ದೆಹಲಿ ಮದ್ಯ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್​​ಗೆ ಇಡಿ ಸಮನ್ಸ್

ಕಳೆದ ತಿಂಗಳು, ಇಡಿ ಅರವಿಂದ್ ಕೇಜ್ರಿವಾಲ್ ಅವರನ್ನು ನವೆಂಬರ್ 2 ರಂದು ತನ್ನ ಮುಂದೆ ಹಾಜರಾಗುವಂತೆ ಕೇಳಿತ್ತು. ಆದರೆ, ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾವ್ ಹಾಜರಾಗಿರಲಿಲ್ಲ.

ದೆಹಲಿ ಮದ್ಯ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್​​ಗೆ ಇಡಿ ಸಮನ್ಸ್
ಅರವಿಂದ ಕೇಜ್ರಿವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on: Dec 18, 2023 | 7:00 PM

ದೆಹಲಿ ಡಿಸೆಂಬರ್ 18: ಈಗ ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ (Enforcement Directorate) ವಿಚಾರಣೆಗೆ ಕರೆದಿದೆ. ಗುರುವಾರ, ಡಿಸೆಂಬರ್ 21 ರಂದು ಏಜೆನ್ಸಿಯ ಮುಂದೆ ಹಾಜರಾಗುವಂತೆ ಅವರನ್ನು ಕೇಳಲಾಗಿದೆ. ಇದು ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯದಿಂದ ಎರಡನೇ ಸಮನ್ಸ್.

ಕಳೆದ ತಿಂಗಳು, ಇಡಿ ಅರವಿಂದ್ ಕೇಜ್ರಿವಾಲ್ ಅವರನ್ನು ನವೆಂಬರ್ 2 ರಂದು ತನ್ನ ಮುಂದೆ ಹಾಜರಾಗುವಂತೆ ಕೇಳಿತ್ತು. ಆದರೆ, ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರು ಹಾಜರಾಗಿರಲಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಪಕ್ಷದ ಇಬ್ಬರು ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಕೇಂದ್ರ ತನಿಖಾ ಸಂಸ್ಥೆಗಳು ಬಂಧಿಸಿವೆ.

ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನೂ ಸಿಬಿಐ ವಿಚಾರಣೆಗೆ ಒಳಪಡಿಸಿತ್ತು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ಟೀಕೆ; ಪ್ರಿಯಾಂಕಾ ಗಾಂಧಿ, ಅರವಿಂದ್ ಕೇಜ್ರಿವಾಲ್‌ಗೆ ಚುನಾವಣಾ ಆಯೋಗ ನೋಟಿಸ್

ದೆಹಲಿಯ ಸಿಬಿಐ ಪ್ರಧಾನ ಕಛೇರಿಯಲ್ಲಿ ಒಂಬತ್ತು ಗಂಟೆಗಳ ಕಾಲ ತಮ್ಮ ವಿಚಾರಣೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ತನಿಖಾ ಸಂಸ್ಥೆಯು ತನಗೆ 56 ಪ್ರಶ್ನೆಗಳನ್ನು ಕೇಳಿದೆ. ಸಿಬಿಐ ವಿಚಾರಣೆಯನ್ನು 9.5 ಗಂಟೆಗಳ ಕಾಲ ನಡೆಸಲಾಯಿತು. ನಾನು ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಸಂಪೂರ್ಣ ಆರೋಪಿತ ಮದ್ಯ ಹಗರಣವು ಸುಳ್ಳು ಮತ್ತು ಕೆಟ್ಟ ರಾಜಕೀಯವಾಗಿದೆ. ಎಎಪಿ ‘ಖಟ್ಟರ್ ಐಮಾಂದಾರ್ ಪಕ್ಷ (ಅಪ್ಪಟ ಪ್ರಾಮಾಣಿಕ ಪಕ್ಷ). ಅವರು ಎಎಪಿಯನ್ನು ಮುಗಿಸಲು ಬಯಸುತ್ತಾರೆ ಆದರೆ ದೇಶದ ಜನರು ನಮ್ಮೊಂದಿಗಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್