ದೆಹಲಿ ಅಬಕಾರಿ ನೀತಿ ಪ್ರಕರಣ; ಅರವಿಂದ್ ಕೇಜ್ರಿವಾಲ್​ಗೆ 14 ದಿನಗಳ ನ್ಯಾಯಾಂಗ ಬಂಧನ

Delhi Excise Policy case: ದೆಹಲಿ ಅಬಕಾರಿ ನೀತಿ ಹಗರಣದ ಅಕ್ರಮಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜುಲೈ 12ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತನಿಖೆ ಮತ್ತು ನ್ಯಾಯದ ಹಿತಾಸಕ್ತಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಶಕ್ಕೆ ನೀಡಬೇಕೆಂದು ಸಿಬಿಐ ಮನವಿ ಮಾಡಿತ್ತು.

ದೆಹಲಿ ಅಬಕಾರಿ ನೀತಿ ಪ್ರಕರಣ; ಅರವಿಂದ್ ಕೇಜ್ರಿವಾಲ್​ಗೆ 14 ದಿನಗಳ ನ್ಯಾಯಾಂಗ ಬಂಧನ
ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on:Jun 29, 2024 | 5:20 PM

ನವದೆಹಲಿ: ಸಿಬಿಐ ತನಿಖೆ ನಡೆಸುತ್ತಿರುವ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. “ತನಿಖೆ ಮತ್ತು ನ್ಯಾಯದ ಹಿತಾಸಕ್ತಿ”ಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿಯ ಅಗತ್ಯವಿದೆ ಎಂದು ಸಿಬಿಐ ಹೇಳಿತ್ತು. ಇಡಿ ತನಿಖೆ ನಡೆಸುತ್ತಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಜೈಲು ಸೇರಿದ್ದರು. ತಿಹಾರ್ ಜೈಲಿನಿಂದಲೇ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದು ಕೋರ್ಟ್​ ಮುಂದೆ ಹಾಜರುಪಡಿಸಿತ್ತು.

ಅರವಿಂದ್ ಕೇಜ್ರಿವಾಲ್ ಅವರ 3 ದಿನಗಳ ಸಿಬಿಐ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಇಂದು ಮುಂಜಾನೆ, ವಿಶೇಷ ನ್ಯಾಯಾಧೀಶರಾದ ಸುನೈನಾ ಶರ್ಮಾ ಅವರು 3 ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರುವ ಆದೇಶವನ್ನು ಕಾಯ್ದಿರಿಸಿದ್ದರು. ಇದೀಗ ಇಂದು ತೀರ್ಪು ಹೊರಹಾಕಿದ್ದು, ಇನ್ನೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: Arvind Kejriwal: ಸಿಬಿಐನಿಂದ ಕೇಜ್ರಿವಾಲ್ ಬಂಧನ; ಸಕ್ಕರೆ ಮಟ್ಟ ಕಡಿಮೆಯಾಗಿ ಕೋರ್ಟ್​ನಲ್ಲಿ ಸುಸ್ತಾದ ಸಿಎಂ

2021-22ರ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು 14 ದಿನಗಳ ಕಾಲ (ಜುಲೈ 12 ರವರೆಗೆ) ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಜೂನ್ 26ರಂದು ಬಂಧಿಸಿತ್ತು. ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿತ್ತು.

ಅವರ ಬಂಧನದ ಸಮಯದಲ್ಲಿ ಅರವಿಂದ್ ಕೇಜ್ರಿವಾಲ್ ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದರು. ಇಂದು ನಡೆದ ವಿಚಾರಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕ್ರಮ್ ಚೌಧರಿ, ಈ ಪ್ರಕರಣದ ತನಿಖೆ 2022ರಿಂದ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ವಾಧಿಕಾರಿಯ ನಾಶವಾಗಬೇಕು; ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸುನೀತಾ ಕೇಜ್ರಿವಾಲ್ ಆಕ್ರೋಶ

ದೆಹಲಿ ಅಕ್ರಮ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ (ಜಾರಿ ನಿರ್ದೇಶನಾಲಯ) ಬಂಧಿಸಿತ್ತು. ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2ರಂದು ಅವರು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:13 pm, Sat, 29 June 24