AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electoral Bond Scheme: ನಾಳೆಯೇ ಚುನಾವಣಾ ಬಾಂಡ್​ಗಳ ವಿವರಗಳನ್ನು ಬಹಿರಂಗಪಡಿಸುವಂತೆ ಎಸ್​ಬಿಐಗೆ ಸುಪ್ರೀಂ ಸೂಚನೆ

ಮಾರ್ಚ್​ 12ರಂದು ಅಂದರೆ ನಾಳೆಯೇ ಚುನಾವಣಾ ಬಾಂಡ್​ಗಳ ವಿವರಗಳನ್ನು ಬಹಿರಂಗಪಡಿಸುವಂತೆ ಸುಪ್ರೀಂಕೋರ್ಟ್​ ಎಸ್​ಬಿಐಗೆ ಸೂಚನೆ ನೀಡಿದೆ.

Electoral Bond Scheme: ನಾಳೆಯೇ ಚುನಾವಣಾ ಬಾಂಡ್​ಗಳ ವಿವರಗಳನ್ನು ಬಹಿರಂಗಪಡಿಸುವಂತೆ ಎಸ್​ಬಿಐಗೆ ಸುಪ್ರೀಂ ಸೂಚನೆ
ಸುಪ್ರೀಂಕೋರ್ಟ್​
ನಯನಾ ರಾಜೀವ್
|

Updated on: Mar 11, 2024 | 12:36 PM

Share

ಚುನಾವಣಾ ಬಾಂಡ್(Electoral Bonds)​ಗಳ ವಿವರಗಳನ್ನು ಬಹಿರಂಗಪಡಿಸಲು ಹೆಚ್ಚಿನ ಸಮಯ ಕೋರಿ ಎಸ್​ಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ಸೋಮವಾರ ವಜಾಗೊಳಿಸಿದೆ. ನಾಳೆಯೇ ಮಾಹಿತಿಯನ್ನು ಬಹಿರಂಗ ಪಡಿಸುವಂತೆ ಸುಪ್ರೀಂಕೋರ್ಟ್​ ಕೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಭಾರತೀಯ ಚುನಾವಣಾ ಆಯೋಗಕ್ಕೆ ಮಾರ್ಚ್​ 15ರೊಳಗೆ ತನ್ನ ಅಧಿಕೃತ ವೆಬ್​ಸೈಟ್​ನಲ್ಲಿ ವಿವರಗಳನ್ನು ಪ್ರಕಟಿಸಬೇಕು ಎಂದು ಹೇಳಿದೆ.

ಈ ಹಿಂದೆ ವಿಚಾರಣೆ ವೇಳೆ ಎಸ್​ಬಿಐ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್​ ಸಾಳ್ವೆ, ಮಾಹಿತಿ ನೀಡಲು ಜೂನ್ 30ರವರೆಗೆ ಕಾಲಾವಕಾಶ ಕೋರಿದ್ದರು. ಬಾಂಡ್​ಗಳ ಖರೀದಿಯ ಬಗ್ಗೆ ಮಾಹಿತಿ ನೀಡುವಂತೆ ನ್ಯಾಯಾಲಯವು ಎಸ್​ಬಿಐಗೆ ಸೂಚಿಸಿದೆ.

ರಾಜಕೀಯ ಪಕ್ಷಗಳ ವಿವರಗಳು ಮತ್ತು ಪಕ್ಷಗಳು ಸ್ವೀಕರಿಸಿದ ಬಾಂಡ್​ಗಳ ಸಂಖ್ಯೆಯನ್ನು ಸಹ ನೀಡಬೇಕು. 5 ವರ್ಷದಲ್ಲಿ 22 ಸಾವಿರಕ್ಕೂ ಅಧಿಕ ಚುನಾವಣಾ ಬಾಂಡ್ ಗಳನ್ನು ಬಿಡುಗಡೆ ಮಾಡಲಾಗಿದ್ದು, ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿ ನೀಡಿಕೆಗಾಗಿ ನೀಡಿರುವ ಗಡುವನ್ನು ಮಾರ್ಚ್ 6 ರಿಂದ ಜೂನ್ 30 ರವರೆಗೆ ವಿಸ್ತರಿಸಿ ಎಂದು ಸುಪ್ರೀಂ ಕೋರ್ಟ್ ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮನವಿ ಮಾಡಿತ್ತು.

ಕಳೆದ ಐದು ವರ್ಷಗಳಲ್ಲಿ 22,217 ಚುನಾವಣಾ ಬಾಂಡ್ ಗಳನ್ನು ವಿವಿಧ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಸಲುವಾಗಿ ಬಳಸಲಾಗಿದೆ ಎಂಬ ಅಂಶವನ್ನು ಭಾರತೀಯ ಸ್ಟೇಟ್ ಬ್ಯಾಂಕ್ ಬಹಿರಂಗಪಡಿಸಿದೆ.

ಮತ್ತಷ್ಟು ಓದಿ: Electoral Bonds: ಚುನಾವಣಾ ಬಾಂಡ್​ ಕುರಿತು ಇಂದು ಮಹತ್ವದ ತೀರ್ಪು ನೀಡಲಿದೆ ಸುಪ್ರೀಂಕೋರ್ಟ್

ಎರಡು ಭಿನ್ನ ಮಾಹಿತಿ ಭಾಗಗಳು ಇರುವುದರಿಂದ ಒಟ್ಟು 44,434 ಮಾಹಿತಿ ಸೆಟ್ ಗಳನ್ನು ಡಿಕೋಡ್ ಮಾಡಿ, ಕ್ರೋಢೀಕರಿಸಿ, ತುಲನೆ ಮಾಡಬೇಕಾಗುತ್ತದೆ. ದಾನಿಗಳ ಹೆಸರನ್ನು ಗುಪ್ತವಾಗಿ ಇಡುವ ಉದ್ದೇಶದಿಂದ ಡಿಕೋಡ್ ಮಾಡುವ ಪ್ರಕ್ರಿಯೆ ಅತ್ಯಂತ ಸಂಕೀರ್ಣ ಪ್ರಕ್ರಿಯೆಯಾಗಲಿದೆ ಎಂದು ಎಸ್ ಬಿಐ ಸ್ಪಷ್ಟಪಡಿಸಿತ್ತು.

ಒಂದು ವೇಳೆ 116 ದಿನಗಳ ಕಾಲಾವಧಿಯನ್ನು ವಿಸ್ತರಿಸುವಂತೆ ಕೋರಿ ಎಸ್‌ಬಿಐ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದರೆ, ಲೋಕಸಭೆ ಚುನಾವಣೆ ಮುಗಿಯುವವರೆಗೂ ರಾಜಕೀಯ ನಿಧಿಯ ಕುರಿತು ಪ್ರಮುಖ ಮಾಹಿತಿಯು ಗೌಪ್ಯವಾಗಿರುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!