ಕೊರೊನಾ ಸೋಂಕು: ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಸ್ಥಿತಿ ಗಂಭೀರ..

ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಗುರುಗ್ರಾಮ್‌ನ ಮೇದಂತ ಆಸ್ಪತ್ರೆಯಲ್ಲಿ ವೆಂಟಿಲೇಟರ್​ನಲ್ಲಿ ಇಡಲಾಗಿದೆ. ಚೇತನ್ ಚೌಹಾಣ್ ಅವರಿಗೆ ಜುಲೈನಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರನ್ನು ಲಖನೌದ ಸಂಜಯ್ ಗಾಂಧಿ ಪಿಜಿಐ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಅವರನ್ನು ಮೇದಾಂತಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮೂತ್ರಪಿಂಡ ಹಾಗೂ ರಕ್ತದೊತ್ತಡ ಸಮಸ್ಯೆಗಳಿಂದ ಬಳಲುತ್ತಿದ್ದ ಚೇತನ್ ಚೌಹಾಣ್ ಶುಕ್ರವಾರದಂದು ಸ್ವಲ್ಪ ಚೇತರಿಸಿಕೊಂಡಿದ್ದರು. ಆದ್ರೆ ಆ ನಂತರ ಮತ್ತೇ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಐಸಿಯುನಲ್ಲಿ […]

ಕೊರೊನಾ ಸೋಂಕು: ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಸ್ಥಿತಿ ಗಂಭೀರ..
Follow us
ಸಾಧು ಶ್ರೀನಾಥ್​
|

Updated on:Aug 16, 2020 | 6:33 PM

ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಗುರುಗ್ರಾಮ್‌ನ ಮೇದಂತ ಆಸ್ಪತ್ರೆಯಲ್ಲಿ ವೆಂಟಿಲೇಟರ್​ನಲ್ಲಿ ಇಡಲಾಗಿದೆ.

ಚೇತನ್ ಚೌಹಾಣ್ ಅವರಿಗೆ ಜುಲೈನಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರನ್ನು ಲಖನೌದ ಸಂಜಯ್ ಗಾಂಧಿ ಪಿಜಿಐ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಅವರನ್ನು ಮೇದಾಂತಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಮೂತ್ರಪಿಂಡ ಹಾಗೂ ರಕ್ತದೊತ್ತಡ ಸಮಸ್ಯೆಗಳಿಂದ ಬಳಲುತ್ತಿದ್ದ ಚೇತನ್ ಚೌಹಾಣ್ ಶುಕ್ರವಾರದಂದು ಸ್ವಲ್ಪ ಚೇತರಿಸಿಕೊಂಡಿದ್ದರು. ಆದ್ರೆ ಆ ನಂತರ ಮತ್ತೇ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಎರಡು ಬಾರಿ ಲೋಕಸಭಾ ಸಂಸದರಾಗಿದ್ದ ಚೌಹಾಣ್ ಸೋಂಕು ತಗುಲಿದ ಕೆಲವೇ ಕೆಲವು ಮಾಜಿ ಅಂತರರಾಷ್ಟ್ರೀಯ ಕ್ರಿಕೆಟರ್​​ಗಳಲ್ಲಿ ಒಬ್ಬರಾಗಿದ್ದಾರೆ. ಕಳೆದ ವರ್ಷದವರೆಗೂ ರಾಜ್ಯದ ಕ್ರೀಡಾ ಸಚಿವರಾಗಿ ಸೇವೆ ಸಲ್ಲಿಸಿರುವ ಚೌಹಾಣ್ , 1969 ಮತ್ತು 1978ರ ನಡುವೆ 40 ಟೆಸ್ಟ್ ಪಂದ್ಯಗಳನ್ನಾಡಿದ್ದು , 31.57ರ ಸರಾಸರಿಯಲ್ಲಿ 2084 ರನ್ ಗಳಿಸಿದ್ದಾರೆ.

7 ಏಕದಿನ ಪಂದ್ಯಗಳನ್ನಾಡಿರುವ ಚೌಹಾಣ್ 153 ರನ್ ಗಳಿಸಿದ್ದಾರೆ. ಸುನಿಲ್ ಗವಾಸ್ಕರ್ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಚೌಹಾಣ್ 1970 ರ ದಶಕದಲ್ಲಿ ಹಲವಾರು ಟೆಸ್ಟ್ಗಳಲ್ಲಿ 10 ಶತಕಗಳ ಜೊತೆಯಲ್ಲಿ 3000 ರನ್ ಗಳಿಸಿದರು. ಮಹಾರಾಷ್ಟ್ರ ಹಾಗೂ ದೆಹಲಿ ಪರ ರಣಜಿ ಪಂದ್ಯಗಳನ್ನಾಡಿರುವ ಚೇತನ್ 1980 ರಲ್ಲಿ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು.

Published On - 9:21 pm, Sat, 15 August 20

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್