Manmohan Singh ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿತಿ ಸುಧಾರಿಸಿದೆ: ಏಮ್ಸ್ ವೈದ್ಯರು

89 ವರ್ಷದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಏಮ್ಸ್ ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಸೆಂಟರ್‌ನಲ್ಲಿರುವ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ. ಡಾ.ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡ ಸಿಂಗ್ ಅವರ ಆರೋಗ್ಯ ಬಗ್ಗೆ ನಿಗಾ ವಹಿಸಿದೆ.

Manmohan Singh ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿತಿ ಸುಧಾರಿಸಿದೆ: ಏಮ್ಸ್ ವೈದ್ಯರು
ಮನಮೋಹನ್ ಸಿಂಗ್

ದೆಹಲಿ: ಏಮ್ಸ್ ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಸುಧಾರಿಸುತ್ತಿದೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸಿಂಗ್ ಅವರಿಗೆ ಜ್ವರ ಬಂದ ಕಾರಣ ಬುಧವಾರ ಸಂಜೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (AIIMS) ದಾಖಲಾಗಿದ್ದರು. 89 ವರ್ಷದ ಮಾಜಿ ಪ್ರಧಾನಿಯನ್ನು ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಸೆಂಟರ್‌ನಲ್ಲಿರುವ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ. ಡಾ.ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡ ಸಿಂಗ್ ಅವರ ಆರೋಗ್ಯ ಬಗ್ಗೆ ನಿಗಾ ವಹಿಸಿದೆ.

ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಸುಧಾರಿಸುತ್ತಿದೆ ಎಂದು ಏಮ್ಸ್ ಅಧಿಕಾರಿ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಸಂಜೆ ಸಿಂಗ್ ಅವರ ಆರೋಗ್ಯ ವಿಚಾರಿಸಲು ಭೇಟಿ ನೀಡಿದರು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕೂಡ ಗುರುವಾರ ಸಿಂಗ್ ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನೂ ಓದಿ: Global Hunger Index 2021 ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ; ಈ ಸೂಚ್ಯಂಕ ಏನನ್ನು ಸೂಚಿಸುತ್ತದೆ?

ಇದನ್ನೂ ಓದಿ: Global Hunger Index ಜಾಗತಿಕ ಹಸಿವು ಸೂಚ್ಯಂಕದಲ್ಲಿ 101ನೇ ಸ್ಥಾನಕ್ಕೆ ಕುಸಿದ ಭಾರತ: ಮೋದಿಗೆ ಅಭಿನಂದನೆ ಎಂದು ಟ್ವೀಟ್ ಮಾಡಿದ ಕಪಿಲ್ ಸಿಬಲ್

Click on your DTH Provider to Add TV9 Kannada