Hanuman Jayanti: ಶಾಂತಿಯುತ ಹನುಮ ಜಯಂತಿ ಆಚರಣೆಗೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸಲಹೆ
Hanuman Jayanti Advisory: ಹನುಮ ಜಯಂತಿ(Hanuman Jayanti)ಗೂ ಮುನ್ನ ಕೇಂದ್ರ ಗೃಹ ಸಚಿವಾಲಯವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆಗಳನ್ನು ನೀಡಿದೆ. ಹನುಮ ಜಯಂತಿ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಕೇಳಿದೆ.
ಹನುಮ ಜಯಂತಿ(Hanuman Jayanti)ಗೂ ಮುನ್ನ ಕೇಂದ್ರ ಗೃಹ ಸಚಿವಾಲಯವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆಗಳನ್ನು ನೀಡಿದೆ. ಹನುಮ ಜಯಂತಿ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಕೇಳಿದೆ. ಸರ್ಕಾರಗಳು ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆ, ಹಬ್ಬದ ಶಾಂತಿಯುತ ಆಚರಣೆ ಮತ್ತು ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಯಾವುದೇ ಚಟುವಟಿಕೆಗಳು ನಡೆಯದಂತೆ ಎಚ್ಚರವಹಿಸಲು ತಿಳಿಸಲಾಗಿದೆ.
ರಾಮನವಮಿ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ನಡೆದ ಗಲಭೆಗಳನ್ನು ಗಮನದಲ್ಲಿಟ್ಟುಕೊಂಡು ಈ ಸಲಹೆಗಳನ್ನು ನೀಡಲಾಗಿದೆ. ನಾಳೆ(ಏಪ್ರಿಲ್ 6 ರಂದು) ಹನುಮ ಜಯಂತಿಯನ್ನು ದೇಶದಾದ್ಯಂತ ಆಯೋಜಿಸಲಾಗಿದೆ.
ಹನುಮ ಜಯಂತಿ ನಡೆಸಲು ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಬೇಕು. ಸೆಕ್ಷನ್ 144 ಜಾರಿಯಲ್ಲಿರುವ ಪ್ರದೇಶಗಳಲ್ಲಿ ಹನುಮ ಜಯಂತಿ ಬೇಡ ಎಂದು ಕೋಲ್ಕತ್ತಾ ಹೈಕೋರ್ಟ್ ನಿರ್ದೇಶಿಸಿದೆ.
ಮತ್ತಷ್ಟು ಓದಿ: ಪಶ್ಚಿಮ ಬಂಗಾಳದಲ್ಲಿ ರಾಮನವಮಿಯಂದು ಘರ್ಷಣೆ: ಪರಸ್ಪರ ಆರೋಪ ಮಾಡಿ ವಿಡಿಯೊ ಹಂಚಿಕೊಂಡ ಟಿಎಂಸಿ, ಬಿಜೆಪಿ
ಹೌರಾದಲ್ಲಿ ರಾಮನವಮಿ ವೇಳೆ ನಡೆದ ಹಿಂಸಾಚಾರದ ಕುರಿತು ಪಶ್ಚಿಮ ಬಂಗಾಳ ಸರ್ಕಾರದಿಂದ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ವಿವರವಾದ ವರದಿ ಕೇಳಿದೆ.
ದೆಹಲಿ ಪೊಲೀಸ್ ಸಿಬ್ಬಂದಿ ಇಂದು ಹನುಮ ಜಯಂತಿಗೆ ಮುನ್ನ ಜಹಾಂಗೀರ್ಪುರಿ ಪ್ರದೇಶದಲ್ಲಿ ಧ್ವಜ ಮೆರವಣಿಗೆ ನಡೆಸಿದರು. ಜಹಾಂಗೀರ್ಪುರಿಯಲ್ಲಿ ದೆಹಲಿ ಪೊಲೀಸರ ಹೊರತಾಗಿ, ಪ್ಯಾರಾ ಮಿಲಿಟರಿ ಫೋರ್ಸ್ ಸಿಬ್ಬಂದಿಯೂ ಇದ್ದಾರೆ. ಕಳೆದ ವರ್ಷ, ಜಹಗೀರ್‌ಪುರಿ ಪ್ರದೇಶದ ಜಿ ಬ್ಲಾಕ್‌ನಲ್ಲಿ ಹನುಮ ಜಯಂತಿಯ ಶೋಭಾ ಯಾತ್ರೆಯ ಮೇಲೆ ಕಲ್ಲು ತೂರಾಟ ನಡೆದ ನಂತರ ಗಲಭೆ ನಡೆದಿತ್ತು. ಆ ಸಮಯದಲ್ಲಿ ಶೋಭಾ ಯಾತ್ರೆಯನ್ನು ಮಸೀದಿಯೊಂದರ ಮುಂದೆ ತೆಗೆದುಕೊಂಡು ಹೋಗಲಾಗುತ್ತಿತ್ತು.
ಮಾರ್ಚ್ 30 ರಂದು ಹಬ್ಬದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಗಳು ನಡೆದಿತ್ತು. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು ಮತ್ತು ಈ ಪ್ರದೇಶದಲ್ಲಿ ಅಂಗಡಿಗಳನ್ನು ಧ್ವಂಸಗೊಳಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಹೌರಾದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹತ್ತಾರು ಜನರನ್ನು ಬಂಧಿಸಲಾಗಿದೆ.
ಇತ್ತೀಚಿನ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಸುರಕ್ಷಿತವಾಗಿದ್ದಾರೆ ಮತ್ತು ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ