Electoral Bonds: ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯ: ಚುನಾವಣಾ ಬಾಂಡ್​ ಅಸಂವಿಧಾನಿಕ ಎಂದ ಸುಪ್ರೀಂ

ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯವಾಗಿದ್ದು ಚುನಾವಣಾ ಬಾಂಡ್(Electoral Bonds)​ ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದೆ. ಚುನಾವಣಾ ಬಾಂಡ್​ ಯೋಜನೆಯ ಸಿಂಧುತ್ವದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ತನ್ನ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್​ಗಳನ್ನು ನಿಷೇಧಿಸಿದೆ. ಸುಪ್ರೀಂ ಕೋರ್ಟ್ ಇದನ್ನು ಅಸಂವಿಧಾನಿಕ ಎಂದು ಕರೆದಿದೆ ಮತ್ತು ಬೇರೆ ಆಯ್ಕೆಯನ್ನು ಪರಿಗಣಿಸುವಂತೆ ಸರ್ಕಾರವನ್ನು ಕೇಳಿದೆ.

Electoral Bonds: ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯ: ಚುನಾವಣಾ ಬಾಂಡ್​ ಅಸಂವಿಧಾನಿಕ ಎಂದ ಸುಪ್ರೀಂ
Follow us
ನಯನಾ ರಾಜೀವ್
|

Updated on:Feb 15, 2024 | 11:26 AM

ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯವಾಗಿದ್ದು ಚುನಾವಣಾ ಬಾಂಡ್(Electoral Bonds)​ ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದೆ. ಚುನಾವಣಾ ಬಾಂಡ್​ ಯೋಜನೆಯ ಸಿಂಧುತ್ವದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ತನ್ನ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್​ಗಳನ್ನು ನಿಷೇಧಿಸಿದೆ. ಸುಪ್ರೀಂ ಕೋರ್ಟ್ ಇದನ್ನು ಅಸಂವಿಧಾನಿಕ ಎಂದು ಕರೆದಿದೆ ಮತ್ತು ಬೇರೆ ಆಯ್ಕೆಯನ್ನು ಪರಿಗಣಿಸುವಂತೆ ಸರ್ಕಾರವನ್ನು ಕೇಳಿದೆ.

ಚುನಾವಣಾ ಬಾಂಡ್ ಯೋಜನೆಯನ್ನು ಟೀಕಿಸಿದ ಸುಪ್ರೀಂ ಕೋರ್ಟ್, ರಾಜಕೀಯ ಪಕ್ಷಗಳು ಪಡೆಯುತ್ತಿರುವ ಹಣದ ಬಗ್ಗೆ ಮಾಹಿತಿ ಪಡೆಯುವುದು ಬಹಳ ಮುಖ್ಯ ಎಂದು ಹೇಳಿದೆ. ಚುನಾವಣಾ ಬಾಂಡ್‌ಗಳು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ಪ್ರಕರಣದ ಕುರಿತು ಸರ್ವಾನುಮತದ ತೀರ್ಪು ನೀಡಿದೆ.

ಆದರೆ, ಪೀಠದಲ್ಲಿ ಎರಡು ಭಿನ್ನ ಅಭಿಪ್ರಾಯಗಳಿದ್ದವು. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ಕಳೆದ ವರ್ಷ ನವೆಂಬರ್ 2 ರಂದು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು, ಅದು ಇಂದು ಪ್ರಕಟವಾಯಿತು.

ಮತ್ತಷ್ಟು ಓದಿ: Electoral Bonds: ಚುನಾವಣಾ ಬಾಂಡ್​ ಎಂದರೇನು? ಅದರ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿರುವ ವಾದವೇನು ಇಲ್ಲಿದೆ ಮಾಹಿತಿ

ಚುನಾವಣಾ ಬಾಂಡ್​ ಯೋಜನೆಯ ಪ್ರಕಾರ, ಭಾರತದ ಯಾವುದೇ ನಾಗರಿಕ ಅಥವಾ ದೇಶದಲ್ಲಿ ಸ್ಥಾಪಿಸಲಾದ ಯಾವುದೇ ಘಟಕದಿಂದ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದು. ಯಾವುದೇ ವ್ಯಕ್ತಿ ಏಕಾಂಗಿಯಾಗಿ ಅಥವಾ ಇತರ ವ್ಯಕ್ತಿಗಳ ಸಹಯೋಗದಲ್ಲಿ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದು.

1951ರ ಜನತಾ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ 29(A) ಅಡಿಯಲ್ಲಿ ನೋಂದಾಯಿಸಲ್ಪಟ್ಟ ರಾಜಕೀಯ ಪಕ್ಷಗಳು ಮತ್ತು ಲೋಕಸಭೆ ಅಥವಾ ವಿಧಾನಸಭೆಗೆ ಕಳೆದ ಚುನಾವಣೆಯಲ್ಲಿ ಕನಿಷ್ಠ ಒಂದು ಶೇಕಡಾ ಮತಗಳನ್ನು ಗಳಿಸಿದ ಪಕ್ಷಗಳು ಚುನಾವಣಾ ಬಾಂಡ್‌ಗಳನ್ನು ಪಡೆಯಬಹುದು. ಬಾಂಡ್‌ಗಳನ್ನು ಅಧಿಕೃತ ಬ್ಯಾಂಕ್ ಖಾತೆಯ ಮೂಲಕ ಅರ್ಹ ರಾಜಕೀಯ ಪಕ್ಷವು ಎನ್‌ಕ್ಯಾಶ್ ಮಾಡಬಹುದು.

ಐವರು ಸದಸ್ಯರ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ನಡೆಸಿತು ಅಕ್ಟೋಬರ್ 31 ರಿಂದ ಪ್ರಕರಣದ ನಿಯಮಿತ ವಿಚಾರಣೆಯನ್ನು ನ್ಯಾಯಾಲಯ ಆರಂಭಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಇದರಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಕೂಡ ಇದ್ದರು. ಈ ವೇಳೆ ಎರಡೂ ಕಡೆಯಿಂದ ವಾದ ಮಂಡಿಸಲಾಯಿತು. ಎಲ್ಲ ಕಕ್ಷಿದಾರರ ಮಾತುಗಳನ್ನು ಗಂಭೀರವಾಗಿ ಆಲಿಸಿದ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಚುನಾವಣಾ ಬಾಂಡ್​ ಎಂದರೇನು? 

ಇದು ಜನಸಾಮಾನ್ಯರು, ಕಾರ್ಪೊರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ನೀಡುವ ಒಂದು ವಿಧದ ದೇಣಿಗೆ ಕ್ರಮ. 1,000 ರೂ, 10,000 ರೂ, 1 ಲಕ್ಷ ರೂ, 10 ಲಕ್ಷ ರೂ, 1 ಕೋಟಿ ರೂ ಇತ್ಯಾದಿ ಮುಖಬೆಲೆಗಳಲ್ಲಿ ಬಾಂಡ್​ಗಳನ್ನು ಖರೀದಿಸಬಹುದು. ಈ ಬಾಂಡ್​ಗಳು ಅನಾಮಧೇಯವಾಗಿರುತ್ತವೆ. ಅಂದರೆ, ಇದನ್ನು ಖರೀದಿಸಿದ ವ್ಯಕ್ತಿ ಅಥವಾ ಸಂಸ್ಥೆಯ ಹೆಸರು ಬಹಿರಂಗ ಇರುವುದಿಲ್ಲ. ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ಕೊಡಲಾಗಿದೆ ಆ ಪಕ್ಷ ಹೆಸರೂ ಬಹಿರಂಗ ಇರುವುದಿಲ್ಲ.

ಇತ್ತೀಚಿನ ಚುನಾವಣೆಯಲ್ಲಿ ಶೇ. 1ಕ್ಕೂ ಹೆಚ್ಚು ಮತಗಳನ್ನು ಪಡೆದ ಯಾವುದೇ ರಾಜಕೀಯ ಪಕ್ಷವೂ ಎಲೆಕ್ಟ್ರೋರಲ್ ಬಾಂಡ್ ಅಕೌಂಟ್ ತೆರೆಯಲು ಅವಕಾಶ ಹೊಂದಿರುತ್ತದೆ. ಎಲೆಕ್ಟೋರಲ್ ಬಾಂಡ್ ಖರೀದಿಸಿದ ಬಳಿಕ ರಾಜಕೀಯ ಪಕ್ಷವು 15 ದಿನದೊಳಗೆ ಆ ಹಣವನ್ನು ಎನ್​ಕ್ಯಾಷ್ ಮಾಡಿಕೊಳ್ಳಬೇಕು. ಅದು ತಪ್ಪಿದಲ್ಲಿ ಬಾಂಡ್ ಹಣವು ಪಿಎಂ ರಾಷ್ಟ್ರೀಯ ಪರಿಹಾರ ನಿಧಿಗೆ (ಪಿಎಂಎನ್​ಆರ್​ಎಫ್) ವರ್ಗಾವಣೆ ಆಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:06 am, Thu, 15 February 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ