Electric Highways: ಭಾರತದ ಹೆದ್ದಾರಿಗಳಿಗೆ ಸೌರಶಕ್ತಿ; ಕೇಂದ್ರ ಸಚಿವ ನಿತಿನ್ ಗಡ್ಕರಿ

| Updated By: Rakesh Nayak Manchi

Updated on: Sep 12, 2022 | 3:08 PM

ಸೌರಶಕ್ತಿಯಿಂದ ಚಾಲಿತವಾಗಿರುವ ಎಲೆಕ್ಟ್ರಿಕ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

Electric Highways: ಭಾರತದ ಹೆದ್ದಾರಿಗಳಿಗೆ ಸೌರಶಕ್ತಿ; ಕೇಂದ್ರ ಸಚಿವ ನಿತಿನ್ ಗಡ್ಕರಿ
ಕೇಂದ್ರ ಸಚಿವ ನಿತಿನ್ ಗಡ್ಕರಿ
Follow us on

ಹೊಸದಿಲ್ಲಿ: ಹೆದ್ದಾರಿಯಲ್ಲಿ ಓಡಾಡುವ ಎಲೆಕ್ಟ್ರಿಕ್ ವಾಹನಗಳಿಗೆ ಸೌರಶಕ್ತಿಯಿಂದ ರೀಚಾರ್ಜ್ ಮಾಡಲು ಅವಕಾಶ ಕಲ್ಪಿಸುವ ಮಹತ್ವದ ಯೋಜನೆಯೊಂದರ ಮೇಲೆ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ಇದು ಭಾರೀ ಸಾಮರ್ಥ್ಯದ ಟ್ರಕ್‌ಗಳು ಮತ್ತು ಬಸ್‌ಗಳ ಚಾರ್ಜ್‌ಗೆ ಅನುಕೂಲವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ (IACC) ವತಿಯಿಂದ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ವಿದ್ಯುತ್ ವಾಹನಗಳ ಮೂಲಕ ಮರುರೂಪಿಸಲು ಪ್ರಯತ್ನಿಸುತ್ತದೆ ಎಂದು ಹೇಳಿದರು.

“ಎಲೆಕ್ಟ್ರಿಕ್ ವಾಹನಗಳಿಗಾಗಿ ಸೌರ ಮತ್ತು ಪವನ ಶಕ್ತಿ ಆಧಾರಿತ ಚಾರ್ಜಿಂಗ್ ಕಾರ್ಯವಿಧಾನಗಳನ್ನು ಸರ್ಕಾರವು ಬಲವಾಗಿ ಪ್ರೋತ್ಸಾಹಿಸುತ್ತಿದೆ. ನಾವು ಸೌರಶಕ್ತಿಯಿಂದ ಚಾಲಿತವಾಗಿರುವ ಎಲೆಕ್ಟ್ರಿಕ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ಕೆಲಸ ಕಾರ್ಯ ಮಾಡುತ್ತಿದ್ದೇವೆ. ಇದು ಸಂಚಾರದಲ್ಲಿರುವ ಭಾರೀ ಟ್ರಕ್‌ಗಳು ಮತ್ತು ಬಸ್‌ಗಳನ್ನು ಚಾರ್ಜ್ ಮಾಡಲು ಅನುಕೂಲವಾಗಲಿದೆ” ಎಂದು ಅವರು ಹೇಳಿದರು.

“ಟೋಲ್ ಪ್ಲಾಜಾಗಳನ್ನು ಸೌರಶಕ್ತಿಯಿಂದ ಚಾಲಿತಗೊಳಿಸಲು ಸರ್ಕಾರವು ಪ್ರೋತ್ಸಾಹಿಸುತ್ತಿದೆ ಎಂದು ಹೇಳಿದ ಸಚಿವ ನಿತಿನ್ ಗಡ್ಕರಿ, ರಸ್ತೆ ಸಚಿವಾಲಯವು ಈ ತಂತ್ರಜ್ಞಾನವನ್ನು ಅಳವಡಿಸುವ ಸಲುವಾಗಿ ಅನೇಕ ಕಾರಿಡಾರ್​ಗಳಲ್ಲಿ ಪ್ರಯೋಗಗಳನ್ನು ನಡೆಸಲಾಗಿದೆ” ಎಂದರು.

“ಉತ್ತಮವಾಗಿ ಅಭಿವೃದ್ಧಿ ಹೊಂದಿದ ಮೂಲಸೌಕರ್ಯವು ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ, ಹೊಸ ವ್ಯವಹಾರಗಳನ್ನು ಸೃಷ್ಟಿಸುತ್ತದೆ ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುತ್ತದೆ ಎಂದು ಒತ್ತಿ ಹೇಳಿದ ಗಡ್ಕರಿ, “ನಾವು 26 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇಗಳನ್ನು ನಿರ್ಮಿಸುತ್ತಿದ್ದೇವೆ” ಎಂದು ಹೇಳಿದರು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:51 pm, Mon, 12 September 22