ಮಧ್ಯಾಹ್ನದೂಟ ಹಗರಣ: ರಾಜಸ್ಥಾನ ಸಚಿವ ರಾಜೇಂದ್ರ ಯಾದವ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿ ಇಡಿ ಶೋಧ

ಕಳೆದ ವರ್ಷ ಸೆಪ್ಟೆಂಬರ್ 7 ರಂದು, ಮಧ್ಯಾಹ್ನದ ಊಟ ಹಗರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಗೃಹ ಮತ್ತು ಉನ್ನತ ಶಿಕ್ಷಣ ಸಚಿವ ರಾಜೇಂದ್ರ ಯಾದವ್ ಅವರ ವಿವಿಧ ಆವರಣಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಕೊಟ್‌ಪುಟ್ಲಿಯಲ್ಲಿ ಅವರ ಸಂಬಂಧಿಕರು ನಡೆಸುತ್ತಿದ್ದಾರೆ ಎನ್ನಲಾದ ಬ್ಯಾಗ್ ತಯಾರಿಕಾ ಕಾರ್ಖಾನೆಯೊಂದರ ಮೇಲೂ ದಾಳಿ ನಡೆಸಲಾಗಿದೆ. ರಾಜೇಂದ್ರ ಸಿಂಗ್ ಯಾದವ್ ಅವರು ರಾಜಸ್ಥಾನ ವಿಧಾನಸಭೆಯ ಸದಸ್ಯರಾಗಿದ್ದು ರಾಜ್ಯದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಉಸ್ತುವಾರಿ ಸಚಿವರಾಗಿದ್ದಾರೆ.

ಮಧ್ಯಾಹ್ನದೂಟ ಹಗರಣ: ರಾಜಸ್ಥಾನ ಸಚಿವ ರಾಜೇಂದ್ರ ಯಾದವ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿ ಇಡಿ ಶೋಧ
ಇಡಿ
Follow us
|

Updated on:Sep 26, 2023 | 1:25 PM

ಜೈಪುರ ಸೆಪ್ಟೆಂಬರ್ 26: ಮಧ್ಯಾಹ್ನದ ಊಟ ಹಗರಣಕ್ಕೆ (Mid-day Meal Scam) ಸಂಬಂಧಿಸಿದಂತೆ ರಾಜಸ್ಥಾನ (Rajasthan) ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ರಾಜೇಂದ್ರ ಯಾದವ್ ಅವರಿಗೆ ಸಂಬಂಧಿಸಿದ ಹತ್ತು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (Enforcement Directorate) ಮಂಗಳವಾರ ಶೋಧ ನಡೆಸಿದೆ. ರಾಜಸ್ಥಾನದ ಜೈಪುರದ 10 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, ಕೇಂದ್ರ ತನಿಖಾ ಸಂಸ್ಥೆಯ ತಂಡಗಳು ಬೆಹ್ರೋಡ್ ಮತ್ತು ವಿರಾಟ್‌ನಗರ ಸೇರಿದಂತೆ ಹಲವು ಸ್ಥಳಗಳಲ್ಲಿ ತನಿಖೆ ನಡೆಸುತ್ತಿವೆ.

ಕಳೆದ ವರ್ಷ ಸೆಪ್ಟೆಂಬರ್ 7 ರಂದು, ಮಧ್ಯಾಹ್ನದ ಊಟ ಹಗರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಗೃಹ ಮತ್ತು ಉನ್ನತ ಶಿಕ್ಷಣ ಸಚಿವ ರಾಜೇಂದ್ರ ಯಾದವ್ ಅವರ ವಿವಿಧ ಆವರಣಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.

ಕೊಟ್‌ಪುಟ್ಲಿಯಲ್ಲಿ ಅವರ ಸಂಬಂಧಿಕರು ನಡೆಸುತ್ತಿದ್ದಾರೆ ಎನ್ನಲಾದ ಬ್ಯಾಗ್ ತಯಾರಿಕಾ ಕಾರ್ಖಾನೆಯೊಂದರ ಮೇಲೂ ದಾಳಿ ನಡೆಸಲಾಗಿದೆ. ರಾಜೇಂದ್ರ ಸಿಂಗ್ ಯಾದವ್ ಅವರು ರಾಜಸ್ಥಾನ ವಿಧಾನಸಭೆಯ ಸದಸ್ಯರಾಗಿದ್ದು ರಾಜ್ಯದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಉಸ್ತುವಾರಿ ಸಚಿವರಾಗಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಉನ್ನತ ಶಿಕ್ಷಣ, ಯೋಜನೆ, ರಾಜ್ಯ ಮೋಟಾರ್ ಗ್ಯಾರೇಜ್, ಗೃಹ ಮತ್ತು ನ್ಯಾಯ ಖಾತೆಗಳನ್ನು ಹೊಂದಿರುವ ರಾಜೇಂದ್ರ ಸಿಂಗ್ ಯಾದವ್ ಅವರಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ಬೆಳಗ್ಗೆ 7 ಗಂಟೆಗೆ ಇಡಿ ಶೋಧ ಶುರುಮಾಡಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿಬಿಜೆಪಿ ಮುಂದೊಂದು ದಿನ ರಾಮಮಂದಿರದ ಮೇಲೆ ಬಾಂಬ್ ಸ್ಫೋಟಿಸಿ ಮುಸ್ಲಿಮರನ್ನು ದೂಷಿಸುತ್ತದೆ: ಬಿಆರ್ ಪಾಟೀಲ್

ಯಾದವ್ ಜೈಪುರದ ಕೊಟ್‌ಪುಟ್ಲಿ ಪಟ್ಟಣದ ಶಾಸಕರಾಗಿದ್ದಾರೆ. ಮೂಲಗಳು ಹೇಳುವಂತೆ ತನಿಖಾ ಸಂಸ್ಥೆ ಇಡಿ ಮತ್ತು ಆದಾಯ ತೆರಿಗೆ ಇಲಾಖೆಗಳು  ಯಾದವ್‌ಗೆ ಸಂಬಂಧಿಸಿದ ಕಂಪನಿಗಳಿಗೆ ಸಂಬಂಧಿಸಿದ ಹುಡುಕಾಟಗಳಲ್ಲಿ ಭಾಗಿಯಾಗಿರಬಹುದು.

ದೆಹಲಿಯಿಂದ ಇಡಿ ಅಧಿಕಾರಿಗಳ ತಂಡ ಕೊಟ್‌ಪುಟ್ಲಿ ತಲುಪಿದ್ದು, ರಾಜೇಂದರ್ ಸಿಂಗ್ ಯಾದವ್ ಅವರ ಮನೆಯ ಹೊರಗೆ ಹಲವಾರು ವಾಹನಗಳಿವೆ. ರಾಜ್ಯ ಸಚಿವರ ನಿವಾಸ ಮತ್ತು ಕಚೇರಿಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Tue, 26 September 23

‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ
ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ
ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?