ಮದ್ಯನೀತಿ ಹಗರಣ: ಅರವಿಂದ್​ ಕೇಜ್ರಿವಾಲ್​ರನ್ನು ಸಿಬಿಐಗೆ ಒಪ್ಪಿಸಿದ ನ್ಯಾಯಾಲಯ

Delhi Excise Policy Case: ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿತ್ತು. ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕೇಜ್ರಿವಾಲ್ ಗೆ ಕೆಲ ದಿನಗಳ ಕಾಲ ಜೈಲಿನಿಂದ ಹೊರಗೆ ಬಂದು ಪ್ರಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಮದ್ಯನೀತಿ ಹಗರಣ: ಅರವಿಂದ್​ ಕೇಜ್ರಿವಾಲ್​ರನ್ನು ಸಿಬಿಐಗೆ ಒಪ್ಪಿಸಿದ ನ್ಯಾಯಾಲಯ
ಅರವಿಂದ್ ಕೇಜ್ರಿವಾಲ್

Updated on: Jun 26, 2024 | 11:49 AM

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​(Arvind Kejriwal)ರನ್ನು ನ್ಯಾಯಾಲಯವು ಸಿಬಿಐಗೆ ಒಪ್ಪಿಸಿದೆ. ಕೇಜ್ರಿವಾಲ್ ಅವರನ್ನು ಬುಧವಾರ (ಜೂನ್ 26) ಸಿಬಿಐ ಬಂಧಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ.

ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ಗೆ ಸಿಬಿಐ ಕೇಜ್ರಿವಾಲ್ ಅವರನ್ನು ಹಾಜರುಪಡಿಸಿತ್ತು, ಅಲ್ಲಿ ತನಿಖಾ ಸಂಸ್ಥೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರನ್ನು ವಿಚಾರಣೆಗೆ ಕಸ್ಟಡಿಗೆ ಕೋರಿತ್ತು. ಮಂಗಳವಾರ (ಜೂನ್ 25) ಸಂಜೆ ತಿಹಾರ್ ಜೈಲಿನಲ್ಲಿ ಸಿಬಿಐ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ್ದರು.

ಕೇಜ್ರಿವಾಲ್ ಅವರ ಅರ್ಜಿಯೊಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಅವರ ಬಂಧನವಾಗಿದೆ. ಈ ಅರ್ಜಿಯ ಮೂಲಕ ದೆಹಲಿ ಸಿಎಂ ದೆಹಲಿ ಹೈಕೋರ್ಟ್‌ನ ಜಾಮೀನು ಆದೇಶಕ್ಕೆ ತಡೆಯನ್ನು ಪ್ರಶ್ನಿಸಿದ್ದರು.

ಮತ್ತಷ್ಟು ಓದಿ: Arvind Kejriwal: ದೆಹಲಿ ಅಬಕಾರಿ ನೀತಿ ಹಗರಣ; ಜಾಮೀನು ವಿಚಾರಣೆಗೂ ಮೊದಲೇ ಸಿಬಿಐನಿಂದ ಅರವಿಂದ್ ಕೇಜ್ರಿವಾಲ್ ಬಂಧನ

ವಾಸ್ತವವಾಗಿ, ದೆಹಲಿಯ ಕೆಳ ನ್ಯಾಯಾಲಯವು ಜೂನ್ 20 ರಂದು ಕೇಜ್ರಿವಾಲ್‌ಗೆ ಜಾಮೀನು ನೀಡಿತ್ತು, ಅದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಸಿಬಿಐ ಅಧಿಕೃತವಾಗಿ ಅವರನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿದೆ.

ತನಿಖಾ ಸಂಸ್ಥೆ ಅವರನ್ನು ತಿಹಾರ್ ಜೈಲಿನಲ್ಲಿ ವಿಚಾರಣೆಗೆ ಒಳಪಡಿಸಿತು ಮತ್ತು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಹೇಳಿಕೆಯನ್ನು ದಾಖಲಿಸಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us