ನಿಯಂತ್ರಣ ಕಳೆದುಕೊಂಡ ಚಾಲಕ; ಕಾರು, ಬೈಕು, ನಿಂತಿದ್ದ ಟ್ರಕ್, ಜನರಿಗೆ ಡಿಕ್ಕಿ ಹೊಡೆದ ಬಸ್​, 6 ಮಂದಿ ಸಾವು

ಅವಾಂತರ ಮಾಡಿದ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅವನಿಗಾಗಿ ಹುಡುಕುತ್ತಿದ್ದೇವೆ. ಸದ್ಯ ಗಾಯಗೊಂಡ ಎಲ್ಲರನ್ನೂ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಯಂತ್ರಣ ಕಳೆದುಕೊಂಡ ಚಾಲಕ; ಕಾರು, ಬೈಕು, ನಿಂತಿದ್ದ ಟ್ರಕ್, ಜನರಿಗೆ ಡಿಕ್ಕಿ ಹೊಡೆದ ಬಸ್​, 6 ಮಂದಿ ಸಾವು
ಅಪಘಾತ ನಡೆದ ಸ್ಥಳ
Follow us
TV9 Web
| Updated By: Lakshmi Hegde

Updated on: Jan 31, 2022 | 8:13 AM

ಕಾನ್ಪುರ:  ಎಲೆಕ್ಟ್ರಿಕ್​​  ಬಸ್​​ವೊಂದು ನಿಯಂತ್ರಣ ಕಳೆದುಕೊಂಡು ಮೂರ್ನಾಲ್ಕು ವಾಹನಗಳು, ರಸ್ತೆ ಬದಿಯಲ್ಲಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟು, 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಕಾನ್ಪುರದ ಟಾಟ್ ಮಿಲ್​​​ನಲ್ಲಿ ನಡೆದಿದೆ. ಬಸ್​ ಡಿಕ್ಕಿಯಾದ ರಭಸಕ್ಕೆ ಮೂರು ಕಾರುಗಳು, ಹಲವು ಬೈಕ್​​ಗಳು ಸಂಪೂರ್ಣ ನಾಶಗೊಂಡಿವೆ. ಅಷ್ಟೇ ಅಲ್ಲ, ಅಲ್ಲಿಯೇ ಇದ್ದ ಟ್ರಾಫಿಕ್ ಪೊಲೀಸ್ ಬೂತ್​, ನಿಂತಿದ್ದ ಟ್ರಕ್​ಗೆ ಕೂಡ ಡಿಕ್ಕಿಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಷ್ಟೆಲ್ಲ ಅವಾಂತರ ಮಾಡಿದ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅವನಿಗಾಗಿ ಹುಡುಕುತ್ತಿದ್ದೇವೆ. ಸದ್ಯ ಗಾಯಗೊಂಡ ಎಲ್ಲರನ್ನೂ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ ಎಂದು ಪೂರ್ವ ಕಾನ್ಪುರದ ಡೆಪ್ಯೂಟಿ ಕಮಿಷನರ್​ ಪ್ರಮೋದ್​ ಕುಮಾರ್  ಹೇಳಿದ್ದಾರೆ.  ಚಾಲಕ ಅತ್ಯಂತ ವೇಗವಾಗಿ ಬಸ್​ ಚಾಲನೆ ಮಾಡುತ್ತಿದ್ದ. ಹೀಗಾಗಿ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಹೇಳಿದ್ದಾರೆ.

ಬಸ್​ ದುರಂತದಲ್ಲಿ 6 ಮಂದಿ ಸಾವನ್ನಪ್ಪುತ್ತಿದ್ದಂತೆ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್​ ಮಾಡಿ, ಸಂತಾಪ ಸೂಚಿಸಿದ್ದಾರೆ. ಕಾನ್ಪುರದಲ್ಲಿ ರಸ್ತೆ ಅಪಘಾತದ ಸುದ್ದಿ ಕೇಳಿದೆ. ಮೃತರ ಕುಟುಂಬಗಳಿಗೆ ನೋವು ಸಹಿಸುವ ಶಕ್ತಿ ಭಗವಂತ ನೀಡಲಿ. ಗಾಯಗೊಂಡವರು ಬಹುಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂದು ವಿಶ್ವಾಸದ್ರೋಹದ ದಿನ ಆಚರಿಸುವುದಾಗಿ ರೈತ ಮುಖಂಡ ರಾಕೇಶ್ ಟಿಕಾಯತ್​ ಘೋಷಣೆ; ಕೇಂದ್ರದ ವಿರುದ್ಧ ಮತ್ತೆ ಸಿಡಿಮಿಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್