ಜಮ್ಮು ಮತ್ತು ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಪಡೆ
ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆಯುತ್ತಿರುವ ಮುಖಾಮುಖಿ ಕಾಳಗದಲ್ಲಿ ಭಾರತೀಯ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಭದ್ರತಾ ಪಡೆಗಳು ಬುಡ್ಗಾಮ್ ಜಿಲ್ಲೆಯ ಚಾದೂರಾ ಪ್ರದೇಶದ ಮೋಚ್ವಾದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಸಿಕ್ಕ ನಂತರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದರು. ಉಗ್ರರು ಅಡಗಿರೋ ಪ್ರದೇಶ ಸುತ್ತುವರೆದು ಭಾರತೀಯ ಭದ್ರತಾ ಪಡೆ ಕಾರ್ಯಾಚರಣೆ ನಡೆಸ್ತಿದೆ. ಈ ದಾಳಿಯಲ್ಲಿ ಇಬ್ಬರು […]
ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆಯುತ್ತಿರುವ ಮುಖಾಮುಖಿ ಕಾಳಗದಲ್ಲಿ ಭಾರತೀಯ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಭದ್ರತಾ ಪಡೆಗಳು ಬುಡ್ಗಾಮ್ ಜಿಲ್ಲೆಯ ಚಾದೂರಾ ಪ್ರದೇಶದ ಮೋಚ್ವಾದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಸಿಕ್ಕ ನಂತರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದರು. ಉಗ್ರರು ಅಡಗಿರೋ ಪ್ರದೇಶ ಸುತ್ತುವರೆದು ಭಾರತೀಯ ಭದ್ರತಾ ಪಡೆ ಕಾರ್ಯಾಚರಣೆ ನಡೆಸ್ತಿದೆ. ಈ ದಾಳಿಯಲ್ಲಿ ಇಬ್ಬರು ಉಗ್ರರರ ಎನ್ ಕೌಂಟರ್ ಆಗಿದ್ದು, ಇನ್ನೂ ಕಾರ್ಯಾಚರಣೆ ಮುಂದುವರೆದಿದೆ.