AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲ್ವಾಮಾ ದಾಳಿ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಮಾಡಿ ಸಂಭ್ರಮಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು

ಆರೋಪಿ ಫೈಜ್ ರಶೀದ್ ಗೆ 19 ವರ್ಷ. ಈತ ಅಪರಾಧ ಎಸಗಿದ್ದಾಗ ಕಾಲೇಜು ವಿದ್ಯಾರ್ಥಿಯಾಗಿದ್ದನು. ಈತ ಮೂರೂವರೆ ವರ್ಷಗಳಿಂದ ಬಂಧನದಲ್ಲಿದ್ದಾನೆ

ಪುಲ್ವಾಮಾ ದಾಳಿ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಮಾಡಿ  ಸಂಭ್ರಮಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Nov 02, 2022 | 1:20 PM

Share

ಬೆಂಗಳೂರು: 2019ರಲ್ಲಿ ಪುಲ್ವಾಮಾದಲ್ಲಿ (Pulwama Attack)  ಸಿಆರ್‌ಪಿಎಫ್ (CRPF)ಯೋಧರ ಮೇಲೆ ನಡೆದ ಉಗ್ರ ದಾಳಿಯ ನಂತರ ಫೇಸ್‌ಬುಕ್ ಪೋಸ್ಟ್‌ಗಳಲ್ಲಿ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದಕ್ಕಾಗಿ ಬೆಂಗಳೂರಿನ ವಿಶೇಷ ನ್ಯಾಯಾಲಯವು 22 ವರ್ಷದ ಯುವಕನಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ₹ 25,000 ದಂಡ ವಿಧಿಸಿದೆ. ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ (ಎನ್‌ಐಎ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಧೀಶ) ನ್ಯಾಯಾಧೀಶ ಗಂಗಾಧರ ಸಿ ಎಂ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಆರೋಪಿ ಫೈಜ್ ರಶೀದ್ ಗೆ 19 ವರ್ಷ. ಈತ ಅಪರಾಧ ಎಸಗಿದ್ದಾಗ ಕಾಲೇಜು ವಿದ್ಯಾರ್ಥಿಯಾಗಿದ್ದನು. ಈತ ಮೂರೂವರೆ ವರ್ಷಗಳಿಂದ ಬಂಧನದಲ್ಲಿದ್ದಾನೆ. ಸೆಕ್ಷನ್ 153 ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಸೆಕ್ಷನ್ 201 (ಸಾಕ್ಷ್ಯಗಳ ನಾಶಕ್ಕ ಕಾರಣವಾಗುವುದು) ಅಡಿಯಲ್ಲಿ ನ್ಯಾಯಾಲ ಈತನನ್ನು ದೋಷಿ ಎಂದು ಘೋಷಿಸಿತು. ಆದಾಗ್ಯೂ, ಸೆಕ್ಷನ್ 124A (ದೇಶದ್ರೋಹ) ಅಡಿಯಲ್ಲಿ ವಿಚಾರಣೆಯನ್ನು ನಡೆಸಲಾಗಿಲ್ಲ.ಅದನ್ನು ಸುಪ್ರೀಂಕೋರ್ಟ್ ನಿರ್ದೇಶನದಂತೆ ಸ್ಥಗಿತಗೊಳಿಸಲಾಗಿದೆ.

ಐಪಿಸಿಯ ಸೆಕ್ಷನ್ 153-ಎ ಅಡಿಯಲ್ಲಿ ಅಪರಾಧಕ್ಕಾಗಿ ಮೂರು ವರ್ಷಗಳ ಅವಧಿಗೆ  ಜೈಲು ಶಿಕ್ಷೆ ಮತ್ತು ₹ 10,000 ದಂಡವನ್ನು ಪಾವತಿಸುವ ಶಿಕ್ಷೆ ವಿಧಿಸಲಾಗಿದೆ. ಐಪಿಸಿ ಸೆಕ್ಷನ್ 201ರ ಅಡಿಯಲ್ಲಿ ಅಪರಾಧಕ್ಕಾಗಿ ಮೂರು ವರ್ಷಗಳ ಅವಧಿಯ ಜೈಲು ಶಿಕ್ಷೆ ಮತ್ತು ₹ 5,000 ದಂಡ ವಿಧಿಸಲಾಗಿದೆ.  ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 13 ರ ಅಡಿಯಲ್ಲಿ ಅಪರಾಧಕ್ಕಾಗಿ ಐದು ವರ್ಷಗಳ ಶಿಕ್ಷೆ ಮತ್ತು ₹ 10,000 ದಂಡವನ್ನು ವಿಧಿಸಲಾಯಿತು. ಈ ಶಿಕ್ಷೆಗಳು ಏಕಕಾಲದಲ್ಲಿ ನಡೆಯುತ್ತವೆ. ವಿವಿಧ ಮಾಧ್ಯಮ ಸಂಸ್ಥೆಗಳ ಫೇಸ್‌ಬುಕ್ ಪೋಸ್ಟ್ ನಡಿ ಉಗ್ರ ದಾಳಿಯನ್ನುಸಂಭ್ರಮಿಸಿ ಮತ್ತು ಭಾರತೀಯಸೇನೆಯನ್ನು ಲೇವಡಿ ಮಾಡಿ ರಶೀದ್ 23 ಕಾಮೆಂಟ್ ಗಳನ್ನು ಮಾಡಿದ್ದಾನೆ.

ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಉದ್ದೇಶದಿಂದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಆತ್ಮಾಹುತಿ ದಾಳಿಯನ್ನು ಬೆಂಬಲಿಸುವ ಮೂಲಕ ಆರೋಪಿಯು ತನ್ನ ಫೇಸ್‌ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ್ದಾನೆ ಎಂದು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ತನ್ನ ಇತ್ತೀಚಿನ ತೀರ್ಪಿನಲ್ಲಿ ಹೇಳಿದೆ.

ಆರೋಪಿಯು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಭಂಗ ತರುವ ಉದ್ದೇಶದಿಂದ ಪೋಸ್ಟ್‌ಗಳು ಮತ್ತು ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ತೋರಿಸಲು ಪ್ರಾಸಿಕ್ಯೂಷನ್ ಸಾಕ್ಷ್ಯ ನೀಡಿದೆ. ಈ ಸಾಕ್ಷ್ಯಗಳನ್ನು ಗಮನಿಸಿದರೆ ಇಲ್ಲಿ ಆರೋಪಿಯು ಮಾಡಿದ ಕಾಮೆಂಟ್‌ಗಳು ಉಗ್ರರ ದಾಳಿಯಿಂದ ಅವರು ಸಂತೋಷಪಟ್ಟಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಅಪರಾಧ ಮಾಡುವ ಸಮಯದಲ್ಲಿ ಆತ 19 ವರ್ಷದವನಾಗಿದ್ದರಿಂದ  ರಶೀದ್  ಶಿಕ್ಷೆಯಲ್ಲಿ  ವಿನಾಯಿತಿಗೆ ಅರ್ಹನಾಗಿದ್ದಾನೆ.

ಆತ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವನಾಗಿದ್ದು, ಬೇರೆ ಯಾವುದೇ ಅಪರಾಧ ಮಾಡಿಲ್ಲ .ಆತನನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಬೇಕು ಎಂದು ಅವನವಕೀಲರು ವಾದಿಸಿದರು.ಆದಾಗ್ಯೂ, ನ್ಯಾಯಾಲಯವು ಈ ವಾದವನ್ನು ನಿರಾಕರಿಸಿ ಜೈಲು ಶಿಕ್ಷೆಯನ್ನು ವಿಧಿಸಿತು.

ಇದು ರಶೀದ್ ಉದ್ದೇಶಪೂರ್ವಕ ಮಾಡಿದ ಕೃತ್ಯ ಎಂದು ನ್ಯಾಯಾಲಯ ಹೇಳಿದೆ. “ಆರೋಪಿಯು ಒಂದಲ್ಲ ಎರಡು ಬಾರಿ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿಲ್ಲ, ಫೇಸ್‌ಬುಕ್‌ನಲ್ಲಿ ಎಲ್ಲಾ ಸುದ್ದಿ ವಾಹಿನಿಗಳು ಮಾಡಿದ ಎಲ್ಲಾ ಪೋಸ್ಟ್‌ಗಳಿಗೆ ಕಾಮೆಂಟ್‌ಗಳನ್ನು ಮಾಡಿದ್ದಾನೆ. ಅವನು ಅನಕ್ಷರಸ್ಥ ಅಥವಾ ಸಾಮಾನ್ಯ ವ್ಯಕ್ತಿ ಅಲ್ಲ. ಆತ ಆ ಸಮಯದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ. ಆತ ಮಾಡಿದ್ದು ಅಪರಾಧ. ಆತ ತನ್ನ ಫೇಸ್‌ಬುಕ್ ಖಾತೆಯಿಂದ ಉದ್ದೇಶಪೂರ್ವಕವಾಗಿ ಪೋಸ್ಟ್‌ಗಳು ಮತ್ತು ಕಾಮೆಂಟ್‌ಗಳನ್ನು ಮಾಡಿದ್ದಾನೆಎಂದು ನ್ಯಾಯಾಲಯ ಗಮನಿಸಿದೆ.

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!