2 ವರ್ಷಗಳಲ್ಲಿ ಪೆಟ್ರೋಲ್ ವಾಹನ- ಎಲೆಕ್ಟ್ರಿಕ್ ಕಾರುಗಳ ಬೆಲೆ ಒಂದೇ ಆಗಲಿದೆ; ಸಚಿವ ನಿತಿನ್ ಗಡ್ಕರಿ

ನಾವು 2023ರ ವೇಳೆಗೆ ಪ್ರಮುಖ ಹೆದ್ದಾರಿಗಳಲ್ಲಿ 600 ಇವಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸುತ್ತಿದ್ದೇವೆ. ಚಾರ್ಜಿಂಗ್ ಸ್ಟೇಷನ್‌ಗಳು ಸೌರ ಅಥವಾ ಪವನ ವಿದ್ಯುತ್‌ನಂತಹ ನವೀಕರಿಸಬಹುದಾದ ಮೂಲಗಳಿಂದ ಚಾಲಿತವಾಗಲಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

2 ವರ್ಷಗಳಲ್ಲಿ ಪೆಟ್ರೋಲ್ ವಾಹನ- ಎಲೆಕ್ಟ್ರಿಕ್ ಕಾರುಗಳ ಬೆಲೆ ಒಂದೇ ಆಗಲಿದೆ; ಸಚಿವ ನಿತಿನ್ ಗಡ್ಕರಿ
ನಿತಿನ್​ ಗಡ್ಕರಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 25, 2021 | 1:54 PM

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗುತ್ತಿದ್ದಂತೆ ಜನರೆಲ್ಲರೂ ಎಲೆಕ್ಟ್ರಿಕ್ ಕಾರು, ಬೈಕಿನತ್ತ ಒಲವು ತೋರಿಸುತ್ತಿದ್ದಾರೆ. ಆದರೆ, ಎಲೆಕ್ಟ್ರಿಕ್ ವಾಹನಗಳ ಬೆಲೆ ಬಹಳ ದುಬಾರಿ ಇರುವುದರಿಂದ ಹಾಗೂ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಷನ್​ಗಳು ಹೆಚ್ಚಾಗಿ ಇಲ್ಲದ ಕಾರಣ ಗ್ರಾಹಕರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕೊಂಚ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ಕಾರುಗಳನ್ನು ಬಳಸಲು ವಾಹನ ಮಾಲೀಕರನ್ನು ಪ್ರೋತ್ಸಾಹಿಸುತ್ತಿದ್ದರೂ ಭಾರತದಲ್ಲಿ ವಿದ್ಯುತ್ ಚಾಲಿತ ವಾಹನಗಳ ಮಾರುಕಟ್ಟೆ ಬೇರೆ ದೇಶಗಳಿಗೆ ಹೋಲಿಸಿದರೆ ಹೆಚ್ಚೇನೂ ಅಭಿವೃದ್ಧಿಯಾಗಿಲ್ಲ. ಇದಕ್ಕೆ ಮುಖ್ಯ ಕಾರಣವೆಂದರೆ ಎಲೆಕ್ಟ್ರಿಕ್ ವಾಹನಗಳ ಹೆಚ್ಚಿನ ಬೆಲೆ. ಇದೀಗ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಸದ್ಯದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಬೆಲೆ ಹಾಗೂ ಎಲೆಕ್ಟ್ರಿಕ್ ವಾಹನಗಳ ಬೆಲೆ ಎರಡೂ ಸಮಾನವಾಗಲಿದೆ. ಭಾರತದಲ್ಲಿ ಸದ್ಯದಲ್ಲೇ ಎಲೆಕ್ಟ್ರಿಕ್ ವಾಹನಗಳ ಕ್ರಾಂತಿಯಾಗಲಿದೆ ಎಂದಿದ್ದಾರೆ.

ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಎಫ್​ವೈ 21 ಎಜಿಎಂನ ವಾರ್ಷಿಕ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ನಿತಿನ್ ಗಡ್ಕರಿ, ಎರಡು ವರ್ಷಗಳಲ್ಲಿ EVಗಳ (ಎಲೆಕ್ಟ್ರಿಕ್ ವಾಹನಗಳ) ಬೆಲೆಯು ಪೆಟ್ರೋಲ್ ವಾಹನಗಳಿಗೆ ಸಮಾನವಾಗಲಿದೆ ಎಂದು ಹೇಳಿದ್ದಾರೆ. ದೇಶದಲ್ಲಿ EV ಚಾರ್ಜಿಂಗ್ ಸೌಲಭ್ಯಗಳನ್ನು ವಿಸ್ತರಿಸಲು ಸರ್ಕಾರವು ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ನಾವು 2023ರ ವೇಳೆಗೆ ಪ್ರಮುಖ ಹೆದ್ದಾರಿಗಳಲ್ಲಿ 600 ಇವಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸುತ್ತಿದ್ದೇವೆ. ಚಾರ್ಜಿಂಗ್ ಸ್ಟೇಷನ್‌ಗಳು ಸೌರ ಅಥವಾ ಪವನ ವಿದ್ಯುತ್‌ನಂತಹ ನವೀಕರಿಸಬಹುದಾದ ಮೂಲಗಳಿಂದ ಚಾಲಿತವಾಗಲಿದೆ ಎಂದು ಅವರು ಹೇಳಿದ್ದಾರೆ.

ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಕಡಿಮೆ ಇರುವ ಕಾರಣ ಅವುಗಳ ಬೆಲೆ ಹೆಚ್ಚಿದೆ ಎಂದು ಗಡ್ಕರಿ ಹೇಳಿದ್ದಾರೆ. ಭಾರತವು EV ಕ್ರಾಂತಿಯನ್ನು ನಿರೀಕ್ಷಿಸುತ್ತಿದೆ. 250 ಸ್ಟಾರ್ಟಪ್ ವ್ಯವಹಾರಗಳು ವೆಚ್ಚ-ಪರಿಣಾಮಕಾರಿ EV ತಂತ್ರಜ್ಞಾನ ರಚನೆಯಲ್ಲಿ ತೊಡಗಿವೆ. ಇದಲ್ಲದೆ, ಪ್ರಮುಖ ವಾಹನ ತಯಾರಕರು EV ಉತ್ಪಾದನೆಯ ವೆಚ್ಚವನ್ನು ಕಡಿತಗೊಳಿಸುವ ಪ್ರಯತ್ನದಲ್ಲಿದ್ದಾರೆ. ಇವಿಗಳ ಮೇಲೆ ಜಿಎಸ್‌ಟಿ ಕೇವಲ 5% ಮತ್ತು ಲಿಥಿಯಂ-ಐಯಾನ್ ಬ್ಯಾಟರಿಗಳ ಬೆಲೆಯೂ ಕುಸಿಯುತ್ತಿದೆ. ಪ್ರತಿ ಕಿಲೋಮೀಟರ್‌ಗೆ ಪೆಟ್ರೋಲ್ ಚಾಲಿತ ಕಾರಿನ ಬೆಲೆ ಪ್ರತಿ ಕಿಮೀಗೆ 10 ರೂ, ಡೀಸೆಲ್ ಪ್ರತಿ ಕಿ.ಮೀಗೆ 7 ರೂ. ಬೇಕಾದರೆ ಎಲೆಕ್ಟ್ರಿಕ್ ವಾಹನಗಳಿಗೆ ಪ್ರತಿ ಕಿ.ಮೀಗೆ 1 ರೂ. ಮಾತ್ರ ಖರ್ಚಾಗಲಿದೆ ಎಂದು ಗಡ್ಕರಿ ಹೇಳಿದ್ದಾರೆ.

ವರ್ಚುವಲ್ ಈವೆಂಟ್ ಅನ್ನು ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ, ಸಾಂಪ್ರದಾಯಿಕ ಇಂಧನಗಳಾದ ಗ್ಯಾಸೋಲಿನ್ ಮತ್ತು ಡೀಸೆಲ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಪರ್ಯಾಯ ಇಂಧನಗಳಾದ ಎಥೆನಾಲ್ ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ಬಳಕೆಗೆ ಒತ್ತು ನೀಡಿದ್ದಾರೆ. ಅದೇ ಸಮಯದಲ್ಲಿ, ಆಂತರಿಕ ದಹನಕಾರಿ ಎಂಜಿನ್ ಹೊಂದಿರುವ ಹೊಸ ವಾಹನಗಳ ನೋಂದಣಿ ವೆಚ್ಚದಲ್ಲಿ ಎಲೆಕ್ಟ್ರಿಕ್ ವಾಹನಗಳ ಪರಿಚಯವು ಬರುವುದಿಲ್ಲ ಎಂದು ಅವರು ಪುನರುಚ್ಚರಿಸಿದರು. ನಾವು ಎಲೆಕ್ಟ್ರಿಕ್ ವಾಹನಗಳು ಮತ್ತು ಪರ್ಯಾಯ ಇಂಧನಗಳ ಬಳಕೆಯನ್ನು ಪ್ರೋತ್ಸಾಹಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Nitin Gadkari: ಬೇರೆ ಪ್ರಯಾಣಿಕರೊಂದಿಗೆ ಕ್ಯೂನಲ್ಲಿ ನಿಂತು ವಿಮಾನ ಹತ್ತಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ವಿಡಿಯೋ ವೈರಲ್

ನಿತಿನ್ ಗಡ್ಕರಿ ತಮ್ಮ ಯೂಟ್ಯೂಬ್ ಚಾನಲ್​ನಿಂದ 4 ಲಕ್ಷ ರೂ. ಹೇಗೆ ಸಂಪಾದಿಸುತ್ತಾರೆ? ಏನಿದೆ ಅದರಲ್ಲಿ?

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್