Encounter: ಕಾಶ್ಮೀರದ ಬರಾಮುಲ್ಲಾದಲ್ಲಿ ಬೆಳ್ಳಂಬೆಳಗ್ಗೆ ಉಗ್ರರು- ಸೇನಾ ಪಡೆ ನಡುವೆ ಎನ್‌ಕೌಂಟರ್
Jammu Kashmir News: ಬರಾಮುಲ್ಲಾ ಜಿಲ್ಲೆಯ ವನಿಗಮ್ ಬಾಲಾ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ನಿರತವಾಗಿವೆ
ಶ್ರೀನಗರ: ಉತ್ತರ ಕಾಶ್ಮೀರದ ಬರಾಮುಲ್ಲಾ (Baramulla) ಜಿಲ್ಲೆಯ ವನಿಗಮ್ ಬಾಲಾ ಪ್ರದೇಶದಲ್ಲಿ ಇಂದು (ಶನಿವಾರ) ಬೆಳಗ್ಗೆ ಉಗ್ರರು (Terrorists) ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ (Encounter) ಕಾರ್ಯಾಚರಣೆ ನಡೆದಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳ ತಂಡ ಈ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು.
“ಬರಾಮುಲ್ಲಾ ಜಿಲ್ಲೆಯ ವನಿಗಮ್ ಬಾಲಾ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ನಿರತವಾಗಿವೆ” ಎಂದು ಪೊಲೀಸರು ತಿಳಿಸಿದ್ದಾರೆ.
#Encounter has started at Wanigam Bala area of #Baramulla district. Police and security forces are on the job. Further details shall follow.@JmuKmrPolice
— Kashmir Zone Police (@KashmirPolice) July 29, 2022
ಭದ್ರತಾ ಪಡೆಗಳು ಬಾಲಾ ಪ್ರದೇಶವನ್ನು ಸುತ್ತುವರೆದಿವೆ. ಅಲ್ಲಿ ಅಡಗಿಕೊಂಡಿದ್ದ ಉಗ್ರರು ಭದ್ರತಾ ಪಡೆಗಳಿಂದ ಪ್ರತೀಕಾರವಾಗಿ ಗುಂಡು ಹಾರಿಸಲು ಆರಂಭಿಸಿದರು. ಎರಡೂ ಕಡೆ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: Anantnag Encounter: ಕಾಶ್ಮೀರದ ಅನಂತ್ನಾಗ್ನಲ್ಲಿ ಎನ್‌ಕೌಂಟರ್; ಹಿಜ್ಬುಲ್ ಸಂಘಟನೆಯ ಇಬ್ಬರು ಉಗ್ರರ ಹತ್ಯೆ
ಕಳೆದ ಕೆಲವು ತಿಂಗಳುಗಳಿಂದ ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸರಣಿ ಎನ್‌ಕೌಂಟರ್‌ಗಳು ನಡೆಯುತ್ತಿದ್ದು, ಇದರಲ್ಲಿ ಅನೇಕ ಉಗ್ರರು ಮತ್ತು ಅವರ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಪೊಲೀಸರು ಮತ್ತು ಸೇನಾ ಪಡೆ ಜಂಟಿಯಾಗಿ ಹೆಚ್ಚಿನ ಕಾರ್ಯಾಚರಣೆಗಳನ್ನು ನಡೆಸಿವೆ.