AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kulgam Encounter: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಎನ್​ಕೌಂಟರ್​, ಮೂವರು ಲಷ್ಕರ್ ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಲಷ್ಕರ್-ಎ-ತೊಯ್ಬಾದ ಮೂವರು ಭಯೋತ್ಪಾದಕರನ್ನು ಸೇನಾ ಯೋಧರು ಹತ್ಯೆ ಮಾಡಿದ್ದಾರೆ.  ಸದ್ಯ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ವಾಸ್ತವವಾಗಿ, ಎನ್‌ಕೌಂಟರ್ ಗುರುವಾರ (ನವೆಂಬರ್ 16) ಕುಲ್ಗಾಮ್‌ನ ಸಾಮ್ನು ಪ್ರದೇಶದಲ್ಲಿ ಪ್ರಾರಂಭವಾಯಿತು. ಇದೀಗ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ನಡೆಯುತ್ತಿದೆ. ಸೇನೆಯ 34 ರಾಷ್ಟ್ರೀಯ ರೈಫಲ್ಸ್, ಎಲೈಟ್ ಸ್ಪೆಷಲ್ ಫೋರ್ಸ್ ಯೂನಿಟ್, ಪೊಲೀಸ್ ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಉಗ್ರರಿಗಾಗಿ ಶೋಧ ನಡೆಸುತ್ತಿವೆ.

Kulgam Encounter: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಎನ್​ಕೌಂಟರ್​, ಮೂವರು ಲಷ್ಕರ್ ಉಗ್ರರ ಹತ್ಯೆ
ಎನ್​ಕೌಂಟರ್Image Credit source: India Today
ನಯನಾ ರಾಜೀವ್
|

Updated on: Nov 17, 2023 | 11:29 AM

Share

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಲಷ್ಕರ್-ಎ-ತೊಯ್ಬಾದ ಮೂವರು ಭಯೋತ್ಪಾದಕರನ್ನು ಸೇನಾ ಯೋಧರು ಹತ್ಯೆ ಮಾಡಿದ್ದಾರೆ.  ಸದ್ಯ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ವಾಸ್ತವವಾಗಿ, ಎನ್‌ಕೌಂಟರ್ ಗುರುವಾರ (ನವೆಂಬರ್ 16) ಕುಲ್ಗಾಮ್‌ನ ಸಾಮ್ನು ಪ್ರದೇಶದಲ್ಲಿ ಪ್ರಾರಂಭವಾಯಿತು. ಇದೀಗ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ನಡೆಯುತ್ತಿದೆ. ಸೇನೆಯ 34 ರಾಷ್ಟ್ರೀಯ ರೈಫಲ್ಸ್, ಎಲೈಟ್ ಸ್ಪೆಷಲ್ ಫೋರ್ಸ್ ಯೂನಿಟ್, ಪೊಲೀಸ್ ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಉಗ್ರರಿಗಾಗಿ ಶೋಧ ನಡೆಸುತ್ತಿವೆ.

ಅಕ್ಟೋಬರ್‌ನಲ್ಲಿ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು . ಅವರು ಹಿಜ್ಬುಲ್ ಮುಜಾಹಿದ್ದೀನ್ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮತ್ತು ಸೇನೆಯ ಜಂಟಿ ತಂಡವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ನಿನ್ನೆಯಿಂದ ಪ್ರಾರಂಭಿಸಿತ್ತು. ಹಾಗಾಗಿ  ಪ್ರದೇಶದಲ್ಲಿ ಕತ್ತಲೆಯಾದ ಕಾರಣ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು ಮತ್ತು ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ಶುರು ಮಾಡಿತ್ತು.

ಮತ್ತಷ್ಟು ಓದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

ಅಕ್ಟೋಬರ್​ನಲ್ಲೂ ನಡೆದಿತ್ತು ಲಷ್ಕರ್ ಉಗ್ರರ ಹತ್ಯೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌(Shopian)ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಅಕ್ಟೋಬರ್ 10ರಂದು  ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿತ್ತು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಭಯೋತ್ಪಾದಕರನ್ನು ಮೋರಿಫತ್ ಮಕ್ಬೂಲ್ ಮತ್ತು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ದವರು ಎಂದು ಗುರುತಿಸಲಾಗಿದೆ. ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಉಗ್ರರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಫೆಬ್ರವರಿಯಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅಚಾನ್ ಪ್ರದೇಶದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿ ಸಂಜಯ್ ಶರ್ಮಾ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ