ಮದುವೆ ಮಾತುಕತೆಗೆಂದು ಮನೆಗೆ ಕರೆದು ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಸೈಲೆಂಟಾಗಿ ಸ್ಮಶಾನಕ್ಕೆ ಕಳುಹಿಸಿದ ಯುವತಿಯ ಪೋಷಕರು

ಮಗಳನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ಪೋಷಕರು ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಹೊಡೆದು ಕೊಂದಿರುವ ಘಟನೆ ತೆಲಂಗಾಣದ ಸಂಗರೆಡ್ಡಿಯಲ್ಲಿ ನಡೆದಿದೆ. ಮದುವೆ ಮಾತುಕತೆಗೆಂದು ಮನೆಗೆ ಕರೆದು ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬ್ಯಾಟ್​ನಿಂದ ಥಳಿಸಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ವಿದ್ಯಾರ್ಥಿಯ ಸಾವಿಗೆ ಕಾರಣವಾದ ಹಿಂಸಾತ್ಮಕ ದಾಳಿಗೂ ಮುನ್ನ ಯುವತಿಯ ಕುಟುಂಬ ಹಲವಾರು ಬಾರಿ ಎಚ್ಚರಿಕೆ ನೀಡಿತ್ತು, ಈ ಸಂಬಂಧಕ್ಕೆ ಅವರ ವಿರೋಧವಿತ್ತು.

ಮದುವೆ ಮಾತುಕತೆಗೆಂದು ಮನೆಗೆ ಕರೆದು ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಸೈಲೆಂಟಾಗಿ ಸ್ಮಶಾನಕ್ಕೆ ಕಳುಹಿಸಿದ ಯುವತಿಯ ಪೋಷಕರು
ಶ್ರವಣ್
Image Credit source: NDTV

Updated on: Dec 11, 2025 | 12:20 PM

ಸಂಗರೆಡ್ಡಿ, ಡಿಸೆಂಬರ್ 11: ಮಗಳನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ಪೋಷಕರು ಎಂಜಿನಿಯರಿಂಗ್ ವಿದ್ಯಾರ್ಥಿ(Student)ಯನ್ನು ಹೊಡೆದು ಕೊಂದಿರುವ ಘಟನೆ ತೆಲಂಗಾಣದ ಸಂಗರೆಡ್ಡಿಯಲ್ಲಿ ನಡೆದಿದೆ. ಮದುವೆ ಮಾತುಕತೆಗೆಂದು ಮನೆಗೆ ಕರೆದು ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬ್ಯಾಟ್​ನಿಂದ ಥಳಿಸಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ವಿದ್ಯಾರ್ಥಿಯ ಸಾವಿಗೆ ಕಾರಣವಾದ ಹಿಂಸಾತ್ಮಕ ದಾಳಿಗೂ ಮುನ್ನ ಯುವತಿಯ ಕುಟುಂಬ ಹಲವಾರು ಬಾರಿ ಎಚ್ಚರಿಕೆ ನೀಡಿತ್ತು, ಈ ಸಂಬಂಧಕ್ಕೆ ಅವರ ವಿರೋಧವಿತ್ತು.

ಮೃತ ವಿದ್ಯಾರ್ಥಿ ಹೆಸರು ಜ್ಯೋತಿ ಶ್ರವಣ್ ಸಾಯಿ ಆತ ಮೈಸಮ್ಮಗುಡದ ಸೇಂಟ್ ಪೀಟರ್ಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ಓದುತ್ತಿದ್ದ ಎರಡನೇ ವರ್ಷದ ಬಿ.ಟೆಕ್ ವಿದ್ಯಾರ್ಥಿ. ಆತ ಕುತುಬುಲ್ಲಾಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಅಮೀನ್‌ಪುರ ಸರ್ಕಲ್ ಇನ್ಸ್‌ಪೆಕ್ಟರ್ ನರೇಶ್ ನೀಡಿರುವ ಮಾಹಿತಿಯ ಪ್ರಕಾರ, ಶ್ರವಣ್ ಬೀರಮ್‌ಗುಡದ ಇಸುಕಬಾವಿ ನಿವಾಸಿ 19 ವರ್ಷದ ಶ್ರೀಜಾ ಜೊತೆ ಸಂಬಂಧ ಹೊಂದಿದ್ದ. ಅವರ ಸಂಬಂಧಕ್ಕೆ ಶ್ರೀಜಾ ಅವರ ಕುಟುಂಬದಿಂದ ವಿರೋಧವಿತ್ತು. ಈ ಹಿಂದೆ ಅವರು ಹುಡುಗನಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರು.

ಘಟನೆ ನಡೆದ ದಿನ, ಶ್ರೀಜಾಳ ಪೋಷಕರು ಶ್ರವಣ್​ನನ್ನು ಮದುವೆಯ ಬಗ್ಗೆ ಚರ್ಚಿಸಬೇಕು ಬಾ ಎಂದು ಮನೆಗೆ ಕರೆಸಿಕೊಂಡಿದ್ದರು. ಆತ ಬರುತ್ತಿದ್ದಂತೆ ಕುಟುಂಬ ಸದಸ್ಯರು, ಶ್ರೀಜಾಳ ತಾಯಿ ಸೇರಿ, ಶ್ರವಣ್ ಮೇಲೆ ಹಠಾತ್ತನೆ ಹಲ್ಲೆ ನಡೆಸಿ ಕ್ರಿಕೆಟ್ ಬ್ಯಾಟ್‌ನಿಂದ ತೀವ್ರವಾಗಿ ಹೊಡೆದಿದ್ದಾರೆ. ಆತನ ತಲೆಗೆ ಗಾಯಗಳಾಗಿದ್ದು, ಕಾಲು ಮತ್ತು ಪಕ್ಕೆಲುಬುಗಳಿಗೆ ಮುರಿತಗಳಾಗಿತ್ತು. ನಂತರ ಅವನನ್ನು ಕುಕತ್ಪಲ್ಲಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದ.

ಮತ್ತಷ್ಟು ಓದಿ: ಕೊಪ್ಪಳ ಯಲ್ಲಾಲಿಂಗ ಕೊಲೆ ಕೇಸ್​​: ಸಚಿವ ಶಿವರಾಜ ತಂಗಡಗಿ ಆಪ್ತ ಸೇರಿ 9 ಆರೋಪಿಗಳು ಖುಲಾಸೆ

ಅಮೀನ್‌ಪುರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖಾಧಿಕಾರಿಗಳು ಅಪರಾಧಕ್ಕೆ ಬಳಸಲಾದ ಕ್ರಿಕೆಟ್ ಬ್ಯಾಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಅವರು ದೃಶ್ಯವನ್ನು ಸಹ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಪ್ರಸ್ತುತ ದಾಳಿಯ ಹಿಂದಿನ ನಿಖರವಾದ ಉದ್ದೇಶದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಕುಟುಂಬದಲ್ಲಿ ಬೇರೆ ಯಾರಾದರೂ ಸದಸ್ಯರು ಭಾಗಿಯಾಗಿದ್ದಾರೆಯೇ ಎಂದು ಪತ್ತೆ ಹಚ್ಚುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ