ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ನಂತರ ಸೋಮವಾರ ಸಂಜೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.
ಅನುಮಾನಾಸ್ಪದ ಚಲನವಲನದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡ ಸೋಮವಾರ ಕಲಕೋಟೆ ಪ್ರದೇಶದಲ್ಲಿ ಬ್ರೋಹ್ ಮತ್ತು ಸೂಮ್ ಅರಣ್ಯ ವಲಯವನ್ನು ಸುತ್ತುವರೆದಿದೆ ಎಂದು ಅವರು ಹೇಳಿದರು.
ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಉಗ್ರರು ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ, ಇದರ ಪ್ರತೀಕಾರವಾಗಿ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು ಓದಿ: Jammu And Kashmir: ಕುಪ್ವಾರಾದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ, ಐವರು ಉಗ್ರರ ಹತ್ಯೆ
ಸೈನಿಕರು ಆ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರು ಇದ್ದಾರೆ ಎಭುದನ್ನು ತಿಳಿದಿದ್ದರು, ಎಲ್ಲಾ ಸಂಭಾವ್ಯ ತಪ್ಪಿಸಿಕೊಳ್ಳುವ ಮಾರ್ಗಗಳನ್ನು ಮುಚ್ಚಲು ಪ್ರಯತ್ನಿಸಿದ್ದರು.
ಕಲಕೋಟೆಯ ಸಾಮಾನ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ಭಯೋತ್ಪಾದಕರ ಮೇಲೆ ನಿಗಾ ಇಡಲು ತಂತ್ರಜ್ಞಾನವನ್ನು ಬಳಸಲಾಗುತ್ತಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಪ್ರಸ್ತುತ, ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ