ಚುನಾವಣಾ ಬಾಂಡ್​ಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಬಹಿರಂಗಪಡಿಸುವಂತೆ ಎಸ್​ಬಿಐಗೆ ಸುಪ್ರೀಂ ಗಡುವು

ಚುನಾವಣಾ ಬಾಂಡ್​ಗಳಿಗೆ ಸಂಬಂಧಿಸಿದಂತೆ ಯಾವುದೇ ಮುಚ್ಚುಮರೆ ಇಲ್ಲದೆ ಮಾಹಿತಿ ಪ್ರಕಟಿಸುವಂತೆ ಸುಪ್ರೀಂಕೋರ್ಟ್​ ಸ್ಟೇಟ್​ ಬ್ಯಾಂಕ್ ಆಫ್​ ಇಂಡಿಯಾಗೆ ಕೇಳಿದೆ. ಏಕೆ ಆಯ್ದ ಮಾಹಿತಿಗಳನ್ನು ಮಾತ್ರ ಪ್ರಕಟಿಸಲಾಗುತ್ತಿದೆ ಎಂದು ಪ್ರಶ್ನಿಸಿದೆ.

ಚುನಾವಣಾ ಬಾಂಡ್​ಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಬಹಿರಂಗಪಡಿಸುವಂತೆ ಎಸ್​ಬಿಐಗೆ ಸುಪ್ರೀಂ ಗಡುವು
ಸುಪ್ರೀಂಕೋರ್ಟ್​
Follow us
|

Updated on:Mar 18, 2024 | 12:42 PM

ಚುನಾವಣಾ ಬಾಂಡ್(Electoral Bonds)​ಗಳಿಗೆ ಸಂಬಂಧಿಸಿದಂತೆ ಆಯ್ದ ಮಾಹಿತಿಯನ್ನು ಮಾತ್ರ ಏಕೆ ಸಾರ್ವಜನಿಕಗೊಳಿಸಲಾಗುತ್ತಿದೆ, ಎಲ್ಲಾ ಮಾಹಿತಿಗಳನ್ನು ಏಕೆ ಬಹಿರಂಗಪಡಿಸಲಾಗುತ್ತಿಲ್ಲ ಎಂದು ಎಸ್​ಬಿಐಗೆ ಸುಪ್ರೀಂಕೋರ್ಟ್​ ಖಾರವಾಗಿ ಪ್ರಶ್ನಿಸಿದೆ. ರಾಷ್ಟ್ರೀಯ ಪಕ್ಷಗಳೊಂದಿಗೆ ದಾನಿಗಳ ವಿವರಗಳನ್ನು ಲಿಂಕ್ ಮಾಡಲು ಸಹಾಯ ಮಾಡುವ ಆಲ್ಫಾನ್ಯೂಮರಿಕ್ ಸೀರಿಯಲ್ ಕೋಡ್ ಸೇರಿದಂತೆ ಚುನಾವಣಾ ಬಾಂಡ್​ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಸುಪ್ರೀಂಕೋರ್ಟ್​ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್​ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್​ ಖನ್ನಾ, ಬಿಆರ್​ ಗವಾಯಿ, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪಂಚ ಪೀಠವು ಫೆಬ್ರವರಿ ತೀರ್ಪಿನಲ್ಲಿ ಬಾಂಡ್​ಗಳ ಎಲ್ಲಾ ವಿವರಗಳನ್ನು ಬಹಿರಂಗಪಡಿಸಲು ಬ್ಯಾಂಕ್​ಗೆ ಕೇಳಿತ್ತು. ತನ್ನ ಆದೇಶದಲ್ಲಿ ಎಸ್​ಬಿಐ ಅಧ್ಯಕ್ಷ ದಿನೇಶ್​ ಖಾರಾ ಅವರಿಗೆ ಮಾರ್ಚ್​ 21, ಗುರುವಾರ ಸಂಜೆ 5 ಗಂಟೆಯೊಳಗೆ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದ್ದು, ಬ್ಯಾಂಕ್​ ತನ್ನ ಸ್ವಾಧೀನದಲ್ಲಿರುವ ಚುನಾವಣಾ ಬಾಂಡ್​ಗಳ ಎಲ್ಲಾ ವಿವರಗಳನ್ನು ಬಹಿರಂಗಪಡಿಸಿದೆ ಮತ್ತು ಯಾವುದೇ ವಿವರಗಳನ್ನು ಯಾವುದೇ ವಿವರಗಳನ್ನು ತಡೆಹಿಡಿಯುವಂತಿಲ್ಲ ಎಂದು ಕೋರ್ಟ್​ ಹೇಳಿದೆ.

ಭಾರತದ ಚುನಾವಣಾ ಆಯೋಗವು ಮಾರ್ಚ್ 17 ರಂದು ತನ್ನ ವೆಬ್‌ಸೈಟ್‌ನಲ್ಲಿ ಚುನಾವಣಾ ಬಾಂಡ್‌ಗಳ ಕುರಿತು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಿಯಿಂದ ಡಿಜಿಟೈಸ್ಡ್ ರೂಪದಲ್ಲಿ ಸ್ವೀಕರಿಸಿದ ಡೇಟಾವನ್ನು ಅಪ್‌ಲೋಡ್ ಮಾಡಿದೆ.

ಮತ್ತಷ್ಟು ಓದಿ:ಚುನಾವಣಾ ಬಾಂಡ್‌ ಕುರಿತ ವಿವರಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿದ ಎಸ್​​ಬಿಐ

ಕೇಂದ್ರದ ಆಡಳಿತಾರೂಢ ಭಾರತೀಯ ಜನತಾ ಪಕ್ಷವು (ಬಿಜೆಪಿ) ಈ ಬಾಂಡ್‌ಗಳ ಮೂಲಕ 2018 ರಲ್ಲಿ ಪರಿಚಯಿಸಿದಾಗಿನಿಂದ ಗರಿಷ್ಠ 6,986.5 ಕೋಟಿ ರೂ. ಹಣವನ್ನು ಸ್ವೀಕರಿಸಿದೆ. ಹಿಂದಿನ ಮಾರ್ಚ್ 15 ರಂದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಸೋರ್ಸಿಂಗ್ ಮಾಡಿದ ನಂತರ ಚುನಾವಣಾ ಬಾಂಡ್‌ಗಳ ಮೊದಲ ವಿವರವಾದ ಡೇಟಾವನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿತ್ತು.

ಬುಧವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದು, ಏಪ್ರಿಲ್ 1, 2019 ಮತ್ತು ಫೆಬ್ರವರಿ 15 ರ ನಡುವೆ, ದಾನಿಗಳು ಒಟ್ಟು 22,217 ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದ್ದಾರೆ, ಅದರಲ್ಲಿ 22,030 ರಾಜಕೀಯ ಪಕ್ಷಗಳು ಎನ್‌ಕ್ಯಾಶ್ ಮಾಡಲಾಗಿದೆ. ಪ್ರತಿ ಚುನಾವಣಾ ಬಾಂಡ್ ಖರೀದಿಸಿದ ದಿನಾಂಕ, ಖರೀದಿದಾರರ ಹೆಸರು ಮತ್ತು ಖರೀದಿಸಿದ ಬಾಂಡ್‌ನ ಮುಖಬೆಲೆ ಸೇರಿದಂತೆ ವಿವರಗಳನ್ನು ಒದಗಿಸಲಾಗಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಮಂಗಳವಾರ ಸಂಜೆ ಎಸ್ ಬಿಐ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಗಳನ್ನು ಖರೀದಿಸಿ ರಾಜಕೀಯ ಪಕ್ಷಗಳು ನಗದೀಕರಿಸಿದ ಸಂಸ್ಥೆಗಳ ವಿವರ ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಚುನಾವಣಾ ಆಯೋಗವು ಮಾರ್ಚ್ 15 ರಂದು ಸಂಜೆ 5 ಗಂಟೆಯೊಳಗೆ ಬ್ಯಾಂಕ್ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಹಂಚಿಕೊಂಡ ಮಾಹಿತಿಯನ್ನು ಪ್ರಕಟಿಸಬೇಕಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:20 pm, Mon, 18 March 24

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು