Amritsar Encounter ಪಂಜಾಬ್ ಪೊಲೀಸರಿಂದ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶಂಕಿತ 4 ಗ್ಯಾಂಗ್​​ಸ್ಟರ್​​ಗಳ ಹತ್ಯೆ

ಗಾಯಕ  ಸಿಧು ಮೂಸೆವಾಲ ಪ್ರಕರಣದ ಶಂಕಿತ ಗ್ಯಾಂಗ್​​ಸ್ಟರ್​​ಗಳು ಮತ್ತು ಪಂಜಾಬ್ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಜನರು ಮನೆಯಿಂದ ಹೊರಗೆ ಬರಬಾರದು ಎಂದು ಪೊಲೀಸರು ಆದೇಶಿಸಿದ್ದಾರೆ.

Amritsar Encounter ಪಂಜಾಬ್ ಪೊಲೀಸರಿಂದ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶಂಕಿತ 4 ಗ್ಯಾಂಗ್​​ಸ್ಟರ್​​ಗಳ ಹತ್ಯೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 20, 2022 | 4:57 PM

ಪಂಜಾಬ್​​ನಲ್ಲಿ ಪೊಲೀಸರು (Punjab Police) ಮತ್ತು ಗಾಯಕ  ಸಿಧು ಮೂಸೆವಾಲ (Sidhu Moose Wala) ಪ್ರಕರಣದ ಶಂಕಿತ ಗ್ಯಾಂಗ್​​ಸ್ಟರ್​​ಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಜನರು ಮನೆಯಿಂದ ಹೊರಗೆ ಬರಬಾರದು ಎಂದು ಪೊಲೀಸರು ಆದೇಶಿಸಿದ್ದಾರೆ. ಪಂಜಾಬ್ ಪೊಲೀಸರ ಗ್ಯಾಂಗ್​​ಸ್ಟರ್ ನಿಗ್ರಹ ಪಡೆ ಅಮೃತಸರದ ಚೀಚಾ ಭಕ್ನಾಗ್ರಾಮದಲ್ಲಿ ಎನ್​​ಕೌಂಟರ್ ನಡೆಸಿದೆ. ಪ್ರಸ್ತುತ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಜನರು ಹೊರಗೆ ಬರದಂತೆ ಆದೇಶಿಸಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ನಾಲ್ವರು ಗ್ಯಾಂಗ್​​ಸ್ಟರ್​​ಗಳು ಹತ್ಯೆಯಾಗಿದ್ದು ಐದು ಪೊಲೀಸರಿಗೆ ಗಾಯಗಳಾಗಿವೆ. ಶುಹುದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲರನ್ನು ಮೇ 29ರಂದು ಪಂಜಾಬ್​​ನ ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಹಲವರನ್ನು ಬಂಧಿಸಿದ್ದು ಗ್ಯಾಂಗ್​​ಸ್ಟರ್​​ಗಳಾದ ಜಗರೂಪ್ ಸಿಂಗ್ ರೂಪಾ ಮತ್ತು ಮನಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸ್ಗಾಗಾಗಿ ಪೊಲೀಸರು ಹುಡುಕಾಡುತ್ತಿದ್ದರು.

ಮೂಸೆವಾಲ ಅವರಿಗೆ ಎಕೆ-47ನಿಂದ ಮೊದಲು ಶೂಟ್ ಮಾಡಿದ್ದು ಮನ್ನು ಕುಸ್ಸಾ ಎಂದು ಹೇಳಲಾಗುತ್ತಿದೆ ಪಂಜಾಬ್, ದೆಹಲಿ ಮತ್ತು ಮುಂಬೈ ಪೊಲೀಸರು ಮೂಸೆವಾಲ ಪ್ರಕರಣದಲ್ಲಿ ಹಲವಾರು ಮಂದಿಯನ್ನು ಬಂಧಿಸಿದ್ದಾರೆ. ಕೆನಡಾ ಮೂಲದ ಗೋಲ್ಡಿ ಬ್ರಾರ್ ಮತ್ತು ಜೈಲಿನಲ್ಲಿರುವ ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯಿ ಹತ್ಯೆಯ ಹೊಣೆ ಹೊತ್ತುಕೊಂಡಿದ್ದರು. ಈ ಪ್ರಕರಣದಲ್ಲಿ ಮೂವರು ಶೂಟರ್​​ಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದರು. ಇದರಲ್ಲಿ ಇಬ್ಬರು ಶೂಟೌಟ್ ನಡೆಸಿದ್ದು ದೀಪಕ್ ಮುಂಡಿ ಎಂಬಾತನನ್ನು ಇನ್ನೂ ಪತ್ತೆ ಹಚ್ಚಲು ಆಗಲಿಲ್ಲ.

Published On - 2:07 pm, Wed, 20 July 22

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು