ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಾಯ ಮಾಡ್ತಾರೆ: ಅಮರ್​ಜಿತ್ ಸಿಂಗ್

ಪ್ರಧಾನಿ ನರೇಂದ್ರ ಮೋದಿಯವರು ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಾರೆ ಎಂದು ಭಾರತೀಯ ಗುಪ್ತಚರ ಸಂಸ್ಥೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಮಾಜಿ ಮುಖ್ಯಸ್ಥ ಅಮರ್​ಜಿತ್ ಸಿಂಗ್ ದುಲಾತ್ ಹೇಳಿದ್ದಾರೆ.

ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಾಯ ಮಾಡ್ತಾರೆ: ಅಮರ್​ಜಿತ್ ಸಿಂಗ್
ಪ್ರಧಾನಿ ನರೇಂದ್ರ ಮೋದಿ

Updated on: Feb 26, 2023 | 9:04 AM

ಪ್ರಧಾನಿ ನರೇಂದ್ರ ಮೋದಿಯವರು ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಾರೆ ಎಂದು ಭಾರತೀಯ ಗುಪ್ತಚರ ಸಂಸ್ಥೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಮಾಜಿ ಮುಖ್ಯಸ್ಥ ಅಮರ್​ಜಿತ್ ಸಿಂಗ್ ದುಲಾತ್ ಹೇಳಿದ್ದಾರೆ. ಈ ವರ್ಷಾಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನದ ಕಡೆಗೆ ಶಾಂತಿಯ ಹಸ್ತವನ್ನು ಚಾಚುತ್ತಾರೆ ಎಂದು ನಾನು ಭಾವಿಸುತ್ತೇನೆ ಕಳೆದ ಕೆಲವು ತಿಂಗಳುಗಳಲ್ಲಿ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ನೆರೆಯ ದೇಶಕ್ಕೆ ಸಹಾಯ ಮಾಡಿಯೇ ಮಾಡುತ್ತಾರೆ ಎಂದಿದ್ದಾರೆ.

ಭಾರತದ ಹೊಸ ಮಿತ್ರ ಅಮೆರಿಕ ದೂರದಲ್ಲಿದೆ ಮತ್ತು ಪಾಕಿಸ್ತಾನ ತುಂಬಾ ಹತ್ತಿರದಲ್ಲಿದೆ ನಾವು ನಮ್ಮ ಹತ್ತಿರದ ದೇಶಗಳ ಜತೆಗೆ ಉತ್ತಮ ಬಾಂಧವ್ಯವನ್ನು ಹೊಂದಿರಬೇಕು. ಕ್ಷೀಣಿಸುತ್ತಿರುವ ವಿದೇಶಿ ವಿನಿಮಯ, ರಾಷ್ಟ್ರವ್ಯಾಪಿ ವಿದ್ಯುತ್ ಕಡಿತ, ರಾಜಕೀಯ ಅಸ್ಥಿರತೆ ಮತ್ತು ಡಾಲರ್ ಎದುರು ಪಾಕಿಸ್ತಾನಿ ರೂಪಾಯಿಯ ಕುಸಿತದ ಮೌಲ್ಯವು ನೆರೆಯ ಪಾಕಿಸ್ತಾನವನ್ನು ಅಂತರಾರಾಷ್ಟ್ರೀಯ ಹಣಕಾಸು ನಿಧಿಯಿಂದ (IMC) ಹಣಕಾಸಿನ ಪರಿಹಾರ ಪ್ಯಾಕೇಜ್ ಪಡೆಯಲು ಒತ್ತಾಯಿಸಿದೆ.

ಮತ್ತಷ್ಟು ಓದಿ: Economic Survey: ಮೂರು ವರ್ಷದಲ್ಲೇ ಆರ್ಥಿಕತೆ ಕಡಿಮೆ ಬೆಳವಣಿಗೆ: ಎಕನಾಮಿಕ್ ಸರ್ವೆ ಅಂದಾಜು?

ಬಿಕ್ಕಟ್ಟನ್ನು ನಿಭಾಯಿಸುವ ಪಾಕಿಸ್ತಾನದ ಹಳೆಯ ವಿಧಾನವು ಇನ್ನು ಮುಂದೆ ಕಾರ್ಯನಿರ್ವಹಿಸುವುದಿಲ್ಲ, ಆದ್ದರಿಂದ ಭಾರತದೊಂದಿಗೆ ಶಾಂತಿ ಮತ್ತು ವ್ಯಾಪಾರದ ಬಗ್ಗೆ ಮಾತನಾಡಲು ಸಿದ್ಧವಿರಬಹುದು ಎಂದು ನಂಬಲಾಗಿದೆ. ಪಾಕಿಸ್ತಾನ ಪ್ರಸ್ತುತ ಆಳವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ವಿದೇಶಿ ವಿನಿಮಯ ಸಂಗ್ರಹದಲ್ಲಿ ದೇಶವು US$ 3 ಶತಕೋಟಿಗಿಂತ ಕಡಿಮೆ ಹೊಂದಿದೆ. ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿಯವರು ನೆರೆಯ ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರುಮಾಡಬಹುದು.

ಈ ವರ್ಷ ಮೋದಿಯವರು ಪಾಕಿಸ್ತಾನವನ್ನು ತೊಂದರೆಯಿಂದ ಹೊರತರುತ್ತಾರೆ ಎಂದು ನಾನು ನಂಬುತ್ತೇನೆ. ಆದರೆ, ತಮಗೆ ಯಾವುದೇ ಆಂತರಿಕ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ದುಲಾತ್ ಅವರು ರಾ ಮುಖ್ಯಸ್ಥರಾಗಿದ್ದ ಅವಧಿಯಲ್ಲಿ ನೆರೆಯ ದೇಶದಲ್ಲಿ ಹಲವು ಗುಪ್ತಚರ ಕಾರ್ಯಾಚರಣೆಗಳನ್ನು ನಡೆಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us