AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯನೀತಿ ಹಗರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಬಿಆರ್​ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7ರವರೆಗೆ ವಿಸ್ತರಿಸಿದೆ.

ಮದ್ಯನೀತಿ ಹಗರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ
ಅರವಿಂದ್ ಕೇಜ್ರಿವಾಲ್
ನಯನಾ ರಾಜೀವ್
|

Updated on:Apr 23, 2024 | 2:38 PM

Share

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಹಾಗೂ ಬಿಆರ್​ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7ರವರೆಗೆ ವಿಸ್ತರಿಸಿದೆ. ಇದಕ್ಕೂ ಮುನ್ನ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಏಪ್ರಿಲ್ 1 ರಿಂದ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಇದಾದ ಬಳಿಕ ನ್ಯಾಯಾಲಯ ಮತ್ತೊಮ್ಮೆ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿತ್ತು.

ಈ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಇದೀಗ ಮೇ 7ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಹಾಗೆಯೇ ಬಿಆರ್​ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನೂ ಕೂಡ ವಿಸ್ತರಿಸಲಾಗಿದೆ.

ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಪಾತ್ರ ಗುರುತರವಾಗಿದೆ ಎನ್ನುವುದಕ್ಕೆ, ಮತ್ತು ಅಕ್ರಮದಿಂದ ಬಂದ ಲಾಭವನ್ನು ಮರೆಮಾಚುವ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿಯೂ ಮತ್ತು ಎಎಪಿ ಪಕ್ಷದ ಸಂಚಾಲಕರಾಗಿಯೂ ಭಾಗಿಯಾಗಿದ್ದರು ಎಂಬುದು ತಿಳಿದುಬರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಮತ್ತಷ್ಟು ಓದಿ: ಮದ್ಯನೀತಿ ಹಗರಣ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಏಪ್ರಿಲ್​ 23ರವರೆಗೆ ವಿಸ್ತರಣೆ

ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ಲಾಭಕ್ಕೋಸ್ಕರ ಬಂಧಿಸಲಾಗಿದೆ ಎನ್ನುವ ಕೇಜ್ರಿವಾಲ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಕೋರ್ಟ್, ‘ಅರ್ಜಿದಾರರು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಚುನಾವಣಾ ಕಾಲವೋ ಇಲ್ಲವೋ ಆದರೆ, ಕಾನೂನು ಪ್ರಕಾರ ಅವರ ಬಂಧನ ಆಗಿದೆ ಎನ್ನುವುದನ್ನು ಮಾತ್ರ ಕೋರ್ಟ್ ಪರಿಗಣಿಸುತ್ತದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಈ ಮೊದಲು ಹೇಳಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:28 pm, Tue, 23 April 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ