AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ತಾಳಿ ಸರಕ್ಕಾಗಿ ಸಹೋದ್ಯೋಗಿ ನರ್ಸ್​ನ ಹತ್ಯೆ, ಆರೋಪಿ ಸರವಣನ್ ಬಂಧನ

ಈರೋಡ್‌ನಲ್ಲಿ ಚಿನ್ನದ ಸರಕ್ಕಾಗಿ ಸಹೋದ್ಯೋಗಿ ನರ್ಸ್ ಉಥಿರಾ ಅವರನ್ನು ಹತ್ಯೆ ಮಾಡಿದ ಆರೋಪಿ ಸರವಣನ್‌ ಬಂಧಿಸಲಾಗಿದೆ. ಈ ಕ್ರೂರ ಘಟನೆ ತಮಿಳುನಾಡಿನ ಕಾನೂನು ಸುವ್ಯವಸ್ಥೆ ಬಗ್ಗೆ ತೀವ್ರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಡಿಎಂಕೆ ಮುಖ್ಯಮಂತ್ರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ, ಸರ್ಕಾರವು ಅಪರಾಧ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದೆ.

ಚಿನ್ನದ ತಾಳಿ ಸರಕ್ಕಾಗಿ ಸಹೋದ್ಯೋಗಿ ನರ್ಸ್​ನ ಹತ್ಯೆ, ಆರೋಪಿ ಸರವಣನ್ ಬಂಧನ
ಆರೋಪಿ ಸರವಣನ್
ನಯನಾ ರಾಜೀವ್
|

Updated on: Oct 20, 2026 | 3:01 PM

Share

ಈರೋಡ್, ಅಕ್ಟೋಬರ್ 20: ಕೇವಲ ನಾಲ್ಕು ಪವನ್ ಚಿನ್ನದ ತಾಳಿ ಸರಕ್ಕಾಗಿ ಸಹೋದ್ಯೋಗಿ ಮಹಿಳಾ ನರ್ಸ್ ಒಬ್ಬರನ್ನು ಬೈಕ್‌ನಲ್ಲಿ ಕರೆದೊಯ್ದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ 23ವರ್ಷದ ನರ್ಸ್ ಸರವಣನ್ ಎಂಬಾತನನ್ನು ಈರೋಡ್ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ರಾಮನಾಥಪುರಂ ಮೂಲದ ಉಥಿರಾ ತಿರುಪ್ಪೂರು ಜಿಲ್ಲೆಯ ಪಲ್ಲಗೌಂಡಂಪಾಲಯಂನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅಕ್ಟೋಬರ್ 15 ರಂದು ಕರ್ತವ್ಯಕ್ಕೆ ತೆರಳಿದ್ದ ಅವರು ನಾಪತ್ತೆಯಾಗಿದ್ದರು. ಅಕ್ಟೋಬರ್ 17 ರಂದು ಪೆರುಂಡುರೈನ ವಿಜಯಮಂಗಲಂ ಟೋಲ್ ಗೇಟ್ ಸಮೀಪ ಅವರ ಮೃತದೇಹ ಪತ್ತೆಯಾಗಿತ್ತು.

ತನಿಖೆ ಕೈಗೆತ್ತಿಕೊಂಡ ಪೊಲೀಸರು, ಆಕೆಯ ಆಭರಣ ಕದಿಯಲು ಸಂಚು ರೂಪಿಸಿದ್ದ ಸಹೋದ್ಯೋಗಿ ಸರವಣನ್, ಉಥಿರಾ ಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿ ಚಿನ್ನದ ಸರ ದೋಚಿರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಕದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಕೊಲೆ ಪ್ರಕರಣವು ತಮಿಳುನಾಡಿನಲ್ಲಿ ಕದಡಿದ ಕಾನೂನು-ಸುವ್ಯವಸ್ಥೆಯ ಕುರಿತಾದ ಬಿಸಿಬಿಸಿ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ವಿಪಕ್ಷ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ಆಡಳಿತಾರೂಢ ಟಿವಿಕೆ (TVK) ಸರ್ಕಾರದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಪೊಲೀಸ್ ಇಲಾಖೆಯನ್ನೂ ಔಟ್‌ಸೋರ್ಸ್ ಮಾಡಿದ್ದೀರಾ?: ಮುಖ್ಯಮಂತ್ರಿಗಳು ಹೆಸರಿಗೆ ಮಾತ್ರ ಗೃಹ ಖಾತೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಇತರ ಇಲಾಖೆಗಳನ್ನು ಸಚಿವರಿಗೆ ಹಂಚಿದಂತೆ ಪೊಲೀಸ್ ಇಲಾಖೆಯನ್ನೂ ಬೇರೆಯವರಿಗೆ ಹೊರಗುತ್ತಿಗೆ ನೀಡಿದ್ದಾರೆಯೇ ಎಂದು ಸ್ಟಾಲಿನ್ ಪ್ರಶ್ನಿಸಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ವೈಟ್‌ಫೀಲ್ಡ್‌ನಲ್ಲಿ ತಡರಾತ್ರಿ ವಕೀಲನ ಕೊಲೆ! ಮನೆಗೆ ನುಗ್ಗಿ ಹಣೆಗೆ ಗುಂಡಿಟ್ಟು ಹತ್ಯೆ

ಮುಖ್ಯಮಂತ್ರಿಗಳ ನಿರ್ಲಕ್ಷ್ಯ ರಾಜ್ಯದಲ್ಲಿ ಜೀವಗಳನ್ನು ಬಲಿ ಪಡೆಯುತ್ತಿದೆ.ಡ್ರಗ್ಸ್ ಬಿಡಿ, ಕ್ರೀಡೆ ಆರಿಸಿ ಎಂದು ಪ್ರಚಾರ ಮಾಡುವ ಸಿಎಂ, ಮೊದಲು ವಿಶ್ರಾಂತಿ ಬಿಟ್ಟು ಗೃಹ ಇಲಾಖೆಯ ಜವಾಬ್ದಾರಿಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದು ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದರು.

ಹತ್ತಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯೊಬ್ಬ ಜಾಮೀನಿನ ಮೇಲೆ ಹೊರಬಂದ ಬೆನ್ನಲ್ಲೇ ಭಾನುವಾರ ಶಿವಗಂಗಾದಲ್ಲಿ ಸೇಡು ತೀರಿಸಿಕೊಳ್ಳಲು ಹತ್ಯೆಯಾಗಿರುವುದನ್ನು ಉಲ್ಲೇಖಿಸಿದ ಸ್ಟಾಲಿನ್, ಜಾಮೀನಿನ ಮೇಲೆ ಹೊರಬರುವ ಸಮಾಜಘಾತುಕರ ಮೇಲೆ ಪೊಲೀಸರಿಗೆ ನಿಗಾ ಇಡಲು ಸಾಧ್ಯವಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು.

ಶ್ರೀಲಂಕಾಕ್ಕೆ ಸುಮಾರು 135 ಕೆಜಿ ಮೆಥಾಂಫೆಟಮೈನ್ ಸಾಗಿಸಲು ಯತ್ನಿಸಿದ ಆರೋಪದ ಮೇಲೆ ಟಿವಿಕೆ ಪಕ್ಷದ ಪದಾಧಿಕಾರಿಯಾಗಿದ್ದ ಬೂಬಾಲನ್ ಎಂಬಾತನನ್ನು ತನಿಖಾ ಸಂಸ್ಥೆಗಳು ಬಂಧಿಸಿದ್ದು, ವಿಪಕ್ಷಗಳಿಗೆ ಸರ್ಕಾರದ ವಿರುದ್ಧ ಮುಗಿಬೀಳಲು ದೊಡ್ಡ ಅಸ್ತ್ರವಾಗಿದೆ. ಆದಾಗ್ಯೂ, ಆರೋಪ ಕೇಳಿಬಂದ ತಕ್ಷಣವೇ ಬೂಬಾಲನ್‌ನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಟಿವಿಕೆ ಸ್ಪಷ್ಟಪಡಿಸಿದೆ.

ಇತ್ತೀಚೆಗೆ ವಿಧಾನಸಭೆಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ವಿಜಯ್, ಕಳೆದ ಕೆಲವು ತಿಂಗಳುಗಳಲ್ಲಿ ನಡೆದಿರುವ ಅಪರಾಧಗಳಿಗೆ ಕೇವಲ ನಮ್ಮ ಸರ್ಕಾರವೇ ಹೊಣೆಯಲ್ಲ. ಹಿಂದಿನ ಡಿಎಂಕೆ ಆಡಳಿತದ ಅವಧಿಯಲ್ಲೇ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗಿತ್ತು. ನಮ್ಮ ಸರ್ಕಾರ ಅಪರಾಧ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರತ್ಯುತ್ತರ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ