AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohan Bhagwat: ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ಹಿಂದೂಗಳು; ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್

ಯಾವುದೇ ಧರ್ಮ, ಸಂಸ್ಕೃತಿ, ಭಾಷೆ ಮತ್ತು ಆಹಾರ ಪದ್ಧತಿ ಮತ್ತು ಸಿದ್ಧಾಂತವನ್ನು ಅನುಸರಿಸಿದರೂ ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ಹಿಂದೂಗಳೇ ಆಗಿರುತ್ತಾರೆ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

Mohan Bhagwat: ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ಹಿಂದೂಗಳು; ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಮೋಹನ್ ಭಾಗವತ್
TV9 Web
| Updated By: ಸುಷ್ಮಾ ಚಕ್ರೆ|

Updated on:Nov 16, 2022 | 8:32 AM

Share

ನವದೆಹಲಿ: ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯೂ ಹಿಂದೂ. ಎಲ್ಲಾ ಭಾರತೀಯರ ಡಿಎನ್‌ಎ (DNA) ಒಂದೇ ಆಗಿರುತ್ತದೆ. ಅವರ ಆಚರಣೆಗಳನ್ನು ಯಾರೂ ಬದಲಾಯಿಸುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ. ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯ ಅಂಬಿಕಾಪುರದಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ವೈವಿಧ್ಯತೆಯಲ್ಲಿ ಏಕತೆ ಭಾರತದ ಪುರಾತನ ವೈಶಿಷ್ಟ್ಯವೆಂದು ಹೇಳಿದ್ದಾರೆ.

ಹಿಂದುತ್ವವು ಎಲ್ಲರನ್ನು ತನ್ನೊಟ್ಟಿಗೆ ಕರೆದುಕೊಂಡು ಹೋಗುವುದನ್ನು ನಂಬುವ ವಿಶ್ವದ ಏಕೈಕ ಕಲ್ಪನೆಯಾಗಿದೆ. ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ಹಿಂದೂಗಳು ಎಂದು ನಾವು 1925ರಿಂದಲೂ (ಆರ್​ಎಸ್ಎಸ್ ಸ್ಥಾಪನೆಯಾದಾಗ) ಹೇಳುತ್ತಿದ್ದೇವೆ. ಭಾರತವನ್ನು ತಮ್ಮ ಮಾತೃಭೂಮಿ ಎಂದು ಪರಿಗಣಿಸುವವರು ವಿವಿಧತೆಯಲ್ಲಿ ಏಕತೆಯ ಸಂಸ್ಕೃತಿಯೊಂದಿಗೆ ಬದುಕಲು ಬಯಸುತ್ತಾರೆ. ಈ ದಿಕ್ಕಿನಲ್ಲಿ ಅವರು ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಯಾವುದೇ ಧರ್ಮ, ಸಂಸ್ಕೃತಿ, ಭಾಷೆ ಮತ್ತು ಆಹಾರ ಪದ್ಧತಿ ಮತ್ತು ಸಿದ್ಧಾಂತವನ್ನು ಅನುಸರಿಸಿದರೂ ಅವರು ಹಿಂದೂಗಳೇ ಆಗಿರುತ್ತಾರೆ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

ಇದನ್ನೂ ಓದಿ: ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್- ಸಿಎಂ ಯೋಗಿ ಆದಿತ್ಯನಾಥ್ ಭೇಟಿ; ಜನಸಂಖ್ಯೆ ಸಮಸ್ಯೆ ಬಗ್ಗೆ ಚರ್ಚೆ

ಹಿಂದುತ್ವದ ಸಿದ್ಧಾಂತವು ವೈವಿಧ್ಯತೆ ಮತ್ತು ಜನರಲ್ಲಿ ಏಕತೆಯನ್ನು ಪ್ರಚೋದಿಸುತ್ತದೆ. ವೈವಿಧ್ಯತೆಯನ್ನು ನಂಬುವ ಇಡೀ ಪ್ರಪಂಚದಲ್ಲಿ ಹಿಂದುತ್ವವು ಒಂದೇ ಕಲ್ಪನೆಯಾಗಿದೆ. ವೈಯಕ್ತಿಕ ಮತ್ತು ರಾಷ್ಟ್ರೀಯ ಗುಣಗಳನ್ನು ನಿರ್ಮಿಸುವುದು ಮತ್ತು ಜನರಲ್ಲಿ ಏಕತೆಯನ್ನು ತರುವುದು ಆರ್​ಎಸ್​ಎಸ್​ನ ಕೆಲಸವಾಗಿದೆ ಎಂದು ಆರ್‌ಎಸ್‌ಎಸ್ ನಾಯಕ ಮೋಹನ್ ಭಾಗವತ್ ಹೇಳಿದ್ದಾರೆ.

ನಾವು ಪ್ರತಿಯೊಬ್ಬರ ನಂಬಿಕೆಯನ್ನು ಗೌರವಿಸಬೇಕು. ಎಲ್ಲಾ ಭಾರತೀಯರ ಡಿಎನ್‌ಎ ಒಂದೇ ಆಗಿರುತ್ತದೆ. ವೈವಿಧ್ಯತೆಗಳ ಹೊರತಾಗಿಯೂ ನಾವೆಲ್ಲರೂ ಒಟ್ಟಿಗೇ ಇದ್ದೇವೆ. 40,000 ವರ್ಷಗಳಷ್ಟು ಹಳೆಯದಾದ ‘ಅಖಂಡ ಭಾರತ’ದ ಭಾಗವಾಗಿರುವ ಪ್ರತಿಯೊಬ್ಬ ಭಾರತೀಯನು ಒಂದೇ ರೀತಿಯ ಡಿಎನ್‌ಎಯನ್ನು ಹೊಂದಿದ್ದಾನೆ. ನಮ್ಮ ಪೂರ್ವಜರು ಪ್ರತಿಯೊಬ್ಬರೂ ತಮ್ಮ ನಂಬಿಕೆ ಮತ್ತು ಆಚರಣೆಗಳಿಗೆ ಅಂಟಿಕೊಳ್ಳಬೇಕು, ಇತರರ ನಂಬಿಕೆಯನ್ನು ಪರಿವರ್ತಿಸಲು ಪ್ರಯತ್ನಿಸಬಾರದು ಎಂದು ಕಲಿಸಿದರು. ಅದರಂತೆ ನಾವು ಬಾಳಬೇಕಾಗಿದೆ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

ಎಲ್ಲಾ ಧಾರ್ಮಿಕ ನಂಬಿಕೆಗಳು ಮತ್ತು ಅವರ ಆಚರಣೆಗಳನ್ನು ಗೌರವಿಸುವಂತೆ ಕರೆ ನೀಡಿದ ಮೋಹನ್ ಭಾಗವತ್, ಪ್ರತಿಯೊಬ್ಬರ ನಂಬಿಕೆ ಮತ್ತು ಆಚರಣೆಗಳನ್ನು ಗೌರವಿಸಿ. ಎಲ್ಲರನ್ನೂ ಸ್ವೀಕರಿಸಿ. ಆದರೆ, ನಿಮ್ಮದೇ ದಾರಿಯಲ್ಲಿ ನಡೆಯಿರಿ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 am, Wed, 16 November 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!