Manish Sisodia: ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಮನೀಶ್ ಸಿಸೋಡಿಯಾಗೆ ಏಪ್ರಿಲ್ 5ರವರೆಗೆ ನ್ಯಾಯಾಂಗ ಬಂಧನ

ತನ್ನ ನ್ಯಾಯಾಂಗ ಬಂಧನದ ಅವಧಿಯಲ್ಲಿ ಕೆಲವು ಧಾರ್ಮಿಕ ಮತ್ತು ಆಧ್ಯಾತ್ಮಿಕ ಪುಸ್ತಕಗಳನ್ನು ಕೊಂಡೊಯ್ಯಲು ಅವಕಾಶ ನೀಡುವಂತೆ ಮನೀಶ್ ಸಿಸೋಡಿಯಾ ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

Manish Sisodia: ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಮನೀಶ್ ಸಿಸೋಡಿಯಾಗೆ ಏಪ್ರಿಲ್ 5ರವರೆಗೆ ನ್ಯಾಯಾಂಗ ಬಂಧನ
ಮನೀಶ್ ಸಿಸೋಡಿಯಾ
Follow us
ರಶ್ಮಿ ಕಲ್ಲಕಟ್ಟ
|

Updated on:Mar 22, 2023 | 3:44 PM

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ(Delhi liquor policy case) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮನೀಶ್ ಸಿಸೋಡಿಯಾ(Manish Sisodia )ಅವರನ್ನು ಏಪ್ರಿಲ್ 5 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ತನ್ನ ನ್ಯಾಯಾಂಗ ಬಂಧನದ(judicial custody) ಅವಧಿಯಲ್ಲಿ ಕೆಲವು ಧಾರ್ಮಿಕ ಮತ್ತು ಆಧ್ಯಾತ್ಮಿಕ ಪುಸ್ತಕಗಳನ್ನು ಕೊಂಡೊಯ್ಯಲು ಅವಕಾಶ ನೀಡುವಂತೆ ಮನೀಶ್ ಸಿಸೋಡಿಯಾ ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಅರ್ಜಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ಅವರಿಗೆ ಹೇಳಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ವಿಶೇಷ ನ್ಯಾಯಾಧೀಶ ಎಂ ಕೆ ನಾಗ್‌ಪಾಲ್ ಅವರು ಸಿಸೋಡಿಯಾ ಅವರನ್ನು ಪ್ರಕರಣದ ಕಸ್ಟಡಿ ವಿಚಾರಣೆಯ ಕೊನೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಹಾಜರುಪಡಿಸಿದ ನಂತರ ಏಪ್ರಿಲ್ 5 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಮನಿ ಲಾಂಡರಿಂಗ್ ವಿರೋಧಿ ತನಿಖಾ ಸಂಸ್ಥೆ  ಸಿಸೋಡಿಯಾ ಅವರನ್ನು ಬಂಧಿಸಿದ ನಂತರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸಿಬಿಐ ತನಿಖೆ ನಡೆಸುತ್ತಿರುವ ಮದ್ಯ ಮಾರಾಟ ನೀತಿ ಪ್ರಕರಣದಲ್ಲಿ ಜಾಮೀನು ಕೋರಿ ಅವರು ಸಲ್ಲಿಸಿದ ಮನವಿಯ ವಿಚಾರಣೆಯನ್ನು ಮಂಗಳವಾರ ವಿಶೇಷ ನ್ಯಾಯಾಲಯವು ಮುಂದೂಡಿದೆ. ಇದೀಗ ಜಾಮೀನು ಅರ್ಜಿಯ ವಿಚಾರಣೆ ಶನಿವಾರ ನಡೆಯಲಿದೆ.

ಈಗ ರದ್ದಾದ ದೆಹಲಿ ಅಬಕಾರಿ ನೀತಿ 2021-22 ರ ಕರಡು ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಫೆಬ್ರವರಿ 26 ರಂದು  ಸಿಸೋಡಿಯಾ ಅವರನ್ನು ಬಂಧಿಸಿತು.ಸಿಬಿಐ ತನಿಖೆ ನಡೆಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮಾರ್ಚ್ 9 ರಂದು ಸಿಸೋಡಿಯಾ ಅವರನ್ನು ತಿಹಾರ್ ಜೈಲಿಗಟ್ಟಿತ್ತು.

ಜಾಮೀನು ಕೋರಿ ಮಾಜಿ ಸಚಿವರು ದೆಹಲಿ ನ್ಯಾಯಾಲಯಕ್ಕೆ ತಮ್ಮ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ನೋಡಿಕೊಳ್ಳಲು ಯಾರೂ ಇಲ್ಲ ಎಂದು ಹೇಳಿದ್ದರು. ಮಗ ವಿದೇಶದಲ್ಲಿ ಓದುತ್ತಿದ್ದು, ಆಕೆಯನ್ನು ನೋಡಿಕೊಳ್ಳುವ ಜವಾಬ್ದಾರಿ ಸಿಸೋಡಿಯಾ ಮೇಲಿದೆ ಎಂದು ಅವರ ವಕೀಲರು ಹೇಳಿದ್ದಾರೆ.

ಜಾಮೀನು ವಿರೋಧಿಸಿದ ಸಿಬಿಐಅವರು ಸರ್ಕಾರದ ಉನ್ನತ ಹುದ್ದೆಯಲ್ಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಅವರು ಸುಲಭವಾಗಿ ಮರೆಮಾಡುವುದು ಮಾತ್ರವಲ್ಲದೆ ನಾಶಪಡಿಸಬಹುದು ಎಂದು ಹೇಳಿದರು.

ದೆಹಲಿ ಅಬಕಾರಿ ನೀತಿ ಪ್ರಕರಣದ ಸಿಬಿಐ ತನಿಖೆಗೆ ಸಹಕರಿಸಿದ್ದು ತನಿಖಾ ಸಂಸ್ಥೆ ನನ್ನ ವಿರುದ್ಧ ಯಾವುದೇ ದೋಷಾರೋಪಣೆಯನ್ನು ಬಹಿರಂಗಪಡಿಸಿಲ್ಲ ಎಂದು ಸಿಸೋಡಿಯಾ ವಾದಿಸಿದರು. ಅವರ ವಕೀಲರು ಅವರ ಕಸ್ಟಡಿ ವಿಚಾರಣೆ ಇನ್ನು ಮುಂದೆ ಅಗತ್ಯವಿಲ್ಲ. ಅವರು ಎಲ್ಲಿಗೂ ಓಡಿ ಹೋಗಲ್ಲ ಎಂದಿದ್ದರು. “ನಾನು ಸಾರ್ವಜನಿಕ ಸೇವಕ, ಆದರೆ ಗಂಭೀರ ಆರೋಪಗಳಿರು ಇತರ ಇಬ್ಬರು ಸಾರ್ವಜನಿಕ ಸೇವಕರನ್ನು ಬಂಧಿಸಲಾಗಿಲ್ಲ. ಸಿಸೋಡಿಯಾ ವಿರುದ್ಧ ಕಿಕ್‌ಬ್ಯಾಕ್ ಪಡೆದ ಯಾವುದೇ ದಾಖಲೆ ಇಲ್ಲ ಪುರಾವೆಗಳಿಲ್ಲ ಎಂದು ದೆಹಲಿಯ ಮಾಜಿ ಉಪಮುಖ್ಯಮಂತ್ರಿಯ ವಕೀಲರು ಹೇಳಿದ್ದಾರೆ.

ಇದನ್ನೂ ಓದಿ:SSLC Exam: ಎಸ್​ಎಸ್​ಎಲ್​ಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪ್ರಯಾಣ ಉಚಿತ

ಸಿಸೋಡಿಯಾ ವಿಮಾನ ಮೂಲಕ ಓಡಿ ಹೋಗದೇ ಇದ್ದರೂ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಮತ್ತು ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿಯಾಗಬಹುದು ಎಂದು ಸಿಬಿಐ ವಾದಿಸಿತು.

ಆಪಾದಿತ ಎಲ್ಲಾ ಅಪರಾಧಗಳು ಪ್ರಕರಣದಲ್ಲಿ ಏಳು ವರ್ಷಗಳಿಗಿಂತ ಕಡಿಮೆ ಅವಧಿಯ ಜೈಲು ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಯಾವುದೇ ಹೆಚ್ಚಿನ ಸೆರೆವಾಸವನ್ನು ಸಮರ್ಥಿಸುವುದಿಲ್ಲ ಎಂದು ಸಿಸೋಡಿಯಾ ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Wed, 22 March 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್