ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಇನ್ನಿಲ್ಲ..

|

Updated on: Sep 27, 2020 | 9:17 AM

ದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಸಹ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಜಸ್ವಂತ್ ಸಿಂಗ್(82) ಭಾನುವಾರ ನಿಧನರಾಗಿದ್ದಾರೆ. ಆಗಸ್ಟ್​ನಲ್ಲಿ ಜಸ್ವಂತ್ ಸಿಂಗ್ ಆರೋಗ್ಯ ಹದಗೆಟ್ಟಿತ್ತು. ದೆಹಲಿ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಸ್ವಂತ್ ಸಿಂಗ್ ಕಳೆದ ಕೆಲವು ದಿನಗಳ ಹಿಂದೆ ಕೋಮಾಗೆ ಹೋಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಜಸ್ವಂತ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ರು. ಈಗಾಗಲೇ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ, ಕೇಂದ್ರ ಸಚಿವ ಸುರೇಶ್ ಅಂಗಡಿಯವರನ್ನು […]

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಇನ್ನಿಲ್ಲ..
Follow us on

ದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಸಹ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಜಸ್ವಂತ್ ಸಿಂಗ್(82) ಭಾನುವಾರ ನಿಧನರಾಗಿದ್ದಾರೆ.

ಆಗಸ್ಟ್​ನಲ್ಲಿ ಜಸ್ವಂತ್ ಸಿಂಗ್ ಆರೋಗ್ಯ ಹದಗೆಟ್ಟಿತ್ತು. ದೆಹಲಿ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಸ್ವಂತ್ ಸಿಂಗ್ ಕಳೆದ ಕೆಲವು ದಿನಗಳ ಹಿಂದೆ ಕೋಮಾಗೆ ಹೋಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಜಸ್ವಂತ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ರು.

ಈಗಾಗಲೇ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ, ಕೇಂದ್ರ ಸಚಿವ ಸುರೇಶ್ ಅಂಗಡಿಯವರನ್ನು ಕಳೆದುಕೊಂಡ ಬಿಜೆಪಿಗೆ ಹಿರಿಯ ನಾಯಕ ಜಸ್ವಂತ್ ಸಿಂಗ್ ಸಾವು ಮತ್ತಷ್ಟು ನೋವು ತಂದಿದೆ.

Published On - 9:15 am, Sun, 27 September 20