ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ, ಪುಣೆಯಲ್ಲಿ ಇವಿಯಂ ಯಂತ್ರ ಕಳ್ಳತನ

ಪುಣೆ ಜಿಲ್ಲೆಯ ಸಾಸ್ವಾದ್‌ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಇವಿಎಂ ಯಂತ್ರವನ್ನು ತಹಸೀಲ್ದಾರ್ ಕಚೇರಿಯಿಂದ ಕಳವು ಮಾಡಲಾಗಿದೆ. ಈ ಬಗ್ಗೆ ತನಿಖೆಗಾಗಿ ಪುಣೆ ಗ್ರಾಮಾಂತರ ಪೊಲೀಸರು ತಂಡಗಳನ್ನು ನಿಯೋಜಿಸಿದ್ದಾರೆ. ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ತಹಸಿಲ್ ಕಚೇರಿಗೆ ರಜೆ ನೀಡಲಾಗಿದೆ. ಸೋಮವಾರ ಬೆಳಗ್ಗೆ ಹನ್ನೊಂದು ಗಂಟೆಗೆ ತಹಸಿಲ್ ಕಚೇರಿಯ ಅಧಿಕಾರಿಗಳು ಸ್ಟ್ರಾಂಗ್ ರೂಂನ ಬೀಗ ಮುರಿದಿರುವುದು ಕಂಡು ಬಂದಿದೆ.

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ, ಪುಣೆಯಲ್ಲಿ ಇವಿಯಂ ಯಂತ್ರ ಕಳ್ಳತನ
ಇವಿಎಂ ಕಳ್ಳತನImage Credit source: Free Press Journal
Follow us
|

Updated on: Feb 06, 2024 | 2:04 PM

ಲೋಕಸಭೆ ಚುನಾವಣೆ(Lok Sabha Election)ಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಪುಣೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸೋಮವಾರ ರಾತ್ರಿ ಸಾಸ್ವಾದ್‌ನಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ಮೂವರು ಅಪರಿಚಿತರು ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಕಳವು ಮಾಡಿದ್ದಾರೆ. ಕಳ್ಳತನವಾಗಿರುವುದನ್ನು ಖಚಿತಪಡಿಸುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪತ್ತೆ ಕಾರ್ಯ ನಡೆಯುತ್ತಿದೆ. ಶಂಕಿತರನ್ನು ಬಂಧಿಸಲು ಪುಣೆ ಗ್ರಾಮಾಂತರ ಎಸ್ಪಿ ತಂಡವನ್ನು ವಿವಿಧ ಸ್ಥಳಗಳಿಗೆ ನಿಯೋಜಿಸಿದ್ದಾರೆ.

ಪುಣೆ ಗ್ರಾಮಾಂತರ ಪೊಲೀಸ್ ಅಧೀಕ್ಷಕ ಪಂಕಜ್ ದೇಶಮುಖ್ ಮಾತನಾಡಿ, ಸಾಸ್ವಾದ್ ಪೊಲೀಸ್ ಠಾಣೆಯಲ್ಲಿ ನಿನ್ನೆ ತಡರಾತ್ರಿ ಪ್ರಕರಣ ನಡೆದಿದೆ. ಸಂಗ್ರಹಿಸಿಟ್ಟಿದ್ದ 40 ಇವಿಎಂ ಯಂತ್ರಗಳ ಪೈಕಿ ಒಂದು ಡೆಮೊ ಯೂನಿಟ್ ಅನ್ನು ಮಾತ್ರ ಅಪರಿಚಿತ ದುಷ್ಕರ್ಮಿಗಳು ಕಳವು ಮಾಡಿದ್ದಾರೆ. ಉಳಿದವು ಸುರಕ್ಷಿತವಾಗಿವೆ. ನಮ್ಮ ತಂಡ ತನಿಖೆಯನ್ನು ಶ್ರದ್ಧೆಯಿಂದ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಚಿಕ್ಕಬಳ್ಳಾಪುರ: ಎಸ್​ಬಿಐ ಎಟಿಎಂಗೆ ಬೆಂಕಿ ಹಾಕಿ 20 ಲಕ್ಷ ರೂ. ಕಳ್ಳತನ; ಸ್ಥಳಕ್ಕೆ ಎಸ್ಪಿ ಭೇಟಿ

ಇವಿಎಂ ಕಳ್ಳತನವಾಗಿದೆ ಎಂದು ತಿಳಿದ ತಕ್ಷಣ ಸಾಸ್ವಾದ್ ಪೊಲೀಸ್ ಠಾಣೆ ಸಿಬ್ಬಂದಿ, ಬೆರಳಚ್ಚು ತಜ್ಞರ ತಂಡ, ಎಲ್‌ಸಿಬಿ ತಂಡ ಸೇರಿದಂತೆ ಪೊಲೀಸರ ತಂಡ ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದೆ. ಆದರೆ, ಆಡಳಿತಾಧಿಕಾರಿಗಳು ಈ ಬಗ್ಗೆ ಯಾವುದೇ ಮಾಹಿತಿ ನೀಡಲು ನಿರಾಕರಿಸಿದ್ದಾರೆ.

ಚಿಕ್ಕಬಳ್ಳಾಪುರ: ಎಸ್​ಬಿಐ ಎಟಿಎಂಗೆ ಬೆಂಕಿ ಹಾಕಿ 20 ಲಕ್ಷ ರೂ. ಕಳ್ಳತನ ಎಸ್​ಬಿಐ(SBI) ಬ್ಯಾಂಕ್​​ಗೆ ಸೇರಿದ ಎಟಿಎಂ(ATM)ಗೆ ನುಗ್ಗಿದ ಖದೀಮರು, ಬರೊಬ್ಬರಿ 20 ಲಕ್ಷ ರೂ. ಹಣವನ್ನು ಕದ್ದು, ಬಳಿಕ ಎಟಿಎಂಗೆ ಬೆಂಕಿ ಹಾಕಿದ ಘಟನೆ ಚಿಕ್ಕಬಳ್ಳಾಪುರ(Chikkaballapur) ನಗರದ ಎಂ.ಜಿ ರಸ್ತೆಯ ದರ್ಗಾ ಬಳಿ ನಡೆದಿದೆ. ಸದರಿ ಎ.ಟಿ.ಎಂ ನ್ನು ಹಿಟಾಚಿ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದು, ಸಿ.ಎಂ.ಎಸ್ ಸಂಸ್ಥೆ ಹಣ ತುಂಬುವ ಕೆಲಸ ಮಾಡುತ್ತಿತ್ತು. ಆದ್ರೆ, ತಡರಾತ್ರಿ ಎ.ಟಿ.ಎಂ ಗೆ ನುಗ್ಗಿರುವ ದುಷ್ಕರ್ಮಿಗಳ ತಂಡ, ಎಟಿಎಂ ಸಿಸಿ ಕ್ಯಾಮೆರಾಗಳಿಗೆ ಸ್ಪ್ರೇ ಬಳಸಿ ನಂತರ ಗ್ಯಾಸ್ ಕಟರ್​ನಿಂದ ಎಟಿಎಂ ಬಾಗಿಲುಗಳನ್ನು ಕಟ್ ಮಾಡಿದ್ದಾರೆ.

ಗ್ಯಾಸ್ ಕಟರ್​ನಿಂದಲೇ ಎಟಿಎಂಗೆ ಬೆಂಕಿ ನಂತರ ಎಟಿಎಂನಲ್ಲಿದ್ದ ಸುಮಾರು ಇಪ್ಪತ್ತು ಲಕ್ಷ ರೂಪಾಯಿಗಳನ್ನು ಕದ್ದು ಎಟಿಎಂ ಯಂತ್ರಕ್ಕೆ ಗ್ಯಾಸ್ ಕಟರ್​ನಿಂದಲೇ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಎಟಿಎಂ ಕಟ್ಟಡದ ಮಾಲಿಕ ಶ್ರೀನಿವಾಸ್ ತಿಳಿಸಿದ್ದಾರೆ. ಇನ್ನು ಈ ಖತರ್ನಾಕ್​ ಖದೀಮರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇತ್ತಿಚೀಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಗೌರಿಬಿದನೂರು ಹಾಗೂ ಪೊಶೆಟ್ಟಿಯಲ್ಲಿ ಇದೆ ರೀತಿಯ ಕೆಲವು ಘಟನೆಗಳು ನಡೆದಿವೆ. ಆದ್ರೆ, ಆರೋಪಿಗಳು ಪೊಲೀಸರ ಕಣ್ಣಿಗೆ ಬಿದ್ದಿಲ್ಲ. ಸದ್ಯಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ