AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯನೀತಿ ಹಗರಣ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಏಪ್ರಿಲ್​ 23ರವರೆಗೆ ವಿಸ್ತರಣೆ

ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್​ 23ರವರೆಗೆ ವಿಸ್ತರಿಸಿದೆ.

ಮದ್ಯನೀತಿ ಹಗರಣ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಏಪ್ರಿಲ್​ 23ರವರೆಗೆ ವಿಸ್ತರಣೆ
ಅರವಿಂದ್ ಕೇಜ್ರಿವಾಲ್
ನಯನಾ ರಾಜೀವ್
|

Updated on:Apr 15, 2024 | 2:27 PM

Share

ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್​ 23ರವರೆಗೆ ವಿಸ್ತರಿಸಿದೆ. ಸೋಮವಾರ ಅರವಿಂದ್ ಕೇಜ್ರಿವಾಲ್ ಒಂದರ ಹಿಂದೆ ಒಂದು ಆಘಾತವನ್ನು ಎದುರಿಸಿದರು. ಮೊದಲು ಸುಪ್ರೀಂಕೋರ್ಟ್​ ಕೇಜ್ರಿವಾಲ್ ಅರ್ಜಿಯನ್ನು ತಕ್ಷಣವೇ ಆಲಿಸಲು ನಿರಾಕರಿಸಿತು ಪ್ರಕರಣವನ್ನು ಏಪ್ರಿಲ್ 29ಕ್ಕೆ ಮುಂದೂಡಿತು. ನಂತರ ಅರ್ಧ ಗಂಟೆ ಬಳಿಕ ದೆಹಲಿ ಕೋರ್ಟ್​ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್​ 23ರವರೆಗೆ ವಿಸ್ತರಿಸಿತು.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂದು ತಿಹಾರ್ ಜೈಲಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದರು. ಕಿಟಕಿಯ ಮೂಲಕ ಫೋನ್‌ನಲ್ಲಿ ಮಾತನಾಡುವಂತೆ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಜೊತೆ ಮಾತನಾಡಿದ ಭಗವಂತ್ ಮಾನ್ ಭಾವುಕರಾದರು. ಅವರ ಕಣ್ಣುಗಳು ತುಂಬಿ ಬಂದವು. ಹೋಗಲು ಅವಕಾಶ ನೀಡುವಂತೆ ಕೇಜ್ರಿವಾಲ್‌ಗೆ ಮನವಿ ಮಾಡಿದರೂ ಜೈಲು ಅಧಿಕಾರಿಗಳು ಒಪ್ಪಲಿಲ್ಲ. ಇದರಿಂದಾಗಿ ಅವರ ಜೊತೆ ಹೆಚ್ಚು ಮಾತನಾಡಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಓದಿ: ಕೇಜ್ರಿವಾಲ್​ಗೆ ಜೈಲೇ ಗತಿ; ಬಂಧನ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಹೈಕೋರ್ಟ್ ಆದೇಶದಲ್ಲಿ ಏನು ಹೇಳಿತ್ತು ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಪಾತ್ರ ಗುರುತರವಾಗಿದೆ ಎನ್ನುವುದಕ್ಕೆ, ಮತ್ತು ಅಕ್ರಮದಿಂದ ಬಂದ ಲಾಭವನ್ನು ಮರೆಮಾಚುವ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿಯೂ ಮತ್ತು ಎಎಪಿ ಪಕ್ಷದ ಸಂಚಾಲಕರಾಗಿಯೂ ಭಾಗಿಯಾಗಿದ್ದರು ಎಂಬುದು ತಿಳಿದುಬರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ಲಾಭಕ್ಕೋಸ್ಕರ ಬಂಧಿಸಲಾಗಿದೆ ಎನ್ನುವ ಕೇಜ್ರಿವಾಲ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಕೋರ್ಟ್, ‘ಅರ್ಜಿದಾರರು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಚುನಾವಣಾ ಕಾಲವೋ ಇಲ್ಲವೋ ಆದರೆ, ಕಾನೂನು ಪ್ರಕಾರ ಅವರ ಬಂಧನ ಆಗಿದೆ ಎನ್ನುವುದನ್ನು ಮಾತ್ರ ಕೋರ್ಟ್ ಪರಿಗಣಿಸುತ್ತದೆ,’ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:18 pm, Mon, 15 April 24

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?