AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಗೆ ಎಲ್ಲಾ ರಾಜಕೀಯ ಪಕ್ಷಗಳು ಒಂದೇ; ಭೇದ ಭಾವ ಮಾಡಲು ಹೇಗೆ ಸಾಧ್ಯ?: ವಿಪಕ್ಷಗಳ ‘ಆರೋಪ’ಕ್ಕೆ ಚುನಾವಣಾ ಆಯೋಗ ಉತ್ತರ

CEC Gyanesh Kumar press conference: ಚುನಾವಣಾ ಆಯೋಗದ ನೆರವಿನಿಂದ ಆಡಳಿತ ಪಕ್ಷವು ಮತಕಳ್ಳತನ ಮಾಡುತ್ತಿದೆ ಎನ್ನುವ ವಿಪಕ್ಷಗಳ ಆರೋಪಕ್ಕೆ ಚುನಾವಣಾ ಆಯೋಗ ಉತ್ತರ ಕೊಟ್ಟಿದೆ. ಚುನಾವಣಾ ಆಯೋಗಕ್ಕೆ ಎಲ್ಲಾ ರಾಜಕೀಯ ಪಕ್ಷಗಳೂ ಒಂದೇ. ಭೇದ ಭಾವ ಇಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ತಮಗೆ ಎಲ್ಲಾ ರಾಜಕೀಯ ಪಕ್ಷಗಳು ಒಂದೇ; ಭೇದ ಭಾವ ಮಾಡಲು ಹೇಗೆ ಸಾಧ್ಯ?: ವಿಪಕ್ಷಗಳ ‘ಆರೋಪ’ಕ್ಕೆ ಚುನಾವಣಾ ಆಯೋಗ ಉತ್ತರ
ಜ್ಞಾನೇಶ್ ಕುಮಾರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 17, 2025 | 4:00 PM

Share

ನವದೆಹಲಿ, ಆಗಸ್ಟ್ 17: ಚುನಾವಣಾ ಆಯೋಗಕ್ಕೆ ಎಲ್ಲಾ ರಾಜಕೀಯ ಪಕ್ಷಗಳೂ ಒಂದೇ. ಯಾವುದಕ್ಕೂ ತಾರತಮ್ಯ ಮಾಡುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಹೇಳಿದ್ದಾರೆ. ಚುನಾವಣಾ ಆಯೋಗವು ಆಡಳಿತ ಪಕ್ಷಕ್ಕೆ ಪೂರಕವಾಗಿ ಕೆಲಸ ಮಾಡತ್ತಿದೆ ಎನ್ನುವ ಆರೋಪಕ್ಕೆ ಸಿಇಸಿ ಉತ್ತರ ನೀಡಿದ್ದಾರೆ. ದೆಹಲಿಯಲ್ಲಿ (Delhi) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜ್ಞಾನೇಶ್ ಕುಮಾರ್, ಮತಗಳ್ಳತನ ಆಗಿದೆ ಎನ್ನುವ ಆರೋಪಕ್ಕೂ ಉತ್ತರ ಕೊಟ್ಟಿದ್ದಾರೆ.

ಬೂತ್ ಮಟ್ಟದ ಅಧಿಕಾರಿಗಳು ರಾಜಕೀಯ ಪಕ್ಷಗಳೊಂದಿಗೆ ಸೇರಿ ಡ್ರಾಫ್ಟ್ ರಚಿಸುತ್ತಾರೆ. ಅದಾದ ಬಳಿಕ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು 45 ದಿನಗಳು ಸಮಯಾವಕಾಶ ಕೊಡಲಾಗಿರುತ್ತದೆ. ಈ ಅವಧಿ ಬಹಳ ಮುಖ್ಯ. ತಪ್ಪುಗಳಾಗಿದ್ದಲ್ಲಿ ತಿದ್ದಿಕೊಳ್ಳಬಹುದು. ಅದಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಹೊಂದಿರುತ್ತವೆ. ಆ 45 ದಿನಗಳ ಅವಧಿಯಲ್ಲಿ ಆಕ್ಷೇಪಣೆಗಳು ಬರದೆ ಈಗ ಬಂದರೆ ಹೇಗೆ? ಇದು ಸಂವಿಧಾನಕ್ಕೆ ಮಾಡುವ ಅಪಮಾನ ಎಂದು ಮುಖ್ಯ ಚುನಾವಣಾ ಆಯುಕ್ತರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ ಇಂದಿನಿಂದ ರಾಹುಲ್​​ ಗಾಂಧಿ ನೇತೃತ್ವದಲ್ಲಿ ‘ಮತದಾರರ ಅಧಿಕಾರ ಯಾತ್ರೆ’

ಚುನಾವಣಾ ಆಯೋಗದ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳ ಬಗ್ಗೆ ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತಗಳ್ಳತನ ಆಗಿದೆ ಎನ್ನುವ ಆರೋಪ ಸರಿಯಾದುದಲ್ಲ. ಸುಳ್ಳು ಹೇಳುವ ಮೂಲಕ ತಾವು ಸಂವಿಧಾನವನ್ನು ಅಪಮಾನಿಸುತ್ತಿದ್ದೀರಿ. ಆಯೋಗದ ಹೆಗಲು ಮೇಲೆ ಬಂದೂಕು ಇಟ್ಟು ರಾಜಕೀಯ ಮಾಡುತ್ತಿದ್ದಾರೆ. ಇಂತಹ ಸುಳ್ಳು ಆರೋಪಗಳಿಗೆ ಚುನಾವಣಾ ಆಯುಕ್ತ ಹೆದರುವುದಿಲ್ಲ ಎಂದು ಜ್ಞಾನೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಒಬ್ಬ ವ್ಯಕ್ತಿ ಬಳಿ ಒಂದಕ್ಕಿಂತ ಹೆಚ್ಚು ವೋಟರ್ ಐಡಿ ಕಾರ್ಡ್ ಹೇಗೆ?

ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ವೋಟರ್ ಐಡಿ ಕಾರ್ಡ್ ಹೊಂದಿರುವ ಹಲವಾರು ಪ್ರಕರಣಗಳಿವೆ ಎನ್ನುವ ಆರೋಪದ ಬಗ್ಗೆಯೂ ಮುಖ್ಯ ಚುನಾವಣಾ ಆಯುಕ್ತರು ಉತ್ತರ ಕೊಟ್ಟಿದ್ದಾರೆ. ಆ ರೀತಿ ಬಹು ಐಡಿ ಕಾರ್ಡ್ ಹೇಗೆ ಆಗಿರುತ್ತವೆ ಎನ್ನುವ ವಿವರಣೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: RSS ಭಾರತ ದೇಶದ ತಾಲಿಬಾನ್: ವಿವಾದದ ಕಿಡಿಹೊತ್ತಿಸಿದ ಕೈ ಹಿರಿಯ ನಾಯಕ ಬಿಕೆ ಹರಿಪ್ರಸಾದ್

ಒಂದು ಸ್ಥಳದಲ್ಲಿ ವೋಟರ್ ಐಡಿ ಹೊಂದಿರುವ ವ್ಯಕ್ತಿ ಬೇರೆ ಊರಿಗೆ ಹೋದಾಗ ಅಲ್ಲಿ ವೋಟರ್ ಐಡಿ ಪಡೆಯಬಹುದು. ಹಿಂದಿನ ಸ್ಥಳದಲ್ಲಿದ್ದ ವೋಟರ್ ಐಡಿ ಹಾಗೆಯೇ ಉಳಿದುಕೊಳ್ಳುವ ಸಂಭವ ಇರುತ್ತದೆ. ಫಾರ್ಮ್ ಸಲ್ಲಿಸಿ ಹಿಂದಿನದನ್ನು ತೆಗೆದುಹಾಕಬಹುದು. ಹಾಗೆ ಮಾಡದೇ ಇದ್ದಾಗ ಬೇರೆ ಬೇರೆ ಸ್ಥಳಗಳಲ್ಲಿನ ವೋಟರ್ ಐಡಿಗಳು ಉಳಿದುಕೊಳ್ಳಬಹುದು ಎಂದು ಜ್ಞಾನೇಶ್ ಕುಮಾರ್ ವಿವರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Sun, 17 August 25

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ