AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ನಂತರ ಸೋಮವಾರ ಸಂಜೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರಿಗೆ ಗಾಯ
ಸೈನಿಕರು
ನಯನಾ ರಾಜೀವ್
|

Updated on: Oct 03, 2023 | 8:22 AM

Share

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ನಂತರ ಸೋಮವಾರ ಸಂಜೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಅನುಮಾನಾಸ್ಪದ ಚಲನವಲನದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡ ಸೋಮವಾರ ಕಲಕೋಟೆ ಪ್ರದೇಶದಲ್ಲಿ ಬ್ರೋಹ್ ಮತ್ತು ಸೂಮ್ ಅರಣ್ಯ ವಲಯವನ್ನು ಸುತ್ತುವರೆದಿದೆ ಎಂದು ಅವರು ಹೇಳಿದರು. ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಉಗ್ರರು ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ, ಇದರ ಪ್ರತೀಕಾರವಾಗಿ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿನ ದಾಳಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Jammu And Kashmir: ಕುಪ್ವಾರಾದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ, ಐವರು ಉಗ್ರರ ಹತ್ಯೆ

ಸೈನಿಕರು ಆ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರು ಇದ್ದಾರೆ ಎಭುದನ್ನು ತಿಳಿದಿದ್ದರು, ಎಲ್ಲಾ ಸಂಭಾವ್ಯ ತಪ್ಪಿಸಿಕೊಳ್ಳುವ ಮಾರ್ಗಗಳನ್ನು ಮುಚ್ಚಲು ಪ್ರಯತ್ನಿಸಿದ್ದರು.

ಕಲಕೋಟೆಯ ಸಾಮಾನ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ಭಯೋತ್ಪಾದಕರ ಮೇಲೆ ನಿಗಾ ಇಡಲು ತಂತ್ರಜ್ಞಾನವನ್ನು ಬಳಸಲಾಗುತ್ತಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಪ್ರಸ್ತುತ, ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್