AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್

ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗಲಭೆ ಪೀಡಿತ ಇರಾನ್​ನಲ್ಲಿರುವ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಿದೆ. ಆದರೆ, ಅನೇಕ ವಿದ್ಯಾರ್ಥಿಗಳು ಟೆಹ್ರಾನ್ ಬಿಟ್ಟುಹೋಗಲು ನಿರಾಕರಿಸಿ ಅಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ. ಉಳಿದ ವಿದ್ಯಾರ್ಥಿಗಳನ್ನು ಟೆಹ್ರಾನ್​ನಿಂದ ಹೊರಗೆ ಸುರಕ್ಷಿತವಾದ ಜಾಗದಲ್ಲಿ ಇರಿಸಲಾಗಿದೆ. ಸದ್ಯಕ್ಕೆ ಇರಾನ್​​ನಿಂದ ಭಾರತೀಯರನ್ನು ವಾಪಾಸ್ ಭಾರತಕ್ಕೆ ವಿಮಾನದಲ್ಲಿ ಕರೆಸಿಕೊಳ್ಳುವುದು ಅಸಾಧ್ಯವಾಗಿರುವುದರಿಂದ ಅವರನ್ನು ಅಲ್ಲಿಯೇ ಇರಿಸಿಕೊಳ್ಳಲಾಗಿದೆ.

ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್
Iran Israel Conflict
ಸುಷ್ಮಾ ಚಕ್ರೆ
|

Updated on: Mar 03, 2026 | 7:00 PM

Share

ಟೆಹ್ರಾನ್, ಮಾರ್ಚ್ 3: ಇರಾನ್‌ನ ರಾಜಧಾನಿ ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್‌ನ (Israel Attack) ದಾಳಿ ನಡೆಯುತ್ತಿರುವುದರಿಂದ ಹಲವಾರು ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನ ಹೊರಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಕೆಲವು ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಟೆಹ್ರಾನ್‌ನಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ. ಅಂಥವರನ್ನು ಹೊರತುಪಡಿಸಿ ಉಳಿದವರನ್ನು ಶಿಫ್ಟ್ ಮಾಡಲಾಗಿದೆ. ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅವರಿಗೆ ತುರ್ತು ಸಂಪರ್ಕ ಸಂಖ್ಯೆಗಳನ್ನು ಸಹ ನೀಡಲಾಗಿದೆ.

ಟೆಹ್ರಾನ್ ನಗರದಲ್ಲಿ ದಾಳಿಯ ಅಪಾಯ ಹೆಚ್ಚಾದ ಕಾರಣದಿಂದ ಭಾರತದ ರಾಯಭಾರ ಕಚೇರಿಯು ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನ ಹೊರಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ರಾಯಭಾರ ಕಚೇರಿಯು ಅವರಿಗೆ ಸಾರಿಗೆ, ಆಹಾರ ಮತ್ತು ವಸತಿ ವ್ಯವಸ್ಥೆಗಳನ್ನು ಮಾಡಿದೆ. ರಾಯಭಾರ ಕಚೇರಿಯ ಸಹಾಯವನ್ನು ನಿರಾಕರಿಸಿದ ಕೆಲವೇ ವಿದ್ಯಾರ್ಥಿಗಳು ಮಾತ್ರ ಟೆಹ್ರಾನ್‌ನಲ್ಲಿ ಉಳಿದಿದ್ದಾರೆ ಎಂದು ಕಾನ್ಸುಲೇಟ್ ತಿಳಿಸಿದೆ.

ಇದನ್ನೂ ಓದಿ: ಇರಾನ್​ ಮೇಲೆ ಇಸ್ರೇಲ್-ಯುಎಸ್​ ದಾಳಿ; ಸಾವಿನ ಸಂಖ್ಯೆ 787ಕ್ಕೆ ಏರಿಕೆ

“ಇನ್ನೂ ಇರಾನ್‌ನಲ್ಲಿಯೇ ಉಳಿದಿರುವ ಇತರ ಭಾರತೀಯ ವಿದ್ಯಾರ್ಥಿಗಳು ಮತ್ತು ಭಾರತೀಯ ಪ್ರಜೆಗಳಿಗೆ ಈ ಹಿಂದೆ ನೀಡಲಾದ ಸಲಹೆಯು ಬದಲಾಗದೆ ಉಳಿದಿದೆ. ನೀವು ಇರುವ ಸ್ಥಳದಲ್ಲಿಯೇ ಇರಿ, ಸಾಧ್ಯವಾದಷ್ಟು ಮನೆ ಅಥವಾ ರೂಂನ ಒಳಗಿರಿ. ಕಿಟಕಿಗಳಿಂದ ದೂರವಿರಿ. ಎಲ್ಲಾ ಸಮಯದಲ್ಲೂ ಸರಿಯಾದ ಎಚ್ಚರಿಕೆ ವಹಿಸಿ. ಪ್ರತಿಭಟನೆಗಳ ಪ್ರದೇಶಗಳ ಬಳಿ ಓಡಾಡಬೇಡಿ. ಇರಾನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಿ” ಎಂದು ಭಾರತ ಸೂಚಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ