AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಚಳವಳಿಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ರೈತನೂ ಸತ್ಯಾಗ್ರಹಿ ಎಂದ ರಾಹುಲ್ ಗಾಂಧಿ

ಪ್ರಸ್ತುತ ನಡೆಯುತ್ತಿರುವ ರೈತರ ಹೋರಾಟವನ್ನು, ಭಾರತೀಯರು ಬ್ರಿಟೀಷರ ವಿರುದ್ಧ ರೈತರು ನಡೆಸಿದ್ದ ಚಂಪಾರಣ್ಯ ಆಂದೋಲನಕ್ಕೆ ಹೋಲಿಸಿದ್ದಾರೆ.

ರೈತ ಚಳವಳಿಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ರೈತನೂ ಸತ್ಯಾಗ್ರಹಿ ಎಂದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
TV9 Web
| Edited By: |

Updated on:Apr 06, 2022 | 11:01 PM

Share

ದೆಹಲಿ: ನೂತನ ಕೃಷಿ ಕಾಯ್ದೆಯ ವಿರುದ್ಧ ನಡೆಯುತ್ತಿರುವ ರೈತರ ಚಳವಳಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಚಂಪಾರಣ್ಯ ಸತ್ಯಾಗ್ರಹ’ಕ್ಕೆ ಹೋಲಿಸಿ ಹೇಳಿಕೆ ನೀಡಿದ್ದಾರೆ. ರೈತ ಹೋರಾಟದಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ರೈತನೂ ‘ಸತ್ಯಾಗ್ರಹಿ’ ಎಂದು ಹೇಳಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ರೈತರ ಹೋರಾಟವನ್ನು, ಭಾರತೀಯರು ಬ್ರಿಟಿಷರ ವಿರುದ್ಧ ರೈತರು ನಡೆಸಿದ್ದ ಚಂಪಾರಣ್ಯ ಆಂದೋಲನಕ್ಕೆ ಹೋಲಿಸಿದ್ದಾರೆ. ಕೇಂದ್ರದ ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ರೈತ ಸತ್ಯಾಗ್ರಹಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಹಕ್ಕನ್ನು ಪಡೆದೇ ತೀರುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅಂದು ಬ್ರಿಟಿಷರು ಕಂಪೆನಿ ಬಹದ್ದೂರ್​ಗಳಾಗಿದ್ದರು. ಇಂದು ನರೇಂದ್ರ ಮೋದಿ ಮತ್ತು ಗೆಳೆಯರು ಕಂಪೆನಿ ಬಹದ್ದೂರ್​ಗಳಾಗಿದ್ದಾರೆ ಎಂದು ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಟ್ವೀಟ್ ಮೂಲಕ ಟೀಕಾಪ್ರಹಾರ ನಡೆಸಿದ್ದಾರೆ.

ಚಂಪಾರಣ್ಯ ಸತ್ಯಾಗ್ರಹವು 1917ರಲ್ಲಿ ಮಹಾತ್ಮ ಗಾಂಧಿ ನೇತೃತ್ವದಲ್ಲಿ ನಡೆದಿತ್ತು. ಬಿಹಾರದ ಚಂಪಾರಣ್ಯ ಪ್ರದೇಶದಲ್ಲಿ ನಡೆದ ರೈತರ ಈ ಸತ್ಯಾಗ್ರಹವನ್ನು ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಐತಿಹಾಸಿಕ ಘಟನೆಯಾಗಿ ಪರಿಗಣಿಸಲಾಗಿದೆ.

ರೈತರ ಪ್ರತಿಭಟನೆ, ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಮಧ್ಯೆ ಅಜ್ಜಿ ಊರಿಗೆ ಪ್ರವಾಸ ಹೊರಟ ರಾಹುಲ್ ಗಾಂಧಿ?

Published On - 8:12 pm, Sun, 3 January 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ