Wrestlers Protest: ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ, ಚುನಾವಣಾಧಿಕಾರಿಯಾಗಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ನೇಮಕ
ಮುಂದಿನ ತಿಂಗಳು ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ ನಡೆಯಲಿದೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಸೋಮವಾರ ಪ್ರಕಟಿಸಿದೆ. ಒಲಿಂಪಿಕ್ ಅಸೋಸಿಯೇಷನ್ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರನ್ನು ಚುನಾವಣೆಗೆ ಚುನಾವಣಾಧಿಕಾರಿಯಾಗಿ ನೇಮಿಸಿದೆ.
ದೆಹಲಿ: ಮುಂದಿನ ತಿಂಗಳು ಜುಲೈ 4ರಂದು ಭಾರತದ ಕುಸ್ತಿ ಫೆಡರೇಶನ್ ಚುನಾವಣೆ ನಡೆಯಲಿದೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಸೋಮವಾರ ಪ್ರಕಟಿಸಿದೆ. ಒಲಿಂಪಿಕ್ ಅಸೋಸಿಯೇಷನ್ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅವರನ್ನು ಚುನಾವಣೆಗೆ ಚುನಾವಣಾಧಿಕಾರಿಯಾಗಿ ನೇಮಿಸಿದೆ. ಐಒಎ ಡಬ್ಲ್ಯುಎಫ್‌ಐ ಕಾರ್ಯಕಾರಿ ಸಮಿತಿಯ ಚುನಾವಣೆಗಳನ್ನು ನಡೆಸಲು ಮುಂದಾಗಬೇಕಿದೆ ಮತ್ತು ಡಬ್ಲ್ಯುಎಫ್‌ಐನ ಚುನಾವಣೆಗಳನ್ನು ನಡೆಸಲು ನಿಮ್ಮನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗುತ್ತಿದೆ. ಜತೆಗೆ ನಿಮಗೆ ಒಬ್ಬ ಸಹಾಯಕ ಚುನಾವಣಾಧಿಕಾರಿ ಮತ್ತು ಇತರ ಸಿಬ್ಬಂದಿಯನ್ನು ನೇಮಿಸಲು ಅವಕಾಶ ನೀಡಲಾಗುವುದು ಎಂದು IOA ಹೇಳಿಕೆಯಲ್ಲಿ ತಿಳಿಸಿದೆ.
ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿ ಪಟುಗಳು ಅವರ ಮೇಲೆ ಲೈಂಗಿಕ ಆರೋಪ ಮಾಡಿದ್ದು, ಈಗಾಗಲೇ ಅವರ ಪೊಲೀಸ್ ತನಿಖೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.
ಇದನ್ನೂ ಓದಿ: Wrestlers Protest: ಆರೋಪಕ್ಕೆ ಸಂಬಂಧಿಸಿದ ಫೋಟೊಗಳು, ವಿಡಿಯೋಗಳನ್ನು ಒದಗಿಸುವಂತೆ ಕುಸ್ತಿಪಟುಗಳನ್ನು ಕೇಳಿದ ಪೊಲೀಸರು
ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಗುರುವಾರ ವಿಚಾರಣಾ ನ್ಯಾಯಾಲಯದ ಮುಂದೆ ತಮ್ಮ ತನಿಖಾ ವರದಿಗಳನ್ನು ಇಟ್ಟಿದ್ದಾರೆ. ಬಿಜೆಪಿ ನಾಯಕ ಬ್ರಿಜ್ ಭೂಷಣ್ ಶರಣ್ ಸಿಂಗ್ ಸುಮಾರು ಒಂದು ದಶಕದಿಂದ ಕುಸ್ತಿ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಅವರ ಮಗ ಸ್ಥಳೀಯ ಶಾಸಕ ಮತ್ತು ಫೆಡರೇಶನ್‌ನಲ್ಲಿ ಅಧಿಕಾರಿಯೂ ಆಗಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ