ಕಾಕ್​ಪಿಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಇಥಿಯೋಪಿಯಾಗೆ ಹೊರಟಿದ್ದ ವಿಮಾನ ದೆಹಲಿಗೆ ವಾಪಸ್

ವಿಮಾನದ ಕಾಕ್​ಪಿಟ್​ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಇಥಿಯೋಪಿಯಾದ ಆಡಿಸ್ ಅಬಾಬಾ(Addis Ababa)ಗೆ ಹೊರಟಿದ್ದ ಇಥಿಯೋಪಿಯನ್ ಏರ್​ಲೈನ್ಸ್​ ದೆಹಲಿಗೆ ಹಿಂದಿರುಗಿದೆ. ಬೋಯಿಂಗ್ 777-8 ವಿಮಾನದಿಂದ ನಿರ್ವಹಿಸಲ್ಪಡುವ ಇಟಿ 687 ವಿಮಾನವು ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲವೊಂದು ತಿಳಿಸಿದೆ.

ಕಾಕ್​ಪಿಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಇಥಿಯೋಪಿಯಾಗೆ ಹೊರಟಿದ್ದ ವಿಮಾನ ದೆಹಲಿಗೆ ವಾಪಸ್
ಇಥಿಯೋಪಿಯಾ ಏರ್​ಲೈನ್ಸ್​Image Credit source: India Today
Follow us
ನಯನಾ ರಾಜೀವ್
|

Updated on: Sep 14, 2023 | 9:34 AM

ವಿಮಾನದ ಕಾಕ್​ಪಿಟ್​ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಇಥಿಯೋಪಿಯಾದ ಆಡಿಸ್ ಅಬಾಬಾ(Addis Ababa)ಗೆ ಹೊರಟಿದ್ದ ಇಥಿಯೋಪಿಯನ್ ಏರ್​ಲೈನ್ಸ್​ ದೆಹಲಿಗೆ ಹಿಂದಿರುಗಿದೆ. ಬೋಯಿಂಗ್ 777-8 ವಿಮಾನದಿಂದ ನಿರ್ವಹಿಸಲ್ಪಡುವ ಇಟಿ 687 ವಿಮಾನವು ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲವೊಂದು ತಿಳಿಸಿದೆ.

ವಿಮಾನ ಟೇಕ್ ಆಫ್ ಆದ ಕೂಡಲೇ ವಿಮಾನ ನಿಲ್ದಾಣಕ್ಕೆ ಹಿಂತಿರುಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಕಾಕ್​ಪಿಟ್​ನಲ್ಲಿ ಹೊಗೆ ಕಾಣಿಸಿಕೊಂಡಿದ್ದ ಪರಿಣಾಮ, ಪ್ರಯಾಣಿಕರು ಕೆಲಕಾಲ ಭಯಗೊಂಡಿದ್ದರು. ವಿಮಾನದಲ್ಲಿ 240ಕ್ಕೂ ಹೆಚ್ಚು ಮಂದಿ ಇದ್ದರು ಎಂದು ಮೂಲಗಳು ತಿಳಿಸಿವೆ.

ಈ ವಿಮಾನವು ಇಥಿಯೋಪಿಯಾದ ಆಡಿಸ್ ಅಬಾಬಾ ನಗರಕ್ಕೆ ಹಾರಬೇಕಿತ್ತು. ಘಟನೆಯ ಕುರಿತು ಕಾಮೆಂಟ್‌ಗಳನ್ನು ಕೋರಿ ಏರ್‌ಲೈನ್‌ಗೆ ಕಳುಹಿಸಲಾದ ಪ್ರಶ್ನೆಗೆ ಉತ್ತರ ದೊರೆತಿಲ್ಲ.

ಮತ್ತಷ್ಟು ಓದಿ: Air India: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೆಲವೇ ಗಂಟೆಗಳಲ್ಲಿ ಕೇರಳಕ್ಕೆ ವಾಪಸ್

 ದುಬೈಗೆ ಹೊರಟಿದ್ದ ಏರ್ ಇಂಡಿಯಾ  ಕೇರಳಕ್ಕೆ ವಾಪಸ್

ವಿಮಾನದಲ್ಲಿನ ಹವಾ ನಿಯಂತ್ರಿತ ವ್ಯವಸ್ಥೆಯಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ದುಬೈಗೆ ಹೊರಟಿದ್ದ ಏರ್​ ಇಂಡಿಯಾ(Air India) ವಿಮಾನ ಕೇರಳಕ್ಕೆ ವಾಪಸ್ ಆಗಿತ್ತು. ಕೆಲವೇ ದಿನಗಳ ಹಿಂದಷ್ಟೇ ನಡೆದ ಘಟನೆ ಇದು. ಟೇಕ್ ಆಫ್ ಆಗಿ ಕೆಲವೇ ಗಂಟೆಗಳಲ್ಲಿ ತಿರುವನಂತಪುರಂಗೆ ವಿಮಾನ ಮರಳಿತ್ತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದರು.

ಮಧ್ಯಾಹ್ನ 1.19ಕ್ಕೆ ಸಿಬ್ಬಂದಿ ಸೇರಿದಂತೆ 178 ಜನರೊಂದಿಗೆ ಟೇಕ್ ಆಫ್ ಆಗಿದ್ದ IX 539 ವಿಮಾನವು ಹಿಂತಿರುಗಿ 3.52 ಕ್ಕೆ ಸುರಕ್ಷಿತವಾಗಿ ಇಳಿಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದರು. ಸ್ಥಳೀಯ ಸ್ಟ್ಯಾಂಡ್‌ಬೈ ಘೋಷಿಸಲಾಗಿದೆ. ಇದು ಎಸಿ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ