AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2027ರ ಯುಪಿ ಚುನಾವಣೆಯಲ್ಲಿ ಬಿಜೆಪಿಯ ಸಿಎಂ ಅಭ್ಯರ್ಥಿ ಕುರಿತು ಯೋಗಿ ಆದಿತ್ಯನಾಥ್ ಹೇಳಿದ್ದೇನು?

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿಯ ‘ಕಮಲ’ ಚಿಹ್ನೆಯು ನನಗಿಂತ ದೊಡ್ಡದು, ಯಾರು ಏನು ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ. ತಮ್ಮನ್ನೂ ಸೇರಿದಂತೆ ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಪಕ್ಷದ ಕಮಲದ ಚಿಹ್ನೆಯಡಿಯೇ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಮತ್ತು ತಮಗೆ ಪಕ್ಷದ ಚಿಹ್ನೆಯೇ ಅತ್ಯಂತ ಮಹತ್ವದ್ದಾಗಿದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

2027ರ ಯುಪಿ ಚುನಾವಣೆಯಲ್ಲಿ ಬಿಜೆಪಿಯ ಸಿಎಂ ಅಭ್ಯರ್ಥಿ ಕುರಿತು ಯೋಗಿ ಆದಿತ್ಯನಾಥ್ ಹೇಳಿದ್ದೇನು?
ಯೋಗಿ ಆದಿತ್ಯನಾಥ್Image Credit source: PTI
ಸುಷ್ಮಾ ಚಕ್ರೆ
|

Updated on: Nov 25, 2026 | 5:36 PM

Share

ನವದೆಹಲಿ, ನವೆಂಬರ್ 25: ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. “ನಮಗೆ ಪಕ್ಷದ ಚಿಹ್ನೆಯಾದ ‘ಕಮಲ’ವೇ ಎಲ್ಲವೂ. ಯಾವುದೇ ವ್ಯಕ್ತಿಗಿಂತ ಕಮಲದ ಚಿಹ್ನೆ ದೊಡ್ಡದು; ಯಾರು ಏನು ಎಂಬುದು ಎಲ್ಲರಿಗೂ ತಿಳಿದಿದೆ” ಎಂದು ಹೇಳುವ ಮೂಲಕ ಯೋಗಿ ಆದಿತ್ಯನಾಥ್ ಕುತೂಹಲ ಮೂಡಿಸಿದ್ದಾರೆ.  ಹಾಗೇ, 2027ರ ಚುನಾವಣೆಯಲ್ಲಿ ಬಿಜೆಪಿ 320ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸತತ ಮೂರನೇ ಬಾರಿಗೆ ದಾಖಲೆಯ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಪ್ರತಿಯೊಬ್ಬರೂ ಕಮಲದ ಚಿಹ್ನೆಯ ಮೇಲೆಯೇ ಹೋರಾಡಬೇಕು. ನಾನೂ ಸಹ ಕಮಲದ ಚಿಹ್ನೆಯಡಿಯೇ ಸ್ಪರ್ಧಿಸುತ್ತೇನೆ. ಕಮಲದ ಹೂವೇ ನಮಗೆ ಎಲ್ಲವೂ. ಯಾರು ಏನು? ಮತ್ತು ಯಾರು ಅಲ್ಲ ಎಂಬುದು ಎಲ್ಲರಿಗೂ ತಿಳಿದಿದೆ” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಇದನ್ನೂ ಓದಿ: ‘ಧೈರ್ಯವಿದ್ದರೆ ಅಯೋಧ್ಯೆಯಿಂದ ನನ್ನ ವಿರುದ್ಧ ಸ್ಪರ್ಧಿಸಿ’; ಅಖಿಲೇಶ್ ಯಾದವ್‌ಗೆ ಸಿಎಂ ಯೋಗಿ ಸವಾಲು

ಯಾವುದೇ ಒಬ್ಬ ನಾಯಕನ ಮುಖದ ಬದಲು ಬಿಜೆಪಿಯು ಕಮಲದ ಚಿಹ್ನೆಯ ಹೆಸರಿನಲ್ಲಿ ಮತ ಕೇಳಲಿದೆ ಎಂದು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ ಕೆಲವೇ ದಿನಗಳಲ್ಲಿ ಯೋಗಿ ಆದಿತ್ಯನಾಥ್ ಅವರ ಈ ಹೇಳಿಕೆ ಹೊರಬಿದ್ದಿದೆ. “2027ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಚಿಹ್ನೆಯ ಮೇಲೆ ಮತ ಕೇಳಲಿದೆ” ಎಂದು ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.

ಸಮಾವೇಶದಲ್ಲಿ ಮುಂದಿನ ವರ್ಷ ಯಾವ ಕ್ಷೇತ್ರದಿಂದ ಸ್ಪರ್ಧಿಸಲು ಯೋಜಿಸುತ್ತಿದ್ದೀರಿ? ಎಂದು ಯೋಗಿ ಆದಿತ್ಯನಾಥ್ ಅವರನ್ನು ಕೇಳಲಾಯಿತು. ಅದಕ್ಕೆ ಉತ್ತರಿಸಿದ ಅವರು, “ನಾನು ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಾ ಬಂದಿದ್ದೇನೆ. ಈ ಬಾರಿಯೂ ಪಕ್ಷ ಏನು ನಿರ್ಧರಿಸುತ್ತದೆಯೋ, ನಾನು ಅಲ್ಲಿಂದಲೇ ಸ್ಪರ್ಧಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸನ್ಯಾಸಿಯಾಗಿ ಬಂದ ಮಗನಿಗೆ ಭಿಕ್ಷೆ ಕೊಟ್ಟಿದ್ದ ತಾಯಿ, ಆ ದಿನದ ನೆನಪನ್ನು ಹಂಚಿಕೊಂಡ ಯೋಗಿ ಆದಿತ್ಯನಾಥ್

ಅಯೋಧ್ಯೆಗೆ ಭೇಟಿ ನೀಡಲು ಉದ್ದೇಶಿಸಿರುವ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನೂ ಗುರಿಯಾಗಿಸಿ ವಾಗ್ದಾಳಿ ನಡೆಸಿದ ಯೋಗಿ ಆದಿತ್ಯನಾಥ್, 2 ದೋಣಿಗಳಲ್ಲಿ ಕಾಲಿಟ್ಟು ಪ್ರಯಾಣಿಸಲು ಪ್ರಯತ್ನಿಸುವವರು ಅಂತಿಮವಾಗಿ ಮುಳುಗುತ್ತಾರೆ ಎಂದು ಹೇಳಿದ್ದಾರೆ. “1990ರ ದಶಕದಲ್ಲಿ ಎಸ್‌ಪಿ ನಾಯಕತ್ವವು ಸ್ವಲ್ಪ ವಿವೇಕ ತೋರಿದ್ದರೆ, ರಾಮಭಕ್ತರ ಮೇಲೆ ಗುಂಡು ಹಾರಿಸಲಾಗುತ್ತಿರಲಿಲ್ಲ. ಅವರು ಈಗ ರಾಮಭಕ್ತರು ಮತ್ತು ಹಿಂದೂಗಳ ಕ್ಷಮೆಯಾಚಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ. “ರಾಧೆ ರಾಧೆ ಎಂಬುದು ಕೇವಲ ಆರಂಭವಷ್ಟೇ; ಎಸ್‌ಪಿಗೆ ‘ರಾಮ್ ನಾಮ್ ಸತ್ಯ’ ಹೇಳುವ ಸಮಯ ಹತ್ತಿರ ಬರುತ್ತಿದೆ” ಎಂದೂ ಅವರು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'