನ್ನು ಪಡೆಯುತ್ತೇವೆ. ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದರು.
ತೆಲಂಗಾಣ ಎಕ್ಸಿಟ್ ಪೋಲ್
ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ತೆಲಂಗಾಣ ಜನತೆಯ ಗೆಲುವು ಎಂದು ಬಣ್ಣಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ