Fali S Nariman Death: ಸುಪ್ರೀಂಕೋರ್ಟ್​ನ ಹಿರಿಯ ವಕೀಲ ಫಾಲಿ ನಾರಿಮನ್ ನಿಧನ

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ಮಂಗಳವಾರ ರಾತ್ರಿ ದೆಹಲಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರು 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದಾರೆ. ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ದೇಶವು ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಿತು. ಅವರು 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರು ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

Fali S Nariman Death: ಸುಪ್ರೀಂಕೋರ್ಟ್​ನ ಹಿರಿಯ ವಕೀಲ ಫಾಲಿ ನಾರಿಮನ್ ನಿಧನ
ಎಸ್ ನಾರಿಮನ್
Follow us
|

Updated on:Feb 21, 2024 | 10:09 AM

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್(Fali S Nariman) ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ಮಂಗಳವಾರ ರಾತ್ರಿ ದೆಹಲಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರು 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದಾರೆ. ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ದೇಶವು ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಿತು. ಅವರು 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರು ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ನಾರಿಮನ್ ಜನವರಿ 10, 1929 ರಂದು ಮ್ಯಾನ್ಮಾರ್‌ನಲ್ಲಿ ಪಾರ್ಸಿ ಕುಟುಂಬದಲ್ಲಿ ಜನಿಸಿದರು . ಅವರು ಬಾಂಬೆ ಹೈಕೋರ್ಟ್‌ನಲ್ಲಿ ತಮ್ಮ ಕಾನೂನು ಅಭ್ಯಾಸವನ್ನು ಪ್ರಾರಂಭಿಸಿದರು.

ದೇವೇಗೌಡರ ಟ್ವೀಟ್​

ಅವರ ಪುತ್ರ ರೋಹಿಂಟನ್ ನಾರಿಮನ್ ಕೂಡ ಹಿರಿಯ ವಕೀಲರಾಗಿದ್ದು ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಯಾಗಿದ್ದಾರೆ. ನಾರಿಮನ್ ನವೆಂಬರ್ 1950ರಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಅವರು ಎಎಎಸ್​ಜಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಅವರ ಸುದೀರ್ಘ ಕಾನೂನು ವೃತ್ತಿ ಜೀವನದಲ್ಲಿ ನಾರಿಮನ್ ಅವರು ಅನೇಕ ದೊಡ್ಡ ಐತಿಹಾಸಿಕ ಪ್ರಕರಣಗಳ ಭಾಗವಾಗಿದ್ದಾರೆ. ಕೊಲಿಜಿಯಂ ವ್ಯವಸ್ಥೆ ಅಸ್ತಿತ್ವಕ್ಕೆ ಬರಲು ಈ ವಿಷಯ ಪ್ರಮುಖ ಕಾರಣ ಎನ್ನಲಾಗಿದೆ. 1975ರಲ್ಲಿ ಘೋಷಿಸಲಾದ ತುರ್ತು ಪರಿಸ್ಥಿತಿ ಸರ್ಕಾರದ ನಿರ್ಧಾರದಿಂದ ನಾರಿಮನ್ ಅವರು ಸಂತೋಷವಾಗಿರಲಿಲ್ಲ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರ ತೆಗೆದುಕೊಂಡ ತುರ್ತು ನಿರ್ಧಾರವನ್ನು ವಿರೋಧಿಸಿ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:34 am, Wed, 21 February 24