AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elephant Attack: ತಮಿಳುನಾಡಿನಲ್ಲಿ ಕಾಡಾನೆ ‘ಅರಿಕೊಂಬನ್’ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಸಾವು

ಕಾಡಾನೆ ಅರಿಕೊಂಬನ್ ದಾಳಿಯಿಂದ ಗಾಯಗೊಂಡಿದ್ದ ಕಂಬಂ ಮೂಲದ ಪಾಲರಾಜ್ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

Elephant Attack: ತಮಿಳುನಾಡಿನಲ್ಲಿ ಕಾಡಾನೆ 'ಅರಿಕೊಂಬನ್’ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಸಾವು
ಆನೆ ದಾಳಿImage Credit source: IndiaToday
Follow us
ನಯನಾ ರಾಜೀವ್
|

Updated on:May 30, 2023 | 11:31 AM

ಕಾಡಾನೆ ಅರಿಕೊಂಬನ್ ದಾಳಿಯಿಂದ ಗಾಯಗೊಂಡಿದ್ದ ಕಂಬಂ ಮೂಲದ ಪಾಲರಾಜ್ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಶನಿವಾರ ಕುಂಬಂ ಪ್ರವೇಶಿಸಿದ ಅರಿಕೊಂಬ ಆನೆ ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿತ್ತು, ಆಕ್ರಮಣಕಾರಿ ಆನೆಯು ಆಟೋರಿಕ್ಷಾಗೆ ಹಾನಿ ಮಾಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ಭೀಕರ ದಾಳಿ ಸಂಭವಿಸಿದಾಗ ಪಾಲ​ರಾಜ್ ಅವರು ವಾಹನದೊಳಗೆ ಇದ್ದರು ಹೀಗಾಗಿ ತಲೆಗೆ ತೀವ್ರ ಗಾಯವಾಗಿ ರಕ್ತಸ್ರಾವವಾಗಿತ್ತು. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು. ಆನೆಯನ್ನು ಶಾಂತಗೊಳಿಸಿ ಮೇಘಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ತಮಿಳುನಾಡು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದ್ದರೂ, ಆನೆ ದಟ್ಟ ಅರಣ್ಯಕ್ಕೆ ವಾಪಸಾದ ಕಾರಣ ಆನೆ ಸಿಗಲಿಲ್ಲ.

ಇಡುಕ್ಕಿ ಜಿಲ್ಲೆಯ ಚಿನ್ನಕನಾಲ್ ಪ್ರದೇಶದಲ್ಲಿ ಆನೆ 11 ಜನರನ್ನು ಕೊಂದು 300 ಮನೆಗಳು ಮತ್ತು ಅಂಗಡಿಗಳನ್ನು ನಾಶಪಡಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: ತಮಿಳುನಾಡು ಗಡಿಯಲ್ಲಿ ಆನೆ ಹಾವಳಿ: ಸಿಕ್ಕ ಸಿಕ್ಕವರ ಮೇಲೆ ದಾಳಿ, ಇಬ್ಬರು ಸಾವು, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಚಿನ್ನಕನಾಲ್‌ನಿಂದ ಪೆರಿಯಾರ್ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸುಮಾರು 100 ಕಿಲೋಮೀಟರ್‌ಗಳವರೆಗೆ ಸಾಗುವ ಮೊದಲು ಆನೆಯನ್ನು ಶಾಂತಗೊಳಿಸಲಾಯಿತು ಮತ್ತು ರೇಡಿಯೊ ಕಾಲರ್ ಹಾಕಲಾಗಿತ್ತು. ಆದಾಗ್ಯೂ, ಇದು ತಮಿಳುನಾಡು ಅರಣ್ಯ ವ್ಯಾಪ್ತಿಯೊಳಗೆ ಚಲಿಸುತ್ತಲೇ ಇತ್ತು. ತಮಿಳುನಾಡು ಮತ್ತು ಕೇರಳ ಅರಣ್ಯಾಧಿಕಾರಿಗಳು ಆನೆಯ ಚಲನವಲನದ ಮೇಲೆ ನಿಗಾ ಇಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:30 am, Tue, 30 May 23

KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ