ಅರವಿಂದ್ ಕೇಜ್ರಿವಾಲ್ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಇಡಿ ಮೊರೆ, ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಕೋರಿಕೆ

|

Updated on: May 20, 2024 | 4:48 PM

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಪ್ರಸ್ತುತ ಮಧ್ಯಂತರ ಜಾಮೀನಿನಲ್ಲಿದ್ದು, ಜೂನ್ 2 ರಂದು ಶರಣಾಗಲು ಸೂಚಿಸಲಾಗಿದೆ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದೆ. ನ್ಯಾಯಾಲಯವು ಅರ್ಜಿಯನ್ನು ಜೂನ್ 2 ರಂದು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಏಜೆನ್ಸಿಯ ಮನಿ ಲಾಂಡರಿಂಗ್ ತನಿಖೆಯಲ್ಲಿ ಮಾರ್ಚ್ 21 ರಂದು ಇಡಿ ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು.

ಅರವಿಂದ್ ಕೇಜ್ರಿವಾಲ್ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಇಡಿ ಮೊರೆ, ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಕೋರಿಕೆ
ಅರವಿಂದ್ ಕೇಜ್ರಿವಾಲ್
Follow us on

ದೆಹಲಿ ಮೇ 20: ಇದೀಗ ರದ್ದುಗೊಂಡಿರುವ ದೆಹಲಿ ಮದ್ಯದ ಅಬಕಾರಿ ನೀತಿಗೆ (Delhi liquor excise policy)ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (Enforcement Directorate) ಸೋಮವಾರ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಕೇಜ್ರಿವಾಲ್ ಅವರು ಪ್ರಸ್ತುತ ಮಧ್ಯಂತರ ಜಾಮೀನಿನಲ್ಲಿದ್ದು, ಜೂನ್ 2 ರಂದು ಶರಣಾಗಲು ಸೂಚಿಸಲಾಗಿದೆ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದೆ.

ನ್ಯಾಯಾಲಯವು ಅರ್ಜಿಯನ್ನು ಜೂನ್ 2 ರಂದು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಏಜೆನ್ಸಿಯ ಮನಿ ಲಾಂಡರಿಂಗ್ ತನಿಖೆಯಲ್ಲಿ ಮಾರ್ಚ್ 21 ರಂದು ಇಡಿ ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು. ಮೇ 10 ರಂದು ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು, ಕೇಜ್ರಿವಾಲ್ ಮುಖ್ಯಮಂತ್ರಿ ಕಚೇರಿ ಮತ್ತು ದೆಹಲಿ ಸಚಿವಾಲಯಕ್ಕೆ ಭೇಟಿ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನದ ನಂತರ ಜೂನ್ 2 ರಂದು ಕೇಜ್ರಿವಾಲ್ ಶರಣಾಗಬೇಕು ಎಂದು ನ್ಯಾಯಾಲಯ ಹೇಳಿದೆ.

ಶುಕ್ರವಾರ, ಇಡಿ ತನ್ನ ಇತ್ತೀಚಿನ ಚಾರ್ಜ್‌ಶೀಟ್‌ನಲ್ಲಿ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷವನ್ನು ಅಬಕಾರಿ ನೀತಿ ತನಿಖೆಯಲ್ಲಿ ಆರೋಪಿಗಳೆಂದು ಹೆಸರಿಸಿದೆ. ಅದನ್ನು ತೋರಿಸುವ ‘ನಿರಾಕರಿಸಲಾಗದ ಸಾಕ್ಷ್ಯ’ಗಳ ಆಧಾರದ ಮೇಲೆ ವಿವರವಾದ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.  ಕೇಜ್ರಿವಾಲ್ ಅವರು ದೆಹಲಿಯ ಸಿಎಂ ಸ್ಥಾನವನ್ನು ಬಳಸಿಕೊಂಡು ‘ಕಂಪನಿ’ ಅಂದರೆ ಎಎಪಿಯಿಂದ ಪಿಎಂಎಲ್‌ಎ (ಹಣ ಲಾಂಡರಿಂಗ್ ತಡೆಗಟ್ಟುವಿಕೆ ಕಾಯ್ದೆ) ಯ 4 ಶಿಕ್ಷಾರ್ಹ ಮನಿ ಲಾಂಡರಿಂಗ್ ಅಪರಾಧವನ್ನು ಸುಲಭಗೊಳಿಸಲು ಪ್ರಮುಖ ಪಿತೂರಿಗಾರರಾಗಿದ್ದಾರೆ” ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ಎಎಪಿ ಒಂದು ರಾಜಕೀಯ ಪಕ್ಷವಾಗಿದ್ದು, ಪ್ರಜಾಪ್ರತಿನಿಧಿ ಕಾಯ್ದೆಯಡಿಯಲ್ಲಿ ಭಾರತದ ವೈಯಕ್ತಿಕ ನಾಗರಿಕರ ಸಂಘ ಅಥವಾ ಸಂಸ್ಥೆ ಎಂದು ವ್ಯಾಖ್ಯಾನಿಸಲಾಗಿದೆ ಮತ್ತು ಆದ್ದರಿಂದ ಇದನ್ನು PMLA ನ ಸೆಕ್ಷನ್ 70 ರ ಅಡಿಯಲ್ಲಿ ಪರಿಗಣಿಸಿದಂತೆ “ಕಂಪನಿ” ಎಂದು ವರ್ಗೀಕರಿಸಬಹುದು ಎಂದು ಇಡಿ ಈ ಹಿಂದೆ ಹೇಳಿಕೊಂಡಿದೆ.

ಇದನ್ನೂ ಓದಿ: ಯಾರೇ ಅಧಿಕಾರಕ್ಕೆ ಬಂದರೂ ನಿಫ್ಟಿ ಕುಸಿಯುತ್ತದೆ: ವಾಸ್ತವ ಬಿಚ್ಚಿಟ್ಟ ಷೇರುಮಾರುಕಟ್ಟೆ ಉದ್ಯಮಿ

ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಜೂನ್ 3 ರವರೆಗೆ ವಿಸ್ತರಿಸಿದೆ. ಅಬಕಾರಿ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ನಡೆಸಿದೆ ಎಂಬ ಆರೋಪವೆದ್ದಿದ್ದು, ದೆಹಲಿ ಸರ್ಕಾರವೇ ನಂತರ ಅದನ್ನು ರದ್ದುಗೊಳಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ