Emmanuel Macron: ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್​​​ಗೆ ಆಹ್ವಾನ

Republic Day 2024: ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಲಿದ್ದಾರೆ ಎಂದು ಕೇಂದ್ರದ ಮೂಲಗಳು ತಿಳಿಸಿದೆ.

Emmanuel Macron: ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್​​​ಗೆ ಆಹ್ವಾನ
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 22, 2023 | 11:17 AM

ದೆಹಲಿ.ಡಿ22: ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) ಆಗಮಿಸಲಿದ್ದಾರೆ ಎಂದು ಕೇಂದ್ರದ ಮೂಲಗಳು ತಿಳಿಸಿದೆ. ಇದಕ್ಕೂ ಮುನ್ನ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಂದು ಅವರಿಗೆ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂದ ಮೇಲೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ.

ಮ್ಯಾಕ್ರನ್ 2024 ರ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಲಿರುವ ಆರನೇ ಫ್ರಾನ್ಸ್​​​​ ನಾಯಕರಾಗಿದ್ದಾರೆ. ಫ್ರಾನ್ಸ್​​​ ಮಾಜಿ ಪ್ರಧಾನ ಮಂತ್ರಿ ಜಾಕ್ವೆಸ್ ಚಿರಾಕ್ ಅವರು 1976 ಮತ್ತು 1998 ರಲ್ಲಿ ಎರಡು ಬಾರಿ ಗಣರಾಜ್ಯೋತ್ಸವದ ಅತಿಥಿವನ್ನು ಸ್ವೀಕರಿಸಿದ್ದಾರೆ. 1980, 2008 ಮತ್ತು 2016ರಲ್ಲಿ ಮಾಜಿ ಅಧ್ಯಕ್ಷರಾದ ವ್ಯಾಲೆರಿ ಗಿಸ್ಕಾರ್ಡ್ ಡಿ’ಎಸ್ಟೇಂಗ್, ನಿಕೋಲಸ್ ಸರ್ಕೋಜಿ ಮತ್ತು ಫ್ರಾಂಕೋಯಿಸ್ ಹೊಲಾಂಡ್ ಈ ಅತಿಥಿವನ್ನು ಸ್ವೀಕರಿಸಿದರು.

ಈ ಹಿಂದೆ ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್​​​ಗೆ ಭೇಟಿ ನೀಡಿದರು. ಈ ಸಮಯದಲ್ಲಿ ಪ್ಯಾರಿಸ್‌ನಲ್ಲಿ ನಡೆದ ಬಾಸ್ಟಿಲ್ ಡೇ (ಫ್ರೆಂಚ್ ರಾಷ್ಟ್ರೀಯ ದಿನ) ಆಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದರು. ಇದರ ನಂತರ ಸೆಪ್ಟೆಂಬರ್‌ನಲ್ಲಿ ದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಫ್ರಾನ್ಸ್​​​​ ಅಧ್ಯಕ್ಷ ಮ್ಯಾಕ್ರನ್ ಭಾಗಿಯಾಗಿದ್ದರು. ಈ ಸಮಯದಲ್ಲಿ ಮೋದಿ ಮತ್ತು ಮ್ಯಾಕ್ರನ್ ಉಭಯ ರಾಷ್ಟ್ರಗಳ ಅಭಿವೃದ್ಧಿ ಹಾಗೂ ಸಂಬಂಧದ ಬಗ್ಗೆ ಮಾತುಕತೆ ನಡೆಸಿದರು.

ಇದನ್ನೂ ಓದಿ: ಭಾರತ ಮತ್ತು ಫ್ರಾನ್ಸ್ ನಡುವಿನ ಸಂಬಂಧ ಹೊಸ ಎತ್ತರಕ್ಕೆ ಕೊಂಡೊಯ್ಯಲಾಗುವುದು: ಪ್ರಧಾನಿ ನರೇಂದ್ರ ಮೋದಿ

2023ರ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ಮುಖ್ಯ ಅತಿಥಿಯಾಗಿದ್ದರು. ಪ್ರತಿ ವರ್ಷ, ಭಾರತವು ತನ್ನ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ವಿದೇಶಿ ನಾಯಕರನ್ನು ಆಹ್ವಾನಿಸುತ್ತದೆ. ಆದರೆ ಭಾರತದ ಇತಿಹಾಸದಲ್ಲಿ 2021 ಮತ್ತು 2022ರ ಗಣರಾಜ್ಯೋತ್ಸವಕ್ಕೆ ಯಾರನ್ನು ಆಹ್ವಾನಿಸರಿಲಿಲ್ಲ. ಯಾಕೆಂದರೆ ಈ ಸಮಯದಲ್ಲಿ ಕೋವಿಡ್-19 ಇದ್ದ ಕಾರಣ ಆಹ್ವಾನಿಸಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:48 am, Fri, 22 December 23

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು