ಮನೀಶ್ ಸಿಸೋಡಿಯಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ ಇಡಿ
ದೆಹಲಿ ಅಬಕಾರಿ ನೀತಿ 2021-22 ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿದೆ
ದೆಹಲಿ: ದೆಹಲಿ ಅಬಕಾರಿ ನೀತಿ 2021-22 (Delhi Excise Policy case)ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಅಬಕಾರಿ ನೀತಿ 2021-22 ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ಎಎನ್ಐ ಸಂಸ್ಥೆ ವರದಿ ಮಾಡಿದೆ. ಆಮ್ ಆದ್ಮಿ ಪಕ್ಷವನ್ನು (ಎಎಪಿ) ತೊರೆದು ಬಿಜೆಪಿ ಸೇರ್ಪಡೆಗೊಂಡರೆ ಎಲ್ಲಾ ಪ್ರಕರಣಗಳನ್ನು ಮುಕ್ತಾಯಗೊಳಿಸುವುದಾಗಿ ಮತ್ತು ಬಿಜೆಪಿಯಿಂದ ನನಗೆ ಮುಖ್ಯಮಂತ್ರಿ ಸ್ಥಾನದ ಆಫರ್ ನೀಡಲಾಗಿದೆ ಎಂದು ಸಿಸೋಡಿಯಾ ಹೇಳಿಕೊಂಡ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ..ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಸಿಸೋಡಿಯಾ ಪ್ರಯತ್ನಿಸುತ್ತಿದ್ದಾರೆ ಎಂದು ಈ ಆರೋಪಗಳಿಗೆ ಬಿಜೆಪಿ ತಿರುಗೇಟು ನೀಡಿದೆ.
ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳ ಕುರಿತು ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವ ಮನೀಶ್ ಸಿಸೋಡಿಯಾ ಸೇರಿದಂತೆ 15 ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ.
ಕಳೆದ ವರ್ಷ ನವೆಂಬರ್ 17 ರಂದು ಜಾರಿಗೆ ಬಂದ ನೀತಿಯನ್ನು ದೆಹಲಿ ಸರ್ಕಾರದ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ ಸರ್ಕಾರ ಹಿಂತೆಗೆದುಕೊಂಡಿತು.
ಬಿಜೆಪಿ ಆಫರ್ ಬಂದಿತ್ತು ಎಂದ ಸಿಸೋಡಿಯಾ
ಅಬಕಾರಿ ನೀತಿ ಉಲ್ಲಂಘನೆಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಸಿಬಿಐ ತನಿಖೆಯನ್ನು ನಡೆಸುತ್ತಿರುವ ಹೊತ್ತಿನಲ್ಲಿ ಬಿಜೆಪಿ ನನಗೆ ಆಫರ್ ಮಾಡಿದೆ ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಆಮ್ ಆದ್ಮಿ ಪಕ್ಷವನ್ನು ತೊರೆದು ನಮ್ಮ ಪಕ್ಷಕ್ಕೆ ಬನ್ನಿ, ನಿಮ್ಮ ಎಲ್ಲಾ ಸಿಬಿಐ ತನಿಖೆ ಮತ್ತು ಎಲ್ಲ ಪ್ರಕರಣಗಳಿಂದ ಮುಕ್ತಿ ನೀಡುವಂತೆ ಮಾಡುತ್ತೇವೆ ಎಂಬ ಸಂದೇಶ ಬಿಜೆಪಿಯಿಂದ ಬಂದಿದೆ ಎಂದು ಹೇಳಿದ್ದಾರೆ. ಅದೇ ವೇಳೆ ತಮ್ಮ ವಿರುದ್ಧದ ಎಲ್ಲಾ ಪ್ರಕರಣಗಳು ಸುಳ್ಳು ಎಂದು ಸಿಸೋಡಿಯಾ ಹೇಳಿದ್ದಾರೆ.
Published On - 8:37 pm, Tue, 23 August 22