ಮದ್ಯನೀತಿ ಹಗರಣ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಏಪ್ರಿಲ್​ 23ರವರೆಗೆ ವಿಸ್ತರಣೆ

ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್​ 23ರವರೆಗೆ ವಿಸ್ತರಿಸಿದೆ.

ಮದ್ಯನೀತಿ ಹಗರಣ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಏಪ್ರಿಲ್​ 23ರವರೆಗೆ ವಿಸ್ತರಣೆ
ಅರವಿಂದ್ ಕೇಜ್ರಿವಾಲ್

Updated on: Apr 15, 2024 | 2:27 PM

ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್​ 23ರವರೆಗೆ ವಿಸ್ತರಿಸಿದೆ. ಸೋಮವಾರ ಅರವಿಂದ್ ಕೇಜ್ರಿವಾಲ್ ಒಂದರ ಹಿಂದೆ ಒಂದು ಆಘಾತವನ್ನು ಎದುರಿಸಿದರು. ಮೊದಲು ಸುಪ್ರೀಂಕೋರ್ಟ್​ ಕೇಜ್ರಿವಾಲ್ ಅರ್ಜಿಯನ್ನು ತಕ್ಷಣವೇ ಆಲಿಸಲು ನಿರಾಕರಿಸಿತು ಪ್ರಕರಣವನ್ನು ಏಪ್ರಿಲ್ 29ಕ್ಕೆ ಮುಂದೂಡಿತು. ನಂತರ ಅರ್ಧ ಗಂಟೆ ಬಳಿಕ ದೆಹಲಿ ಕೋರ್ಟ್​ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್​ 23ರವರೆಗೆ ವಿಸ್ತರಿಸಿತು.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂದು ತಿಹಾರ್ ಜೈಲಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದರು. ಕಿಟಕಿಯ ಮೂಲಕ ಫೋನ್‌ನಲ್ಲಿ ಮಾತನಾಡುವಂತೆ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಜೊತೆ ಮಾತನಾಡಿದ ಭಗವಂತ್ ಮಾನ್ ಭಾವುಕರಾದರು. ಅವರ ಕಣ್ಣುಗಳು ತುಂಬಿ ಬಂದವು.
ಹೋಗಲು ಅವಕಾಶ ನೀಡುವಂತೆ ಕೇಜ್ರಿವಾಲ್‌ಗೆ ಮನವಿ ಮಾಡಿದರೂ ಜೈಲು ಅಧಿಕಾರಿಗಳು ಒಪ್ಪಲಿಲ್ಲ. ಇದರಿಂದಾಗಿ ಅವರ ಜೊತೆ ಹೆಚ್ಚು ಮಾತನಾಡಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಓದಿ: ಕೇಜ್ರಿವಾಲ್​ಗೆ ಜೈಲೇ ಗತಿ; ಬಂಧನ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಹೈಕೋರ್ಟ್ ಆದೇಶದಲ್ಲಿ ಏನು ಹೇಳಿತ್ತು
ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಪಾತ್ರ ಗುರುತರವಾಗಿದೆ ಎನ್ನುವುದಕ್ಕೆ, ಮತ್ತು ಅಕ್ರಮದಿಂದ ಬಂದ ಲಾಭವನ್ನು ಮರೆಮಾಚುವ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿಯೂ ಮತ್ತು ಎಎಪಿ ಪಕ್ಷದ ಸಂಚಾಲಕರಾಗಿಯೂ ಭಾಗಿಯಾಗಿದ್ದರು ಎಂಬುದು ತಿಳಿದುಬರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ಲಾಭಕ್ಕೋಸ್ಕರ ಬಂಧಿಸಲಾಗಿದೆ ಎನ್ನುವ ಕೇಜ್ರಿವಾಲ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಕೋರ್ಟ್, ‘ಅರ್ಜಿದಾರರು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಚುನಾವಣಾ ಕಾಲವೋ ಇಲ್ಲವೋ ಆದರೆ, ಕಾನೂನು ಪ್ರಕಾರ ಅವರ ಬಂಧನ ಆಗಿದೆ ಎನ್ನುವುದನ್ನು ಮಾತ್ರ ಕೋರ್ಟ್ ಪರಿಗಣಿಸುತ್ತದೆ,’ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 2:18 pm, Mon, 15 April 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us