ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ಚಾರ್ಜ್​​​ಶೀಟ್​​​ನಲ್ಲಿ ಅರವಿಂದ್ ಕೇಜ್ರಿವಾಲ್, ಎಎಪಿ ಆರೋಪಿ

ಜಾರಿ ನಿರ್ದೇಶನಾಲಯವು ಶುಕ್ರವಾರ ಹೊಸ ಪೂರಕ ಆರೋಪಪಟ್ಟಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮೊದಲ ಬಾರಿಗೆ ಆರೋಪಿ ಎಂದು ಹೆಸರಿಸಿದೆ. ಕೇಂದ್ರ ತನಿಖಾ ಸಂಸ್ಥೆಯು ಆಮ್ ಆದ್ಮಿ ಪಕ್ಷವನ್ನೂ ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಅಪರಾಧದ ಆದಾಯಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಮತ್ತು ಹವಾಲಾ ಆಪರೇಟರ್‌ಗಳ ನಡುವೆ ಚಾಟ್‌ಗಳನ್ನು ಪತ್ತೆಹಚ್ಚಲಾಗಿದೆ ಎಂದು ಇಡಿ ಹೇಳಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ಚಾರ್ಜ್​​​ಶೀಟ್​​​ನಲ್ಲಿ ಅರವಿಂದ್ ಕೇಜ್ರಿವಾಲ್, ಎಎಪಿ ಆರೋಪಿ
ಅರವಿಂದ್ ಕೇಜ್ರಿವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on:May 17, 2024 | 5:42 PM

ದೆಹಲಿ ಮೇ 17: ಈಗ ರದ್ದುಗೊಳಿಸಿರುವ ದೆಹಲಿ ಮದ್ಯದ ಅಬಕಾರಿ ನೀತಿ 2021-22ಕ್ಕೆ (Delhi excise policy case) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (Enforcement Directorate) ಹೊಸ ಪೂರಕ ಆರೋಪಪಟ್ಟಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಮೊದಲ ಬಾರಿಗೆ ಆರೋಪಿ ಎಂದು ಹೆಸರಿಸಿದೆ. ಕೇಂದ್ರ ತನಿಖಾ ಸಂಸ್ಥೆಯು ಆಮ್ ಆದ್ಮಿ ಪಕ್ಷವನ್ನೂ (ಎಎಪಿ) ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಅಪರಾಧದ ಆದಾಯಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಮತ್ತು ಹವಾಲಾ ಆಪರೇಟರ್‌ಗಳ ನಡುವೆ ಚಾಟ್‌ಗಳನ್ನು ಪತ್ತೆಹಚ್ಚಲಾಗಿದೆ ಎಂದು ಇಡಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೇಜ್ರಿವಾಲ್ ತನ್ನ ಡಿವೈಸ್ ಗಳ ಪಾಸ್‌ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ ನಂತರ ಹವಾಲಾ ಆಪರೇಟರ್‌ಗಳ ಸಾಧನಗಳಿಂದ ಚಾಟ್‌ಗಳನ್ನು ಮರುಪಡೆಯಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಇದು ಪ್ರಕರಣದಲ್ಲಿ ದಾಖಲಾಗಿರುವ ಎಂಟನೇ ಪ್ರಾಸಿಕ್ಯೂಷನ್ ದೂರು ಇದಾಗಿದೆ. ಮೇ 10 ರಂದು ಇಡಿ ಏಳನೇ ಪ್ರಾಸಿಕ್ಯೂಷನ್ ದೂರನ್ನು ದಾಖಲಿಸಿದ್ದು,  ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ ಕವಿತಾ ಮತ್ತು ಇತರ ನಾಲ್ವರನ್ನು ಆರೋಪಿಗಳೆಂದು ಹೆಸರಿಸಿತ್ತು. ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದ್ದು, ನಡೆಯುತ್ತಿರುವ ಲೋಕಸಭೆ ಚುನಾವಣೆಯ ಸಮಯದಲ್ಲಿ ಎಎಪಿ ಪರ ಪ್ರಚಾರ ಮಾಡಲು ಅನುವು ಮಾಡಿಕೊಡಲು ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕವಿತಾ ಕೂಡ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾರ್ಚ್ 15 ರಂದು ಹೈದರಾಬಾದ್‌ನಿಂದ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ನೀಡಿದ ದೂರಿನ ಮೇರೆಗೆ 2022 ರಲ್ಲಿ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ದಾಖಲಿಸಿದ ಪ್ರಕರಣದಿಂದ ಇಡಿ ಮನಿ ಲಾಂಡರಿಂಗ್ ತನಿಖೆ ನಡೆಸುತ್ತಿದೆ.

ಕೆಲವು ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ 2021-22ರ ದೆಹಲಿ ಅಬಕಾರಿ ನೀತಿಯಲ್ಲಿ ಲೋಪದೋಷಗಳನ್ನು ಸೃಷ್ಟಿಸಲು ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರು ಸೇರಿದಂತೆ ಎಎಪಿ ನಾಯಕರು ಕ್ರಿಮಿನಲ್ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೊ ತುಣುಕು ವೈರಲ್;ಆಪ್ ನಾಯಕಿ ಹೇಳಿದ್ದೇನು?

ದಕ್ಷಿಣ ಭಾರತದ ಕೆಲವು ವ್ಯಕ್ತಿಗಳು/ಗುಂಪು ಈ ಪ್ರಕ್ರಿಯೆಯಲ್ಲಿ ಲಾಭ ಪಡೆದಿದ್ದಾರೆ. ಅವರ ಲಾಭದ ಸ್ವಲ್ಪ ಮೊತ್ತವನ್ನು ಆಮ್ ಆದ್ಮಿ ಪಕ್ಷಕ್ಕೆ ನೀಡಲಾಯಿತು, ಅದು ಗೋವಾ ವಿಧಾನಸಭಾ ಚುನಾವಣೆಗೆ ಪ್ರಚಾರಕ್ಕಾಗಿ ಬಳಸಿತು ಎಂದು ಸಿಬಿಐ ಮತ್ತು ಇಡಿ ಹೇಳಿದೆ.

ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಏತನ್ಮಧ್ಯೆ, ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಬಗ್ಗೆ ಇಡಿ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Fri, 17 May 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ